ವಕ್ಫ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ದ ಸುಳ್ಳು ಆಪಾದನೆ, ಅಪಪ್ರಚಾರ ಮಾಡುತ್ತಿದ್ದಾರೆ ಎಂದು ನವಲಗುಂದ ಶಾಸಕ ಎನ್. ಹೆಚ್. ಕೋನರಡ್ಡಿ ಹೇಳಿದರು.
ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾಮ ಪಂಚಾಯತಿಯ ರಾಜೀವ ಗಾಂಧಿ ಸೇವಾ ಕೇಂದ್ರದ ಉದ್ಘಾಟನೆ ನಂತರ ಮಾತನಾಡಿ, ವಕ್ಪ ಆಸ್ತಿ ಕುರಿತು ಸಿಎಂ ಸಿದ್ದರಾಮಯ್ಯನವರು ರೈತರಿಗೆ ನೀಡಿರುವ ನೋಟಿಸ್ ಹಿಂಪಡೆದಿದ್ದರೂ ಬಿಜೆಪಿ ನಾಯಕರು ಸರ್ಕಾರದ ವಿರುದ್ದ ಸುಳ್ಳು ಆಪಾದನೆ, ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರೈತ ಬಂಡಾಯದ ಹುತಾತ್ಮ ರೈತ ಬಸಪ್ಪ ಲಕ್ಕುಂಡಿ ಸ್ಮಾರಕ ನವೀಕರಣ ಮಾಡಲು ರೈತರು, ಗ್ರಾಮಸ್ಥರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆ ರೂಪಿಸಿ ಕಾಮಗಾರಿ ಪ್ರಾರಂಭಿಸಲು ಸೂಚಿಸಿದರು.
ಗ್ರಾಮದಲ್ಲಿ ಆಶ್ರಯ ಯೋಜನೆ ಜಾರಿ ಮಾಡಲು ಜಮೀನು ಖರೀದಿಸಿದ್ದು ಫಲಾನುಭವಿಗಳಿಗೆ ಆದಷ್ಟು ಬೇಗನೇ ಹಕ್ಕುಪತ್ರ ವಿತರಿಸುವುದು. ರೈತರ ಬೆಳೆ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಸಿದ್ದವಿದೆ ಎಂದರು.
ಈ ವರದಿ ಓದಿದ್ದೀರಾ? ಧಾರವಾಡ | ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೊಲೀಸ್ ಕಾನ್ಸ್‌ಟೇಬಲ್ ವಿರುದ್ಧ ದೂರು ದಾಖಲು
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಶಿವಪ್ಪ ಕುಂಬಾರ, ತಹಶೀಲ್ದಾರ ಸುಧೀರ ಸಾವಕಾರ, ಭಾಗ್ಯಶ್ರೀ ಜಾಗೀರದಾರ, ಎಸ್.ಎನ್. ಸಿದ್ದಾಪೂರ, ಎಂ.ಜಿ. ಶಿಂಧೆ, ಗ್ರಾ.ಪಂ. ಉಪಾಧ್ಯಕ್ಷೆ ತಿಪ್ಪವ್ವ ಹರಣಶಿಕಾರಿ, ಶಂಕರ ಅಂಬಲಿ, ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.