ಧಾರವಾಡ | ಠೇವಣಿ ಹಣ ಮರಳಿಸದ ಕೋ-ಆಪರೇಟಿವ ಸೊಸೈಟಿಗೆ ದಂಡ ವಿಧಿಸಿ, ಪರಿಹಾರಕ್ಕೆ ಆದೇಶ

Date:

ಒಂದೇ ಕುಟುಂಬದ ಠೇವಣಿ ಹಣವನ್ನು ವಾಪಸ್ ಕೊಡದ ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ ಸೊಸೈಟಿಗೆ ಜಿಲ್ಲಾ ಗ್ರಾಹಕರ ಆಯೋಗಯು ದಂಡ ವಿಧಿಸಿ, ಠೇವಣಿದಾರರಿಗೆ ಪರಿಹಾರ ನೀಡಲು ಆದೇಶ ಹೊರಡಿಸಿದೆ.

- Advertisement -

ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಕಿತ್ತೂರುರಾಣಿ ಚೆನ್ನಮ್ಮ ಕೋ-ಆಪರೇಟಿವ ಸೊಸೈಟಿಯಲ್ಲಿ 2023-24 ರ ಸಾಲಿನಲ್ಲಿ ನಗರದ ಸೆಂಟ್ರಲ್‍ ಎಕ್ಸೈಸ್ ಕಾಲೋನಿಯ ನಿವಾಸಿಗಳಾದ ಅಶೋಕ ಮತ್ತು ರೇಖಾ ಅನ್ವೇಕರ್ ಹಾಗೂ ಸುಮಾ ಮತ್ತು ಅವರ ಮಗಳು ನಿಸ್ಮಿತಾ ವಿಠ್ಠಲಕರ ಎಂಬುವವರು ತಲಾ ರೂ:13 ಲಕ್ಷ, ರೂ:5,50,000, ರೂ:14,50,000 ಹಾಗೂ ರೂ:3,50,000 ಮೊತ್ತದಲ್ಲಿ ಇಟ್ಟಿದ್ದ ಠೇವಣಿಗಳ ಅವಧಿ ಮುಕ್ತಾಯವಾಗಿದ್ದವು. ಕೆಲವೊಂದು ಮುಂದಿನ ವರ್ಷದಲ್ಲಿ ಮುಕ್ತಾಯವಾಗುತ್ತಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ದೂರುದಾರರು ಸೊಸೈಟಿಯ ವ್ಯವಹಾರಿಕ ತೊಂದರೆಗಳನ್ನು ಅರಿತು ತಮ್ಮ ಎಲ್ಲ ಠೇವಣಿ ಹಣ ಮರಳಿಸುವಂತೆ ಕೋಆಪರೇಟಿವ್ ಸೊಸೈಟಿಗೆ ಸಾಕಷ್ಟು ಸಲ ಕೇಳಿಕೊಂಡಿದ್ದರೂ ಠೇವಣಿ ಹಣವನ್ನು ಕೊಡದೆ ತಮಗೆ ಮೋಸ ಮಾಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆ ಎಂದು ಹೇಳಿ ಸೊಸೈಟಿಯವರ ಮೇಲೆ ಕ್ರಮಕೈಗೊಂಡು ತಮ್ಮ ಠೇವಣಿ ಹಣ ಮರುಪಾವತಿಸುವಂತೆ ಮತ್ತು ತಮಗಾದ ತೊಂದರೆ ಮತ್ತು ಮಾನಸಿಕ ಹಿಂಸೆಗೆ ಪರಿಹಾರ ಕೊಡಿಸಬೇಕೆಂದು ಜಿಲ್ಲಾ ಗ್ರಾಹಕರ ಆಯೋಗಕ್ಕೆ ಜುಲೈ 9ರಂದು ದೂರುಗಳನ್ನು ಸಲ್ಲಿಸಿದ್ದರು.

ದೂರುದಾರರು ಠೇವಣಿ ರೂಪದಲ್ಲಿ ಇಟ್ಟಂತಹ ಹಣವನ್ನು ಎದುರುದಾರರು ತಮ್ಮ ಸೊಸೈಟಿಯ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡಿರುವುದು ಕಂಡುಬರುತ್ತದೆ. ಅಲ್ಲದೆ ದೂರುದಾರರಿಗೆ ಹಣದ ಅವಶ್ಯಕತೆ ಇದ್ದು ಅದನ್ನು ಎದುರುದಾರರು ಮರಳಿಸದೆ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆಯಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ಆಯೋಗ ತೀರ್ಪು ನೀಡಿದೆ.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಸೌಹಾರ್ದತೆಗೆ ಸಾಕ್ಷಿಯಾದ ಈದ್ ಮಿಲಾದ್; ಹಬ್ಬದಲ್ಲಿ ವಿವಿಧ ಧರ್ಮಿಯರು ಭಾಗಿ

ಠೇವಣಿ ಇಟ್ಟ ದಿನಾಂಕಗಳಿಂದ ಬಡ್ಡಿಯೊಂದಿಗೆ ಲೆಕ್ಕ ಹಾಕಿ ದೂರುದಾರರಿಗೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಹಿಂದಿರುಗಿಸಬೇಕು. ಜೊತೆಗೆ ಸೇವಾ ನ್ಯೂನ್ಯತೆಯಿಂದ ದೂರುದಾರರಿಗೆ ಆಗಿರುವ ಅನಾನುಕೂಲ, ತೊಂದರೆ ಹಾಗೂ ಮಾನಸಿಕ ಹಿಂಸೆಗೆ ತಲಾ ರೂ.50,000 ಪರಿಹಾರ ಹಾಗೂ ತಲಾ ರೂ.10,000 ಪ್ರಕರಣದ ಖರ್ಚು ವೆಚ್ಚ ನೀಡಲು ಎದುರುದಾರರಿಗೆ ಆಯೋಗವು ತೀರ್ಪಿನಲ್ಲಿ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...