ಧಾರವಾಡ | ಹೆಡ್‌ಲೈಟ್‌ ಕೈಕೊಟ್ಟ ಪರಿಣಾಮ, ಮೊಬೈಲ್ ಬೆಳಕಿನಲ್ಲಿಯೇ ಬಸ್ ಚಾಲನೆ

Date:

ಹುಬ್ಬಳ್ಳಿಯಿಂದ ಅತ್ತಿಗೇರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ನ ಮುಖ್ಯ ಹೆಡ್‌ಲೈಟ್‌ ಕೈಕೊಟ್ಟ ಪರಿಣಾಮ, ಪ್ರಯಾಣಿಕರ ಮೊಬೈಲ್‌ ಫೋನ್‌ಗಳ ಬೆಳಕಿನಲ್ಲೇ ಬಸ್‌ ಚಲಾಯಿಸಿ ಸುರಕ್ಷಿತವಾಗಿ ಗ್ರಾಮಗಳನ್ನು ತಲುಪಿಸಿದ ಘಟನೆ ಇಂದು ಶನಿವಾರ ಕುಂದಗೋಳ ತಾಲೂಕಿನ ಸಂಶಿ-ಗುಡಗೇರಿ ಮಾರ್ಗದಲ್ಲಿ ಇಂದು‌ ನಡೆದಿದೆ.

- Advertisement -

ಹುಬ್ಬಳ್ಳಿಯಿಂದ ರಾತ್ರಿ 8.05ಕ್ಕೆ ಹೊರಟು ಗುಡಗೇರಿಗೆ ರಾತ್ರಿ 9.20ಕ್ಕೆ ತಲುಪಬೇಕಿದ್ದ ಬಸ್, ಸಂಶಿ ಬಸ್‌ ನಿಲ್ದಾಣದ ಸಮೀಪ ಬರುತ್ತಿದ್ದಂತೆ ಮುಖ್ಯ ಹೆಡ್‌ಲೈಟ್ ಬೆಳಗದೆ ಮಾರ್ಗಮಧ್ಯೆಯೇ ಕತ್ತಲಾವರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಆತಂಕಕ್ಕೊಳಗಾದರು. ಸಂಶಿಯಿಂದ ಗುಡಗೇರಿಗೆ ಸಾಮಾನ್ಯವಾಗಿ ಸುಮಾರು 20 ನಿಮಿಷಗಳ ಪ್ರಯಾಣವಿದೆ. ಆದರೆ ಹೆಡ್‌ಲೈಟ್ ಇಲ್ಲದೆ ಕಗ್ಗತ್ತಲಲ್ಲಿ ಸಂಚರಿಸುವ ಪರಿಸ್ಥಿತಿ ಎದುರಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ಮೊಬೈಲ್ ಫೋನ್‌ಗಳ ಟಾರ್ಚ್‌ ಬೆಳಕನ್ನು ಆನ್ ಮಾಡಿ ಚಾಲಕನಿಗೆ ನೆರವಾಗಿದ್ದಾರೆ. ಈ ಬೆಳಕಿನ ಆಸರೆಯಲ್ಲೇ ಚಾಲಕ ಅತ್ಯಂತ ಜಾಗರೂಕತೆಯಿಂದ ಬಸ್ ಚಲಾಯಿಸಿ, ಸುಮಾರು ಒಂದು ಗಂಟೆ ಕಾಲ ಪ್ರಯಾಸಪಟ್ಟು ಪ್ರಯಾಣಿಕರನ್ನು ಸುರಕ್ಷಿತವಾಗಿ ಗುಡಗೇರಿ ತಲುಪಿಸಿದ್ದಾರೆ.

ಗುಡಗೇರಿಯಿಂದ ಮುಂದಿನ ಅತ್ತಿಗೇರಿ ಗ್ರಾಮಕ್ಕೂ ಇದೇ ರೀತಿಯಲ್ಲಿ ಮೊಬೈಲ್ ಫೋನ್‌ಗಳ ಬೆಳಕಿನ ಆಸರೆಯಲ್ಲೇ ಬಸ್ ಚಲಾಯಿಸಿಕೊಂಡು ಹೋಗಬೇಕಾದ ಅನಿವಾರ್ಯತೆ ಎದುರಾಯಿತು ಎಂದು ಬಸ್‌ ಚಾಲಕ ತಿಳಿಸಿದ್ದಾರೆ.

ಇಕ್ಕಟ್ಟಿನ ಪರಿಸ್ಥಿತಿಯಲ್ಲೂ ಸಂಯಮ ಕಳೆದುಕೊಳ್ಳದೆ, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿ ಬಸ್‌ನ್ನು ನಿಧಾನವಾಗಿ ಚಲಾಯಿಸಿ ಸುರಕ್ಷಿತವಾಗಿ ಊರು ತಲುಪಿಸಿದ ಚಾಲಕನ ಕಾರ್ಯಕ್ಕೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...