ರಸ್ತೆ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡದ ಗದಗ ಹುಬ್ಬಳ್ಳಿ ರಸ್ತೆಯಲ್ಲಿ ನಡೆದಿದೆ.
ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಬೆಂಗಳೂರಿನ ವೇಣುಗೋಪಾಲ್ (63) ಹಾಗೂ ಮೈಸೂರಿನ ಸುರೇಶ್ (60) ಹಾಗೂ ಮದನ್ (61) ಎಂದು ಗುರುತಿಸಲಾಗಿದೆ.
ಮೃತರು ಮೈಸೂರು ಹಾಗೂ ಬೆಂಗಳೂರು ಭಾಗದವರೆಂದು ತಿಳಿದುಬಂದಿದೆ. ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ಈ ಘಟನೆ ನಡೆದಿದೆ. ಅಣ್ಣಿಗೇರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.