ಧಾರವಾಡ | ಮಕ್ಕಳಲ್ಲಿ ಮೊಬೈಲ್‍ಗಿಂತ ಮುಖ್ಯವಾಗಿ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕಿದೆ: ಸಂಜು ಧುಮುಕನಾಳ

Date:

Advertisements

ಮಕ್ಕಳಲ್ಲಿ ಮೊಬೈಲ್‍ಗಿಂತ ಮುಖ್ಯವಾಗಿ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕಿದೆ. ಮೊಬೈಲ್‍ನಿಂದ ಉಂಟಾಗುವ ಕೆಟ್ಟ ಪರಿಣಾಮಗಳನ್ನು ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಕರ್ನಾಟಕ ಸಂಗ್ರಾಮ ಸೇನೆ ರಾಜ್ಯಾಧ್ಯಕ್ಷ ಸಂಜು ಧುಮುಕನಾಳ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕುಂಕೂರು ಗ್ರಾಮದಲ್ಲಿ ಕರ್ನಾಟಕ ಸಂಗ್ರಾಮ ಸೇನೆ, ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಪ್ರಯುಕ್ತದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೊಬೈಲ್‌ನಿಂದ ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳು ಕಡಿಮೆಯಾಗುತ್ತಿವೆ. ನಮ್ಮ ಕೆಲಸ ಕಡಿಮೆ ಆಗಿದ್ದಾವೆ. ಚಿಂತನೆ ಹೆಚ್ಚಾಗಿವೆ. ನಮ್ಮ ಬದುಕಿನ ಜೊತೆಗೆ ಆಟ ಮತ್ತು ನಮ್ಮ ಸಂಸ್ಕೃತಿ ಉಳಿಸುವಲ್ಲಿ ಕಾರ್ಯ ಮಾಡಬೇಕು. ಜನಪದ ಸಂಸ್ಕೃತಿಯನ್ನು ಪುನಃ ಜಾರಿಗೆ ತರಬೇಕಿದೆ. ಮಕ್ಕಳಿಗೆ ಮೊಬೈಲ್‍ಗಿಂತ ಮುಖ್ಯವಾಗಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಪಾಲಕರು ಬೆಳೆಸಬೇಕಿದೆ ಎಂದರು.

ಕುಂದಗೋಳ ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೋಕೇಶ ಸರಾವರಿ ಮಾತನಾಡಿ, ಶಿಕ್ಷಕರೆಂದರೆ ಮೊದಲಿನಂತಿಲ್ಲ. ಮೊದಲು ಶಿಕ್ಷಕರೆಂದರೆ ಅಪಾರ ಗೌರವ ಕೊಡುತ್ತಿದ್ದರು. ಆದರೆ; ಇತ್ತೀಚಿನ ದಿನಗಳಲ್ಲಿ ಶಿಕ್ಷಕ ಎಂದರೆ ನಮ್ ಫ್ರೇಂಡ್ ಎನ್ನುತ್ತಾರೆ. ಇನ್ನು ಶಿಕ್ಷಕವೃತ್ತು ಅಂದುಕೊಂಡಷ್ಟು ಸುಲಭವಿಲ್ಲ. ಎಲ್ಲವನ್ನೂ ನಿಭಾಯಿಸಿಕೊಂಡು ಸಾಗುತ್ತಾರೆ. ವಿದ್ಯಾರ್ಥಿಗಳು ಶಿಕ್ಷಕರಿಗೆ ಮೊದಲು ಗೌರವಿಸುವುದನ್ನು ಕಲಿಯಬೇಕು. ಗುರುವಿಗ ಬಹಳ ಮಹತ್ವವಿದೆ. ಅದು ಇತ್ತೀಚೆಗೆ ಕಡಿಮೆಯಾಗುತ್ತಿದೆ ಎನಿಸುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಕಳ್ಳರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು; ವಿಡಿಯೋ ವೈರಲ್!

ಗ್ರಾಮಸ್ಥರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯೆ ಭವಾನಿ ಮೊಗೆರ್, ಸೀಮಾ, ಸುನಿತಾ, ಸುಮಂಗಲ, ಮಂಜುನಾಥ್, ಪಕ್ಕಿರೇಶ್ ಶಿಕ್ಷಕರಿಗೆ ಕರ್ನಾಟಕ ಸಂಗ್ರಾಮ ಸೇನೆಯ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ ಮಂಜುನಾಥ್ ದೊಡ್ಡಮನಿ, ಮಹಿಳಾ ಜಿಲ್ಲಾಧ್ಯಕ್ಷೆ ರತ್ನ ಗಿಡ್ಡಿವೀರಣ್ಣರ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಮಹಾದೇವಿ ವಿವೇಕಿ, ತಾಲೂಕ ಅಧ್ಯಕ್ಷ ಹಸನ್ ಸಾಬ್, ಉಪಾಧ್ಯಕ್ಷ ಪರಮೇಶ್ ವಾಲಿಕಾರ್, ಗೌರವ ಅಧ್ಯಕ್ಷ ಗೋವಿಂದ್ ರಾವ್ ದೇಶ್ಪಾಂಡೆ, ಕಾರ್ಯದರ್ಶಿ ಮಲ್ಲಿಕಾರ್ಜುನ್ ವೀರಪ್ಪನವರ, ಸದಸ್ಯರಾದ ರಮೇಶ್ ಕುಂಬಾರ, ವಿರೂಪಾಕ್ಷ ಹೂಗಾರ, ರಾಘವೇಂದ್ರ ಇಚ್ಚಂಗಿ, ಫಕ್ರುಸಾಬ್ ನದಾಫ್, ಮಹೇಶ್ ಗೌಡರ ಹಾಗೂ ಗ್ರಾಮದ ಸಮಸ್ತ ಹಿರಿಯರು, ಯುವಕರು, ವಿದ್ಯಾರ್ಥಿಗಳು, ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X