ಐಸಿಸಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬುಧವಾರ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಸೆಮಿ ಫೈನಲ್ ಪಂದ್ಯದ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಬೆಟ್ಟಿಂಗ್ ಮತ್ತು ಜೂಜಾಟದಲ್ಲಿ ತೊಡಗಿದ್ದ ಒಟ್ಟು 44 ಮಂದಿಯನ್ನು ಬಂಧಿಸಲಾಗಿದ್ದು, 58,180 ರೂ. ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿಯ ಗೋಕುಲ ರಸ್ತೆ ಠಾಣೆ ಮತ್ತು ಹಳೇ ಹುಬ್ಬಳ್ಳಿ ಠಾಣೆಗಳ ವ್ಯಾಪ್ತಿಯಲ್ಲಿರುವ ನೆಹರೂ ನಗರ ಮತ್ತು ಅರವಿಂದ ನಗರದಲ್ಲಿ ಆರು ಮಂದಿಯನ್ನು ಬಂಧಿಸಲಾಗಿದ್ದು, 11,550 ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಎಪಿಎಂಸಿ ನವನಗರ ಠಾಣೆ ವ್ಯಾಪ್ತಿಯ ಆರ್‌ಟಿಒ ಕಚೇರಿ, ಸುತಗಟ್ಟಿ ಸಮೀಪ ಹಾಗೂ ವಿದ್ಯಾಗಿರಿ ಠಾಣೆ ವ್ಯಾಪ್ತಿಯ ಲಕ್ಷ್ಮಿಸಿಂಗನೇರಿಯಲ್ಲಿ 38 ಮಂದಿ ಜೂಜು ಕೋರರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 46,630 ರೂ. ವಶಪಡಿಸಿಳ್ಳಲಾಗಿದೆ. ಅವರೆಲ್ಲರ ವಿರುದ್ಧ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ.