ಹುಬ್ಬಳ್ಳಿ ಧಾರವಾಡ ಮಾರ್ಗ ಮಧ್ಯೆ ಚಲಿಸುವ ಚಿಗರಿ ಬಸ್ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಾಳವನ್ನು ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಧಾರವಾಡದ ಟೋಲ್ ನಾಕಾ ಬಳಿ ಕುಡಿದು ನಡೆಯುತ್ತಿದ್ದ ವ್ಯಕ್ತಿಯೊಬ್ಬ ರಸ್ತೆ ದಾಟುವ ಸಂದರ್ಭದಲ್ಲಿ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ಪಾದಚಾರಿಗೆ ತೀವ್ರ ರಕ್ತಸ್ರಾವವಾಗಿದ್ದು, ಜಿಲ್ಲಾ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಬಸ್ ಗೆ ಅಡ್ಡಬಂದ ವ್ಯಕ್ತಿಯು ಕುಡಿದ ಮತ್ತಿನಲ್ಲಿದ್ದು, ಆಸ್ಪತ್ರೆಯಲ್ಲಿ ವೈದ್ಯರಿಗೆ ಸಹಕರಿಸದೇ ಇರುವುದರಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರಬಹುದು ಎಂದು ಅನಿಸುತ್ತಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.
ಈ ವರದಿ ಓದಿದ್ದೀರಾ? ಧಾರವಾಡ | ದೇಶ ಮತ್ತು ರಾಜ್ಯದಲ್ಲಿ ಅರಾಜಕತೆ ಹೆಚ್ಚಾಗಿದೆ: ಡಾ. ಚಂದ್ರ ಪೂಜಾರಿ
ಈ ಕುರಿತು ಧಾರವಾಡ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.