ಧಾರವಾಡ | ಪಾಲಿಕೆ ಆಯುಕ್ತರು ಬಿಜೆಪಿಯ ಕೈಗೊಂಬೆಯಾಗಿದ್ದಾರೆ; ವಿಪಕ್ಷ ಕಾಂಗ್ರೆಸ್‌ ಆರೋಪ

Date:

ಪಾಲಿಕೆ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದವರಿಗೆ ಚರ್ಚೆಗೆ ಅವಕಾಶ ನೀಡಲಾಗುತ್ತಿಲ್ಲ. ವಿಷಯ ಪಟ್ಟಿಯಲ್ಲಿನ ಅಂಶಗಳನ್ನು ಚರ್ಚಿಸದೆ, ಏಕಪಕ್ಷೀಯವಾಗಿ ಅನುಮೋದಿಸಲಾಗಿದೆ ಎಂದು ಆರೋಪಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ವಿಪಕ್ಷ ಕಾಂಗ್ರೆಸ್‌ ಸದಸ್ಯರು ಸಭಾತ್ಯಾಗ ಮಾಡಿ, ಪ್ರತಿಭಟನೆ ನಡೆಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಪಾಲಿಕೆ ವಿರೋಧ ಪಕ್ಷದ ನಾಯಕಿ ಸುವರ್ಣಾ ಕಲ್ಲಕುಂಟಲಾ, “ಕಟ್ಟಡ ತೆರಿಗೆ ಶೇ.20ಕ್ಕೆ ಹೆಚ್ಚಿಸುವುದನ್ನು ವಿರೋಧಿಸಿದ್ದೇವೆ. ಪ್ರತಿ ವರ್ಷ ಈ ತೆರಿಗೆ ಹೆಚ್ಚಿಸದೆ, ಐದು ವರ್ಷಕ್ಕೊಮ್ಮೆ ಏರಿಸಬೇಕು ಎಂದು ಪ್ರಸ್ತಾಪಿಸಲು ಅವಕಾಶವನ್ನೇ ನೀಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“15ನೇ ಹಣಕಾಸು ಆಯೋಗದಲ್ಲಿ ಪಾಲಿಕೆಗೆ ₹43 ಕೋಟಿ ಅನುದಾನ ಮಂಜೂರಾಗಿದೆ. ಈ ಅನುದಾನವನ್ನು ಯಾವ್ಯಾವುದಕ್ಕೆ ಬಳಕೆ ಮಾಡಲಾಗುವುದು ಎಂದು ವಿರೋಧ ಪಕ್ಷದವರ ಜತೆ ಚರ್ಚಿಸಿಲ್ಲ. ಆಡಳಿತ ಪಕ್ಷ ಬಿಜೆಪಿಯವರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ” ಎಂದು ದೂರಿದರು.

“ಚರ್ಚೆಗೆ ಅವಕಾಶ ನೀಡದೆ ಏಕಪಕ್ಷೀಯವಾಗಿ ವಿಷಯಗಳನ್ನು ಅನುಮೋದಿಸಿರುವ ಕುರಿತು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ನೀಡುತ್ತೇವೆ. ಪಾಲಿಕೆ ಆಯುಕ್ತರು ಬಿಜೆಪಿಯವರ ಕೈಗೊಂಬೆಯಾಗಿದ್ಧಾರೆ. ಅವರನ್ನು ವರ್ಗಾವಣೆ ಮಾಡಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಿರಂಜನಯ್ಯ ಹಿರೇಮಠ, ಕವಿತಾ ಕಬ್ಬೇರ, ಮಹಮದ್‌ ಇಕ್ಬಾಲ್‌ ನವಲೂರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...