ಧಾರವಾಡ | ಸಾಮರಸ್ಯಕ್ಕೆ ಹಬ್ಬಗಳ ಆಚರಣೆ ಅಗತ್ಯ: ಡಾ.ರಾಮ್ ಪ್ರಸಾಥ್ ಮನೋಹರ ವಿ.

Date:

Advertisements

ಹೋಳಿ ಹಬ್ಬದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಶನಿವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಾಂಸ್ಕೃತಿಕ, ಸಾಂಪ್ರದಾಯಿಕ ಹೋಳಿ ಆಚರಿಸಿದರು. ಜಾನಪದ ಕಲಾವಿದರು, ಕಲಾತಂಡಗಳು ಮತ್ತು ಸರಕಾರಿ ನೌಕರರು, ಹವ್ಯಾಸಿ ಹಾಡುಗಾರರು ಹೋಳಿ ಹಬ್ಬದ, ಜಾನಪದ ಹಾಗೂ ಭಾವಗೀತೆಗಳನ್ನು ಹಾಡಿದರು. ಪೊಲೀಸ ಆಯುಕ್ತ ಎನ್.ಶಶಿಕುಮಾರ ಹಾಗೂ ಉಪ ಪೊಲೀಸ್ ಆಯುಕ್ತ ರವೀಶ ಸಿ.ಆರ್ ಸೇರಿದಂತೆ ವಿವಿಧ ಅಧಿಕಾರಿಗಳು ಭಾವಗೀತೆ, ಚಲನಚಿತ್ರ ಗೀತೆಗಳನ್ನು ಪ್ರಸ್ತುತಪಡಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ ಆಡಳಿತಾಧಿಕಾರಿ ಡಾ. ರಾಮ್ ಪ್ರಸಾಥ್ ಮನೋಹರ ವಿ. ಅವರು ಮಾತನಾಡಿ, ಜಿಲ್ಲೆಯ ಎಲ್ಲ ಹಿರಿಯ ಅಧಿಕಾರಿಗಳು ಒಂದೆಡೆ ಸೇರಿ, ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ. ಹಬ್ಬ ಹರಿದಿನಗಳ ಆಚರಣೆ ಸಮಯದಲ್ಲಿ ಯಾವ ಬೇದ-ಭಾವಗಳಿಲ್ಲದೆ ಎಲ್ಲರೂ ಬೆರೆಯುವುದರಿಂದ ಸಾಮರಸ್ಯ, ಸರಳತೆ, ಆಪ್ತತೆ ಹೆಚ್ಚುತ್ತದೆ. ನಾವು ಮಾಡುವ ಕರ್ತವ್ಯದಲ್ಲಿ ಧನ್ಯತೆ ಮೂಡುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಉತ್ತರ ಕರ್ನಾಟಕದ ಹೋಳಿ ಹಬ್ಬಕ್ಕೆ ವಿಶೇಷವಾದ ಮಹತ್ವ ಮತ್ತು ಪ್ರಸಿದ್ದಿ ಇದೆ. ಹೋಳಿ ಹಬ್ಬದ ಮೂಲಕ ಕೆಟ್ಟ ಗುಣಗಳನ್ನು ಬಿಟ್ಟು, ಉತ್ತಮವಾದ ಗುಣಗಳನ್ನು ಉಳಿಸಿ, ಬೇಳೆಸಿಕೊಳ್ಳಬೇಕು. ಬಣ್ಣಗಳು ಬದುಕಿನ ಮೌಲ್ಯಗಳ ಸೌಂದರ್ಯ ಮತ್ತು ಶ್ರೀಮಂತಿಕೆಯನ್ನು ತೋರುತ್ತವೆ ಎಂದರು.

Advertisements

ಧಾರವಾಡ ತಾಲೂಕಿನ ಸಾವಿರ ಹಾಡುಗಳ ಸರದಾರಿಣಿ ಮಲ್ಲಮ್ಮ ಕುಂಬಾರ, ನವಲಗುಂದ ತಾಲೂಕಿನ ನಾಗನೂರ ಗ್ರಾಮದ ಭಾವೈಕ್ಯದ ಹಾಡುಗಾರ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಇಮಾಮಸಾಬ ವಲ್ಲೆಪ್ಪನವರ ಮತ್ತು ಕಲಘಟಗಿ ತಾಲೂಕಿನ ಸೂರಶಟ್ಟಿಕೊಪ್ಪದ ಜಾನಪದ ತಜ್ಞ, ದೇಸಿ ಹಾಡುಗಾರ ಕಬ್ಬೇರಗೌಡ ಮರಳಿ ಕಲಾ ತಂಡಗಳೊಂದಿಗೆ ಹೋಳಿ ಹಾಡು, ಉತ್ತರ ಕರ್ನಾಟಕದ ಜಾನಪದ ಹಾಡುಗಳನ್ನು ಸಂಗೀತ ಪರಿಕರದೊಂದಿಗೆ ಹಾಡುಗಳನ್ನು ಪ್ರಸ್ತುತಪಡಿಸಿದರು.

ಸಾಂಸ್ಕೃತಿಕ ಹೋಳಿ ಹಬ್ಬದಲ್ಲಿ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ ಆಯುಕ್ತ ಮಾನಿಂಗ ನಂದಗಾವಿ, ಮಹಾನಗರಪಾಲಿಕೆ ಆಯುಕ್ತ ಡಾ. ರುದ್ರೇಶ ಗಾಳಿ, ಡಿಮಾನ್ಸ್ ಆಡಳಿತಾಧಿಕಾರಿ ಮೇಜರ ಸಿದ್ದಲಿಂಗಯ್ಯ ಹಿರೇಮಠ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಬಿ.ಆರ್.ಟಿ.ಎಸ್. ವ್ಯವಸ್ಥಾಪಕ ನಿರ್ದೇಶಕಿ ಸಾವಿತ್ರಿ ಕಡಿ, ಜಿ.ಪಂ.ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳಾದ ರೇಖಾ ಡೊಳ್ಳಿನವರ, ಡಾ. ಶಶಿ ಪಾಟೀಲ, ಡಾ.ಸುಜಾತಾ ಹಸವೀಮಠ, ಇ.ಇ. ಪ್ರಶಾಂತ ಪಾಟೀಲ, ಎಲ್ಲ ತಹಶಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಸಿಪಿಐ ದಯಾನಂದ, ಸರಕಾರಿ ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ, ನೌಕರ ಸಂಘದ ಪದಾಧಿಕಾರಿಗಳು, ಕಂದಾಯ ನೌಕರ ಸಂಘದ ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಮಹಿಳಾ ಮತ್ತು ಪುರುಷ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X