ಧಾರವಾಡ | ಬೆಳೆಹಾನಿ ಪರಿಹಾರಕ್ಕೆ ಒತ್ತಾಯಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ

Date:

ನಿರಂತರ ಮಳೆಯಿಂದಾಗಿ ಬೆಳೆಹಾನಿ‌‌ ಉಂಟಾಗಿದ್ದು, ಶೀಘ್ರ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಿತ್ತಿ ಫಲಕಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದರು.

- Advertisement -

ಮಾಜಿ ಶಾಸಕ ಅಮೃತ ದೇಸಾಯಿ ಮಾತನಾಡಿ, “ಗ್ರಾಮೀಣ ಭಾಗದ ಮಾರಡಗಿ, ಶಿವಳ್ಳಿ, ಹೆಬ್ಬಳ್ಳಿ ಭಾಗದಲ್ಲಿ ಹಾನಿಯಾದ ಬೆಳೆಯನ್ನು ವೀಕ್ಷಿಸಿದಾಗ ರೈತ ಸಂಕಷ್ಟಕ್ಕೆ ಸಿಲುಕಿರುವುದು ಚಿಂತಾಜನಕವಾಗಿದೆ. ಸತತ ಮಳೆಯಿಂದ ಹೆಸರು, ಉದ್ದು ಸಂಪೂರ್ಣ ಹಾಳಾಗಿದೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಶೀಘ್ರವೇ ಬೆಳೆ‌ಹಾನಿಗೆ ಪರಿಹಾರ ಕೊಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭರವಸೆ ನೀಡಿ ಹದಿನೈದು ದಿನ ಕಳೆದರೂ ಪರಿಹಾರ ದೊರಕಿಲ್ಲ. ಲಾಡ್ ಸಾಹೇಬರು ಮಾತನಾಡುವುದು ಯಾರಿಗೂ ಅರ್ಥವಾಗುವುದಿಲ್ಲ. ನಮ್ಮ ರೈತರಿಗೆ ಪರಿಹಾರ ಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಾಜಿ ಶಾಸಕಿ ಸೀಮಾ ಮಸೂತಿ ಮಾತನಾಡಿ, “ಬಿಜೆಪಿಯು ರೈತರ ಪರವಾಗಿ ಪ್ರತಿಭಟನೆ ನಡೆಸುತ್ತಿದೆ. ನಾವು ಬೆಳೆ ಹಾನಿ‌ ಪರಿಶೀಲನೆ ನಡೆಸಿದಾಗ; ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಅತಿಯಾದ ಮಳೆ ಮತ್ತು ಅತಿವೃಷ್ಠಿಯು ರೈತರ ಬಾಳನ್ನು ದುಸ್ಥಿತಿಗೆ ತಂದಿಟ್ಟಿದೆ. ಹೆಸರು, ಸೋಯಾಬಿನ್, ಉದ್ದು ಬೆಳೆ‌ ನಾಶವಾದಾಗ; ರೈತರಿಗೆ ಏನು ಮಾತನಾಡಬೇಕೆಂದು ತೋಚಲಾರದ ವಾತಾವರಣ ಸೃಷ್ಟಿಯಾಗಿದೆ. ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಒತ್ತಾಯಿಸುತ್ತಾ, ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೆ ಬೆಳೆಹಾನಿ‌ ಪರಿಹಾರ ನೀಡಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಧಾರವಾಡ | ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ, ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...