ಧಾರವಾಡ | ಮಕ್ಕಳು ಕವನ ರಚನೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು: ಶಶಿಧರ್ ತೋಡ್ಕರ್

Date:

ಮಕ್ಕಳು ಕವನ ರಚನೆಯಲ್ಲಿ ಆಸಕ್ತಿ ಬೆಳಸಿಕೊಳ್ಳಬೇಕು. ತಮ್ಮ ಕವನಗಳನ್ನು ಪ್ರಸ್ತುತಪಡಿಸಿ ಸ್ಪರ್ಧೆಗಳಲ್ಲಿ ಭಾಗವಹಿಸಬೇಕೆಂದು ಪ್ರಾಚಾರ್ಯ ಶಶಿಧರ್ ತೋಡ್ಕರ್ ಕರೆ ಕೊಟ್ಟರು.

- Advertisement -

ಹಿರೇಮಲ್ಲೂರು ಶ್ರೀನಿವಾಸನ್ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಅಕಾಡೆಮಿ ಏರ್ಪಡಿಸಿದ್ದ ತ್ರಿಭಾಷಾ ಕವಿಗೋಷ್ಟಿಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ಮಕ್ಕಳು ಚಿಕ್ಕಂದಿನಿಂದಲೇ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಸಣ್ಣಪುಟ್ಟ ಕವನಗಳನ್ನು ರಚಿಸಿ ಪ್ರಸ್ತುತಪಡಿಸಬೇಕು. ಪಾಲಕರು ಮಕ್ಕಳ ವಿವೇಚನೆಗೆ, ಆಸಕ್ತಿಗೆ ತಕ್ಕಂತೆ ಅವರಿಗೆ ಮಾರ್ಗದರ್ಶನ ನೀಡುತ್ತ ಹೋದರೆ ಮಕ್ಕಳ ಯಶಸ್ಸು ಶತಸಿದ್ದ” ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಿ ಯು ಬೆಳ್ಳಕ್ಕಿ ಮಾತನಾಡಿ, “ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಕವನ ರಚಿಸಲು ಪ್ರೋತ್ಸಾಹ ಕೊಟ್ಟು ಹುರಿದುಂಬಿಸಬೇಕು. ಆಗ ಮಾತ್ರ ಮಕ್ಕಳ ಭವಿಷ್ಯ ಭವ್ಯವಾಗಲು ಸಾಧ್ಯವಾಗುತ್ತದೆ. ಹೆಚ್ಚೆಚ್ಚು ಸಾಹಿತ್ಯಾಸಕ್ತಾರಾಗಲು ಅವರನ್ನು ನಿರಂತರ ಪ್ರೋತ್ಸಾಹಿಸಬೇಕು” ಎಂದರು.

ಸ್ಪರ್ಧೆಯಲ್ಲಿ ನಿರ್ಣಾಯಕರಾಗಿ ಹಿಂದಿ ಭಾಷೆಗೆ ಯು ಎಫ್ ಹುಂಡೆಕಾರ್, ಇಂಗ್ಲಿಷ್ ಭಾಷೆಗೆ ಪ್ರೊ ಇರ್ಷಾದ್ ಹುಲ್ಗೋಲ್ ಹಾಗೂ ‌ಕನ್ನಡ ಭಾಷೆಗೆ ಉಮೇಶ್ ಮನವಳ್ಳಿ ಆಗಮಿಸಿದ್ದರು. ಅಕಾಡೆಮಿಯ ಕಾರ್ಯದರ್ಶಿ ಡಾ. ಎಮ್ ವೈ ಸಾವಂತ್ ಅತಿಥಿಗಳನ್ನು ಸ್ವಾಗತಸಿ ಪರಿಚಯಿಸಿದರು. ಡಾ ಎನ್ ಬಿ ನಾಲತವಾಡ ಕಾರ್ಯಕ್ರಮ ನಿರೂಪಣೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಆರು ಮಕ್ಕಳಿಗೆ ಅಂಗಾಂಗ ದಾನ; ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಕಾರ್ಯಕ್ರಮದಲ್ಲಿ ಅಕಾಡೆಮಿ ಸದಸ್ಯ ಡಾ. ಮಳೆಕರ್, ಡಾ. ಹಿರೇಮಠ, ಶಿಕ್ಷಕರು, ಪಾಲಕರು ಮತ್ತು ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದ್ದರು.

ವಿಜೇತರ ಯಾದಿ: ಕನ್ನಡ ಭಾಷೆಯಲ್ಲಿ: ಸ್ಪೂರ್ತಿ ತಿಮ್ಮಾಪುರ್, ಶ್ರೇಯಾ ಕುರಿಯವರ, ರೇವತಿ ಅಮೀನಭಾವಿ ಹಾಗೂ ಪ್ರಥಮ್ ಕುಲಕರ್ಣಿ. ಇಂಗ್ಲಿಷ್ ಭಾಷೆಯಲ್ಲಿ: ಅನುಪಮಾ ದೇಸಾಯಿ, ಸೃಷ್ಟಿ ಮುತ್ತಣ್ಣವರ್, ಶಮಂತಿಕಾ ಅಗಡಿ ಮತ್ತು ಶ್ರೇಯಾ ಬಾಗೋಡಿ. ಹಿಂದಿ ಭಾಷೆಯಲ್ಲಿ: ದಿಶಾ ಬೆಳವಟ್ಟಿ, ರಮಿತ್ ಕೃಷ್ಣ ಅನ್ವೇಕರ್, ಪ್ರಜ್ವಲ್ ಹಲಕಟ್ಟಿ ಎಸ್‌ ವಿ ವರ್ಮಾ, ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ್ ಬಹುಮಾನಗಳನ್ನು ಪಡೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...