ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಪ್ರತ್ಯೇಕ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ₹17,500 ವಶಪಡಿಸಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ನಡೆದಿದೆ.
“ಶನಿವಾರ ನಡೆದ ವಿಶ್ವಕಪ್ ಕ್ರಿಕೆಟ್‌ನ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಧಾರವಾಡ-ಹುಬ್ಬಳ್ಳಿ ಅವಳಿ ನಗರದಲ್ಲಿ ಆರೋಪಿಗಳು ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಹೆಗ್ಗೇರಿಯ ಸಿದ್ಧಾರೂಢ ನಗರ, ಅರವಿಂದ ನಗರ ಹಾಗೂ ಆನಂದ ನಗರದ ಅಡ್ಡೆಗಳ ಮೇಲೆ ದಾಳಿ ನಡೆಸಲಾಯಿತು” ಎಂದು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಬಸವಣ್ಣನವರ ಭಾವಚಿತ್ರಕ್ಕೆ ಅಪಮಾನ: ವ್ಯಾಪಕ ಖಂಡನೆ
ಘಟನೆಗೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ.