ಧಾರವಾಡ | ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸಲು ಸಿಇಒ ಸೂಚನೆ

Date:

ಗ್ರಾಮೀಣ ಪ್ರದೇಶದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತು ಉತ್ತಮ ಭವಿಷ್ಯ ರೂಪಿಸುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಗುಣಮಟ್ಟ ಖಚಿತಪಡಿಸುವುದಕ್ಕಾಗಿ, ಹಲವು ಅಂಶಗಳ ವಿಶೇಷ ಕಾರ್ಯ ಯೋಜನೆಯೊಂದನ್ನು ಹಮ್ಮಿಕೊಂಡು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ್ ಪಾಟೀಲ್ ಸೂಚಿಸಿದರು.

- Advertisement -

ಜಿಲ್ಲೆಯ ಶಾಲಾ ಶಿಕ್ಷಣ ಘಟಕಾಂಶ ಸುಧಾರಣೆಯ ಜಿಲ್ಲಾ ಸಮಿತಿ, ಮತ್ತು ಶಾಲಾ ಕಟ್ಟಡ ಸಿವಿಲ್ ಕಾಮಗಾರಿಗಳ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದ ಅವರು, “ನಾಗಾಲೋಟದಲ್ಲಿ ಅಭಿವೃದ್ದಿ ಹೊಂದುತ್ತಿರುವ ತಂತ್ರಜ್ಞಾನದ ಯುಗದಲ್ಲಿ ಕಂಪ್ಯೂಟರ್, ಇಂಟರ್‌ನೆಟ್‌, ಆರ್ಟಿಫಿಷಿಯಲ್ ಇಂಟೆಲಿಜನ್ಸ್‌ ಮುಂತಾದ ವಿಷಯಗಳಲ್ಲಿ ಅಗತ್ಯ ಕೌಶಲಗಳನ್ನು ಗಳಿಸಿಕೊಳ್ಳದಿದ್ದರೆ ಭವಿಷ್ಯದ ದಿನಗಳಲ್ಲಿ ಯುವ ಸಮೂಹ ಉದ್ಯೋಗ ವಂಚಿತವಾಗುವ ಅಪಾಯವಿದೆ. ಸಾಂಘಿಕ ಪ್ರಯತ್ನದಲ್ಲಿ ಮಕ್ಕಳ ಶ್ರೇಯೋಭಿವೃದ್ಧಿ ಸಾಧ್ಯ. ಹೀಗಾಗಿ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರ ಕಡ್ಡಾಯವಾಗಿ ಪಾಲಕರ ಸಭೆ ನಡೆಸಿ, ಇದಕ್ಕಾಗಿ ವಿಶೇಷವಾಗಿ ವಿನ್ಯಾಸಗೂಳಿಸಿದ ನಮೂನೆಗಳಲ್ಲಿ ಪ್ರತಿ ತಿಂಗಳೂ ತಪ್ಪದೇ ಜಿಲ್ಲಾ ಪಂಚಾಯತಿಗೆ ಮಾಹಿತಿ ಸಲ್ಲಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಶಾಲಾ ಶಿಕ್ಷಣ ಸಂಸ್ಥೆಗೆ ಸಿವಿಲ್ ಕಾಮಗಾರಿಗಳ ಕಟ್ಟಡದ ಅನೇಕ ಪ್ರಗತಿ ಹಂತದಲ್ಲಿ ಪಿಡಬ್ಲೂಡಿ ಅಧಿಕಾರಿಗಳು ಕಟ್ಟಡದ ಗುಣಮಟ್ಟ ಹಾಗೂ ವಿಶಾಲ ಕೊಠಡಿ ನಿರ್ಮಾಣಕ್ಕೆ ಗಮನಹರಿಸಬೇಕು. ಶಾಲಾ ಕಟ್ಟಡ ಇಲ್ಲದೇ ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಪಿ ಆರ್ ಇ ಡಿ ಅಧಿಕಾರಿಗಳ ಜೊತೆಗೆ ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಸಮನ್ವಯ ನೀಡಲು ಅಗತ್ಯ ಕ್ರಮ ವಹಿಸಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಶಾಲೆಗಳಲ್ಲಿ ಲಭ್ಯವಿರುವ ಭೌತಿಕ ಸಂಪನ್ಮೂಲ ಹಾಗೂ ಮಾನವ ಸಂಪನ್ಮೂಲವನ್ನು ಅಗತ್ಯತಾನುಸಾರ ಲೆಕ್ಕಿಸಿ ಮರುಹೊಂದಾಣಿಕೆ ಮಾಡುವ ಮೂಲಕ ಮಕ್ಕಳ ಕಲಿಕಾ ಹಕ್ಕುಗಳನ್ನು ಪೋಷಿಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು” ಎಂದು ಸೂಚಿಸಿದರು.

ಇದನ್ನೂ ಓದಿ: ಧಾರವಾಡ | ಬುದ್ಧನ ಅಷ್ಟಾಂಗ ಮಾರ್ಗದಿಂದ ಪರಿವರ್ತನೆ ಸಾಧ್ಯ: ಡಾ. ಸಂಜೀವ ಕುಲಕರ್ಣಿ

ಸಭೆಯಲ್ಲಿ ಉಪಕಾರ್ಯದರ್ಶಿ ಬಿ ಎಸ್ ಮೂಗನೂರ್‌ಮಠ, ಮುಖ್ಯ ಯೋಜನಾ ಅಧಿಕಾರಿ, ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ‌ಸಿಬ್ಬಂದಿಗಳು‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...