ಧಾರವಾಡ | ಜಾಮೀನು ರದ್ದತಿ ನ್ಯಾಯದ ಹೋರಾಟಕ್ಕೆ ಸಿಕ್ಕ ಜಯ: ಬಸವರಾಜ ಕೊರವರ

Date:

ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವುದು ನ್ಯಾಯಕ್ಕಾಗಿ ನಡೆಸಿದ ಹೋರಾಟಕ್ಕೆ ಸಿಕ್ಕ ಮಹತ್ವದ ಜಯ ಎಂದು ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ ಹೇಳಿದ್ದಾರೆ.

- Advertisement -

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನ್ಯಾಯಾಂಗ ವ್ಯವಸ್ಥೆಯ ಮೇಲೆ ತಮಗೆ ಆರಂಭದಿಂದಲೂ ನಂಬಿಕೆ ಇತ್ತು. ಇದೀಗ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ನ್ಯಾಯದ ಪರವಾಗಿ ಮೂಡಿದ ಆಶಾದಾಯಕ ಬೆಳವಣಿಗೆಯಾಗಿದೆ. ಅಧಿಕಾರ, ರಾಜಕೀಯ ಪ್ರಭಾವ ಹಾಗೂ ಸ್ಥಾನಮಾನವನ್ನು ಬಳಸಿಕೊಂಡು ಗಂಭೀರ ಅಪರಾಧಗಳಿಂದ ತಪ್ಪಿಸಿಕೊಳ್ಳಬಹುದು ಎಂಬ ಮನೋಭಾವಕ್ಕೆ ಈ ಆದೇಶ ತಕ್ಕ ಉತ್ತರ ನೀಡಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಕೈಯಲ್ಲಿಲ್ಲ. ಬದಲಾಗಿ ಅವು ಲಾಕ್‌ಹೀಡ್, ಬೋಯಿಂಗ್, ಜನರಲ್ ಡೈನಾಮಿಕ್ಸ್‌ನಂತಹ ಖಾಸಗಿ ಕಂಪನಿಗಳ ಸಿಇಒಗಳ ಸಂಪೂರ್ಣ ನಿಯಂತ್ರಣದಲ್ಲಿವೆ... ನಾನು ಬರವಣಿಗೆಯನ್ನೇ ವೃತ್ತಿಯಾಗಿಸಿಕೊಂಡವನು;...

“ವಿನಯ್ ಕುಲಕರ್ಣಿ ಅವರೊಂದಿಗೆ ಪ್ರಕರಣದಲ್ಲಿ ಸಂಬಂಧಿಸಿದ 17 ಸಹಚರರ ಜಾಮೀನನ್ನೂ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಎರಡು ವಾರಗಳೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿರುವುದು ಹೋರಾಟಗಾರರಿಗೆ ಸಂತಸ ತಂದಿದೆ” ಎಂದರು.

“ಧಾರವಾಡ ರಾಜಕೀಯ ವಲಯದಲ್ಲಿ ಇಂತಹ ಬೆಳವಣಿಗೆ ಹಿಂದೆಂದೂ ಕಂಡಿರಲಿಲ್ಲ ಎಂದು ಹೇಳಿದ ಕೊರವರ, ರಾಜಕೀಯ ಪ್ರಭಾವದ ಮೂಲಕ ನ್ಯಾಯ ಪ್ರಕ್ರಿಯೆಯನ್ನು ಎದುರಿಸದೆ ಪಾರಾಗಬಹುದು ಎಂಬ ಆರೋಪಗಳಿಗೆ ನ್ಯಾಯಾಲಯದ ಆದೇಶ ಸ್ಪಷ್ಟ ಸಂದೇಶ ನೀಡಿದೆ” ಎಂದು ಹೇಳಿದರು.

“ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದವು. ಈ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಬಳಿಕ ಶಿಕ್ಷೆ ಅಮಾನತುಗೊಂಡು ಜಾಮೀನು ದೊರೆತಿತ್ತು. ಈ ಬೆಳವಣಿಗೆಯಿಂದ ಶಾಸಕ ಸ್ಥಾನವೂ ಮುಂದುವರಿದಿತ್ತು. ಆದರೆ, ಇದೀಗ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿರುವುದರಿಂದ ಪ್ರಕರಣ ಮತ್ತೊಂದು ಮಹತ್ವದ ಘಟ್ಟ ತಲುಪಿದೆ” ಎಂದು ವಿವರಿಸಿದರು.

“ನ್ಯಾಯಕ್ಕಾಗಿ ಬೀದಿಯಿಂದ ನ್ಯಾಯಾಲಯದವರೆಗೆ ನಡೆಸಿದ ಹೋರಾಟದಲ್ಲಿ ಪಾಲ್ಗೊಂಡ ಎಲ್ಲರಿಗೂ ಈ ತೀರ್ಪು ಸಂತಸ ತಂದಿದೆ. ಆದರೂ ಇದನ್ನೇ ಅಂತಿಮ ಗೆಲುವು ಎಂದು ಪರಿಗಣಿಸುವುದಿಲ್ಲ. ನ್ಯಾಯದ ಹಾದಿಯಲ್ಲಿ ಹೋರಾಟ ಮುಂದುವರಿಯಲಿದ್ದು, ಮುಂದಿನ ನ್ಯಾಯಾಂಗ ಪ್ರಕ್ರಿಯೆಯಲ್ಲಿಯೂ ನ್ಯಾಯ ದೊರೆಯಲಿದೆ” ಎಂಬ ವಿಶ್ವಾಸವಿದೆ ಎಂದು ಬಸವರಾಜ ಕೊರವರ ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್ ಪಾರಾಗಲು ಸಾಧ್ಯವೇ?

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ ಭಯದಲ್ಲಿ ವಿದ್ಯಾರ್ಥಿಗಳು!

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ...

ಧಾರವಾಡ |ಜಾಮೀನು ರದ್ದತಿ ಬೆನ್ನಲ್ಲೇ ಬೆಂಗಳೂರಿನತ್ತ ವಿನಯ್ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ವಿನಯ್ ಕುಲಕರ್ಣಿ...