ಧಾರವಾಡ ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ 47 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಧಾರವಾಡ 25, ಕಲಘಟಗಿ 07, ಹುಬ್ಬಳ್ಳಿ ನಗರ-10, ಹುಬ್ಬಳ್ಳಿ-03 ಮತ್ತು ಕುಂದಗೋಳದಲ್ಲಿ 02 ಮನೆಗಳಿಗೆ ಹಾನಿಯಾಗಿದ್ದು, ಯಾವುದೇ ಮಾನವ ಮತ್ತು ಜಾನುವಾರು ಹಾನಿಯಾಗಿಲ್ಲ ಎಂದು ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ.
ಇದನ್ನು ಓದಿದ್ದೀರಾ? ಆಧಾರರಹಿತ ಮತ್ತು ಸುಳ್ಳು : ಧರ್ಮಸ್ಥಳ ಬೆಳವಣಿಗೆ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಬೆಳೆ ನಷ್ಟ ಕುರಿತು ನಡೆಯುತ್ತಿರುವ ಜಂಟಿ ಸಮೀಕ್ಷೆ ಪ್ರಗತಿಯಲ್ಲಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

