ಧಾರವಾಡ | ಬೀದಿ ನಾಯಿಗಳ ಸರ್ವೆ, ಸಂತಾನ ನಿಯಂತ್ರಣ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

Date:

Advertisements

ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆ ಕಾರ್ಯವನ್ನು 15 ದಿನದೊಳಗಾಗಿ ಆರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪ್ರಾಣಿ ಸಂತಾನ ನಿಯಂತ್ರಣ ಮೇಲ್ವಿಚಾರಣೆ ಮತ್ತು ಅನುಷ್ಠಾನ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾಲಿಕೆಯ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಸಮೀಕ್ಷೆ ಸರಕಾರೇತರ ಸಂಘ ಸಂಸ್ಥೆಗಳ ಮೂಲಕ ಅವೈಜ್ಞಾನಿಕವಾಗಿ ನಡೆಯುತ್ತಿದೆ. ಸಾರ್ವಜನಿಕರ ಹಾಗೂ ಪ್ರಾಣಿಗಳ ಸುರಕ್ಷತೆ ದೃಷ್ಟಿಯಿಂದ ಪ್ರಾಮಾಣಿತ ಕಾರ್ಯಾಚರಣೆ ವಿಧಾನ (ಸ್ಟಾಂಡರ್ಡ ಆಪರೇಟಿಂಗ್ ಪ್ರೋಸಿಜರ್) ಪ್ರಕಾರ ನುರಿತ ತಜ್ಞರಿಂದ ಸಮೀಕ್ಷೆ ಕೈಗೊಳ್ಳಬೇಕೆಂದು ಸೂಚಿಸಿದರು.

2018 ರ ಸಮೀಕ್ಷೆ ಪ್ರಕಾರ ಅವಳಿ ನಗರಗಳಲ್ಲಿ 26 ಸಾವಿರ ಹಾಗೂ ಜಿಲ್ಲೆಯಾದ್ಯಂತ 50 ಸಾವಿರ ಬೀದಿ ನಾಯಿಗಳು ಇರಬಹುದು ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಪಾಲಿಕೆಯಿಂದ ನಾಯಿಗಳ ಸರ್ವೆ ಹಾಗೂ ಸಂತಾನ ಚಿಕಿತ್ಸೆಗೆ ಅಗತ್ಯ ವೈಜ್ಞಾನಿಕ ಪದ್ಧತಿಯ ವಿವರಗಳನ್ನು ಟೆಂಡರ್‌ನಲ್ಲಿ ನಮೂದಿಸತಕ್ಕದ್ದು. ಸೂಕ್ತ ಸಂಘ-ಸಂಸ್ಥೆಗಳ ಹಾಗೂ ತಜ್ಞರ ಜೊತೆ ಚರ್ಚಿಸಿ ಸೂಕ್ತ ನಿಗಾವಹಿಸಿ ಒಂದು ವರ್ಷದೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸಬಹುದು ಎಂದು ತಿಳಿಸಿದರು.

Advertisements

ಜಿಲ್ಲೆಯ ನಗರ ಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಹಾಗೂ ಗ್ರಾಮ ಪಂಚಾಯತಿಗಳಲ್ಲಿಯೂ ಸಹ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಸಮೀಕ್ಷೆ ಹಾಗೂ ಸಂತಾನ ಚಿಕಿತ್ಸೆ ಕೈಗೊಳ್ಳಬೇಕು. ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಸೂಚಿಸಿದ ರೀತಿಯಲ್ಲಿ ನಾಯಿಗಳ ಗಣತಿಯನ್ನು ನಡೆಸತಕ್ಕದ್ದು. ಪ್ರಾಣಿ ಜನನ ನಿಯಂತ್ರಣ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲು ನಾಯಿಗಳ ಸಂಖ್ಯೆಗೆ ಅನುಗುಣವಾಗಿ ಅವಶ್ಯಕ ಮೂಲ ಸೌಕರ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳುವುದು. ಕನಿಷ್ಠ 70 ಪ್ರತಿಶತದಷ್ಟು ನಾಯಿಗಳ ಜನನ ನಿಯಂತ್ರಣವನ್ನು ಹಂತ ಹಂತವಾಗಿ ಕೈಗೊಳ್ಳಬೇಕು ಎಂದು ಹೇಳಿದರು.

ಬೀಡಾಡಿ ದನಗಳ ಬಗ್ಗೆ ಸಹ ಕ್ರಮ ವಹಿಸುವಂತೆ, ಬೀಡಾಡಿ ದನಗಳನ್ನು ಗೋಶಾಲೆಗೆ ಸೇರಿಸಿ ದಂಡ ವಿಧಿಸುವ ಕ್ರಮದ ಬಗ್ಗೆ ಮಾಲೀಕರಲ್ಲಿ ಅರಿವು ಮೂಡಿಸುವಂತೆ ಮಾಡಬೇಕು. ಅವಳಿ ನಗರಗಳಲ್ಲಿ ಈ ಬಗ್ಗೆ ಧ್ವನಿವರ್ಧಕಗಳ ಮೂಲಕ ವ್ಯಾಪಕ ಪ್ರಚಾರ ನೀಡುವಂತೆ ತಿಳಿಸಿದರು.

ಧಾರವಾಡ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 27, 2024 ರವರೆಗೆ ರೇಬಿಸ್ ನಿರ್ಮೂಲನಾ ದಿನಾಚರಣೆಯನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಮ್ಮಿಕೊಂಡಿದ್ದು, ಉಚಿತವಾಗಿ ಸಾಕು ಹಾಗೂ ಬೀದಿ ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಲಾಗುವುದು. ಜಿಲ್ಲೆಯ ಎಲ್ಲ ನಗರ, ಪಟ್ಟಣ, ಗ್ರಾಮ ಸ್ಥಳೀಯ ಸಂಸ್ಥೆಗಳು ಪಶುಪಾಲನಾ ಇಲಾಖೆಯ ಸಹಯೋಗದಲ್ಲಿ ಬೀದಿನಾಯಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ರೇಬಿಸ್ ರೋಗ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X