ಧಾರವಾಡ | ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಶಾಸಕ ಯತೀಂದ್ರ

Date:

ಪ್ರಧಾನಿಯವರು ಇಡಿ, ಐಟಿ ಛೂಬಿಟ್ಟು ಕಂಪನಿಗಳಿಂದ ಸುಲಿಗೆ ಮಾಡಿಸಿದ್ದಾರೆ. ಅಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರೆ ದೇಶಕ್ಕೆ ಅದಕ್ಕಿಂತ ದೊಡ್ಡ ದುರಂತ ಬೇರಿಲ್ಲ. ದೇಶದಲ್ಲಿ ಎಲೆಕ್ಟ್ರಾಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆಯನ್ನು ಭ್ರಷ್ಟ ಮಾಡಿದ್ದು, ಅಂಥವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಶಾಸಕ ಯತೀಂದ್ರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು.

- Advertisement -

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಬೇಕು. ಅದಕ್ಕೆ ತಡೆಯಾದ ಸಿಎಂ ಸಿದ್ದರಾಮಯ್ಯ ಅವರನ್ನು ಮೊದಲು ಕೆಳಗಿಳಿಸಿದರೆ ಕಾಂಗ್ರೆಸ್ ಶಕ್ತಿಹೀನವಾಗುತ್ತದೆ ಎಂದು ಅವರ ಮೇಲೆ ಇಡಿ ದಾಳಿ ಮಾಡಿಸಿದ್ದಾರೆ ಎಂದು ಹರಿಹಾಯ್ದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶಾದ್ಯಂತ ಕಾಂಗ್ರೆಸ್ ಆಡಳಿತ ಇರುವ ಮುಖಂಡರ ಮೇಲೆ ಇಡಿ ದಾಳಿ ನಡೆಸಿ ಸರ್ಕಾರಗಳನ್ನು ಅಸ್ಥಿರಗೊಳಿಸುವ ಹುನ್ನಾರ ನಡೆದಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಚನ್ನಪಟ್ಟಣದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷದವರು ಖುರಾನ್ ಪುಸ್ತಕ, ಪ್ರಾರ್ಥನೆಗಾಗಿ ಮ್ಯಾಟ್ ಜೊತೆ ಒಂದು ಸಾವಿರ ರೂ. ಕೊಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ಅಂಥವರು ಉಪ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಈ ರೀತಿ ವಿಪಕ್ಷದವರು ಪ್ರತಿ ಚುನಾವಣೆ ಸಂದರ್ಭದಲ್ಲಿ ಆಪಾದಿಸುವುದು ಸಾಮಾನ್ಯ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...