ಧಾರವಾಡ | ಜಾನಪದ ವಿವಿ ಭ್ರಷ್ಟಾಚಾರದ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆದ ಅಕ್ರಮ ನೇಮಕಾತಿ ಬಗ್ಗೆ, ಅಧಿವೇಶನದಲ್ಲಿ ಧ್ವನಿ ಎತ್ತಿದ ಹುಬ್ಬಳ್ಳಿ – ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಡಾ. ಶಿವಸೋಮಪ್ಪ ನಿಟ್ಟೂರು ಧನ್ಯವಾದ ತಿಳಿಸಿದರು.

ಧಾರವಾಡ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೋಟಗೋಡಿಯ ಜಾನಪದ ವಿಶ್ವವಿದ್ಯಾಲಯ ಜಗತ್ತಿನ ಏಕೈಕ ಜಾನಪದ ವಿಶ್ವವಿದ್ಯಾಲಯ. ಇಂತಹ ವಿಶ್ವವಿದ್ಯಾಲಯದ ಕುಲಪತಿ ಟಿ ಎಂ ಭಾಸ್ಕರ, ಕುಲಸಚಿವ ಹಾಗೂ ಶಹಜಾನ್ ಮುದಕವಿ ಎಂಬ ವ್ಯಕ್ತಿ ಸೇರಿ 24 ಬೋಧಕ ಹಾಗೂ ಬೋಧಕೇತರ ಹುದ್ದೆಗೆ ನೇಮಕ ಮಾಡಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಸಿ, ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳು ನ್ಯಾಯ ಕೋರಿ ರಾಜ್ಯಪಾಲರಿಗೆ, ಉನ್ನತ ಶಿಕ್ಷಣ ಸಚಿವರಿಗೆ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದರೂ, ಯಾವುದೇ ಪುಯೋಜನ ಆಗಿಲ್ಲ” ಎಂದು ಆರೋಪಿಸಿದರು.

“ಅಲ್ಲಿ ನಡೆದಿರುವ ಅಕ್ರಮಗಳನ್ನು ತುರ್ತಾಗಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಅರ್ಹತೆಯುಳ್ಳವರನ್ನು ಗಮನಿಸಬೇಕೆಂದು ಶಾಸಕ ಪ್ರಸಾದ ಅಬ್ಬಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಿರುವುದು ಖುಷಿ ತಂದಿದೆ” ಎಂದರು .

Advertisements

ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಕಮಿಟಿ ರಚಿಸುವ ಮೂಲಕ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಯರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು.  ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸಚಿವ ಎಚ್.ಕೆ.ಪಾಟೀಲ್ ಹಾಗೂ ನೊಂದವರ ಪ್ರತಿಭಾವಂತರ ಬೆನ್ನಿಗೆ ಇರಲಿ ಎಂಬುದು ನೊಂದ ಅಭ್ಯರ್ಥಿಗಳ ವಿನಂತಿ ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಶೀಘ್ರ ಕ್ರಮ: ನಗರಾಭಿವೃದ್ಧಿ ಸಚಿವ 

“ಜಾನಪದ ವಿಶ್ವವಿದ್ಯಾಲಯ ಸ್ಮಾಪನೆ ಆದಾಗಿಂದಲೂ ಅಲ್ಲಿನ ಅವ್ಯವಸ್ಥೆ, ನಡೆದ ಅಕ್ರಮ, ಭ್ರಷ್ಟಾಚಾರ ಎಲ್ಲವೂ ತನಿಖೆಯ ಮೂಲಕ ಹೊರಗೆ ಬರಬೇಕು. ನೊಂದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು” ಎಂದರು

ಡಾ. ಬಸವರಾಜ ದುಗಾಣಿ, ಕುಮಾರ ಓಲೇಕಾರ, ಶರಣಪ್ಪ ಪೂಜಾರ, ಭೀಮಪ್ಪ ಬಜಂತ್ರಿ, ಡಾ ಎಂ ವೈ ಬ್ಯಾಲ್ಯಾಳ, ಡಾ ಮಾಲತೇಶ ಬಾರ್ಕಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X