ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಮೃತಪಟ್ಟಿರುವ ದುರ್ಘಟನೆ ಗಾಂಧಿ ನಗರದಲ್ಲಿ ನಡೆದಿದೆ.
ಮೃತಪಟ್ಟಿರುವ ವ್ಯಕ್ತಿ ರಾಜಸ್ತಾನ ಮೂಲದವರಾಗಿದ್ದು, ವಿಜಯ್ ದಾನ್ ಎಂದು ಗುರುತಿಸಲಾಗಿದೆ. ವಿಜಯ್ ದಾನ್ ನಗರದ ಜೆಎಸ್‌ಎಸ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಧಾರವಾಡದ ಗೋವನಕೊಪ್ಪದಲ್ಲಿ ವಾಸವಾಗಿದ್ದರು. ಚಿಗರಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ವಿಜಯ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾಗಲೇ ಮೃತಪಟ್ಟಿದ್ದಾರೆ.
ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.