ಧಾರವಾಡ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Date:

ರಾಜ್ಯಪಾಲರ ನಡೆ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಜಿಲ್ಲೆಯ ಎಲ್ಲ ಕಾಂಗ್ರೆಸ್ ಮುಖಂಡರು, ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

- Advertisement -

ನವಲಗುಂದ ಶಾಸಕ ಎನ್.ಎಚ್.ಕೋನರಡ್ಡಿ ಮಾತನಾಡಿ, 2020ರಲ್ಲಿ ಬಿಜೆಪಿಯವರು ಮುಡಾ ಹಗರಣ ಮಾಡಿದ್ದಾರೆ.‌ ಸಿದ್ಧರಾಮಯ್ಯನವರು ಬಡವರ ಪರವಾಗಿ ಯೋಜನೆಗಳ ತಂದ ಕಾರಣ ಅವರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಹೂಡಿರುವ ಬಿಜೆಪಿಗೆ ಸಿಎಂ ಪರ ಇಡೀ ರಾಜ್ಯವೆ ಇದೆ ಎಂಬುದನ್ನು ಅರ್ಥವಾಗಿಸಲು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಯಾವುದೇ ಕಾರಣಕ್ಕೂ ಸಿದ್ಧರಾಮಯ್ಯನವರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಮುಖ್ಯಮಂತ್ರಿಗಳ ಬಗ್ಗೆ ಮಾತನಾಡಿರುವುದು ಖಂಡನೀಯ ಹಾಗೂ ಅವರ ನಾಲಿಗೆ ಮೇಲೆ ಹಿಡಿತವಿರಲಿ” ಎಂದು ಕೆಂಡಕಾರಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾತನಾಡಿ, ಕಳೆದ ವರ್ಷದ ಬರಗಾಲದಲ್ಲಿ ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಸಹಿತ ಪರಿಹಾರ ಸಿಗದ ಸಂದರ್ಭದಲ್ಲಿ ಸಿದ್ಧರಾಮಯ್ಯನವರ ಮೂಲಕ ಜನರಿಗೆ ಬರಗಾಲ ಪಿಹಾರ ಸಿಕ್ಕ ಪರಿಣಾಮ‌ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಮುಜುಗರ ಉಂಟಾಯಿತು. ಹೀಗಾಗಿ ಸಿದ್ಧರಾಮಯ್ಯನವರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಮತ್ತು ಇವತ್ತಿನವರಗೂ ಬಿಜೆಪಿಯವರು ಮುಡಾ ಹಗರಣದ ಬಗ್ಗೆ ಒಂದೇ ಒಂದು ದಾಖಲೆಯನ್ನೂ ಹೊರತಂದಿಲ್ಲ. ಸಿಎಂ ಪರವಾಗಿ ರಾಜ್ಯದ ಇಡೀ ಶೋಷಿತ ಮತ್ತು ಅಹಿಂದ ವರ್ಗ ಬೆನ್ನೆಲುಬಾಗಿದೆ. ಬಿಜೆಪಿ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ಹೂಡಿದರೂ ನಾವೆಲ್ಲ ಸಿದ್ಧರಾಮಯ್ಯನವರ ಪರ ಎದ್ದು ನಿಲ್ಲುತ್ತೇವೆ” ಎಂದು ಗುಡುಗಿದರು.

ಇದನ್ನು ಓದಿದ್ದೀರಾ? ಉಡುಪಿ | ನಾರಾಯಣ ಗುರುಗಳ ಸಂದೇಶ ಮಾನವ ಕುಲಕ್ಕೆ ಬಹುದೊಡ್ಡ ಕೊಡುಗೆ: ಚಂದ್ರಹಾಸ ಕಾಪು

ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು, ಮುಖಂಡರು, ವಕ್ತಾರರು, ಕಾರ್ಯಕರ್ತರು, ಸಿದ್ಧರಾಮಯ್ಯ ಅಭಿಮಾನಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...