ಧಾರವಾಡ | ಶರಣರಿಗೆ ಜಾತಿ, ಶ್ರೀಮಂತಿಕೆ, ಬಡತನ ಮುಖ್ಯ ಆಗುವುದಿಲ್ಲ: ಮಲ್ಲಿಕಾರ್ಜುನ ಸ್ವಾಮೀಜಿ

Date:

ಶರಣರಿಗೆ ಜಾತಿ, ಶ್ರೀಮಂತಿಕೆ, ಬಡತನ ಮುಖ್ಯ ಆಗುವುದಿಲ್ಲ, ಮನುಷ್ಯ ಜಾತಿ ಒಂದೇ ಎಂದು ಬದುಕುತ್ತಾರೆ. ಶರಣರು ಸಮಾಜದ ಸಮಾನತೆ ಹಾಗೂ ಸಹೋದರತ್ವದ ಬಾಳನ್ನು ಜೀವಿಸಿದ ಮಹಾನ್ ವ್ಯಕ್ತಿಗಳಾಗಿದ್ದಾರೆ. ಅಪ್ಪಣ್ಣವರ ಸಂದೇಶಗಳನ್ನು ಬಸವಣ್ಣವರು ಚಾಚು ತಪ್ಪದೇ ಪಾಲಿಸುತ್ತಿದ್ದರು ಎಂದು ಮುರುಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮಿಗಳು ಅಭಿಪ್ರಾಯಪಟ್ಟರು.

- Advertisement -

ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದ ಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ನೂರಾರು ವರ್ಷ ಕಳೆದರೂ ಹಡಪದ ಅಪ್ಪಣ್ಣನವರ ವ್ಯಕ್ತಿತ್ವ, ಆದರ್ಶ ಮತ್ತು ಸಮಾಜಕ್ಕೆ ಕೊಟ್ಟ ವಚನ ಸಾಹಿತ್ಯದಿಂದಾಗಿ ಅವರನ್ನೂ ಇಂದಿಗೂ ಸ್ಮರಿಸುವುದು ಅಗತ್ಯವಾಗಿದೆ” ಎಂದು ಹೇಳಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ವಿನಯ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಹಡಪದ ಸಮಾಜವು ಸಣ್ಣ ಸಮುದಾಯವಾಗಿದ್ದರೂ, ದೊಡ್ಡ ಸಂಘಟನೆಯಾಗಿ ಸಮಾಜದಲ್ಲಿ ಬೆಳೆದಿರುವುದು ಸಂತಸದ ಸಂಗತಿ. ಶರಣ ಪರಂಪರೆಯ ಅಗ್ರಗಣ್ಯ ಶರಣ ಹಡಪದ ಅಪ್ಪಣ್ಣ ಕಾಯಕ ಯೋಗಿಯಾಗಿ ಅನೇಕ ಅನುಭವದ ವಚನಗಳನ್ನು ಬರೆದಿದ್ದಾರೆ. ಸಮಾಜದಲ್ಲಿ ವಿವಿಧ ಸಮುದಾಯಗಳ ಜನರು ಇರುವದರಿಂದ ಯಾವುದೇ ರೀತಿಯ ಧರ್ಮ, ಜಾತಿ, ಮತ, ಪಂಥಗಳ ಭೇದವಿಲ್ಲದೇ ಎಲ್ಲರೂ ಸಮಾನರಾಗಿ, ಸಾಮರಸ್ಯದಿಂದ ಬಾಳಬೇಕು” ಎಂದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ ಡಿ ಮಾತನಾಡಿ, “12ನೇ ಶತಮಾನವೆಂದರೆ ಎಲ್ಲ ವಚನಕಾರರು ನೆನಪಾಗುತ್ತಾರೆ. ಯಾವುದೇ ಜಾತಿ, ಧರ್ಮ, ಮತ, ಪಂಥ ಎನ್ನದೆ ಸರ್ವಧರ್ಮ ಸರ್ವಪಾಲು ಎಂದು ಶರಣರೆಲ್ಲ ಜೀವನ ನಡೆಸಿದವರು. ಅವರ ವಚನಗಳು ನಮ್ಮ ಜೀವನಕ್ಕೆ ಧೇಯ್ಯ ವಾಕ್ಯಗಳಾಗಿವೆ” ಎಂದರು.

“ಶರಣರು ಜನಸಾಮಾನ್ಯರ ಜೀವನ ಮಟ್ಟವನ್ನು ಉನ್ನತಗೊಳಿಸುವ ನಿಟ್ಟಿನಲ್ಲಿ ಸೇವಾ ಕಾರ್ಯಗಳನ್ನು ನಡೆಸಿದವರು. ಜನರಲ್ಲಿ ಶ್ರದ್ಧೆ, ನೀತಿ ಮತ್ತು ಶುದ್ಧ ಜೀವನವನ್ನು ಪ್ರಚೋದಿಸಿದರು. ಕರ್ಮ ಮತ್ತು ಭಕ್ತಿಯ ಸಂಯೋಜನೆಯ ಮೂಲಕ ಸಮುದಾಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಹರಡಿಸಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಜು 14 ರಂದು ಸೌಹಾರ್ದ ಸಂಚಾರ, ಮಸೀದಿಯಿಂದ ಚರ್ಚ್ ವರೆಗೆ ಕಾಲ್ನಡಿಗೆ ಜಾಥಾ

ಕಾರ್ಯಕ್ರಮದಲ್ಲಿ ಧಾರವಾಡ ಕೆ ಇ ಬೋರ್ಡ್ ಪ್ರೌಢ ಶಾಲಾ ಶಿಕ್ಷಕ ಸಂಗಮೇಶ ಹಡಪದ ಶಿವಶರಣ ಅವರು ಹಡಪದ ಅಪ್ಪಣ್ಣನವರ ಜೀವನ ಹಾಗೂ ಸಾಮಾಜಕ್ಕೆ ‌ನೀಡಿದ ಅವರ ಕೊಡುಗೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ರವಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...