ಧಾರವಾಡ | ನಿರಂತರ ಸುರಿದ ಮಳೆಗೆ ಬೆಳೆಹಾನಿ: ಕಟಾವಿಗೆ ಬಂದ ಫಸಲು ಕೈತಪ್ಪಿದ್ದನ್ನು ಕಂಡ ರೈತರು ತಲ್ಲಣ

Date:

ಧಾರವಾಡ ಜಿಲ್ಲೆಯಲ್ಲಿ ನಿರಂತರ ಸುರಿದ ಮಳೆಯಿಂದಾಗಿ ರೈತರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಭಾರೀ ಮಳೆಗೆ ಬೆಳೆಹಾನಿಯಾಗಿದ್ದು, ಬಂದ ಫಸಲು ಕೈಗೆ ಸಿಗುವುದೋ ಇಲ್ಲವೋ ಎಂಬ ಆತಂಕದಲ್ಲಿ ರೈತರು ದಿನದೂಡುತ್ತಿದ್ದಾರೆ. ಜಿಲ್ಲೆಯಲ್ಲಿ ಆಗಸ್ಟ್‌ 20ರವರೆಗೆ ಸುರಿದ ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ತಾಲೂಕಿನ 34 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಒಟ್ಟು 97,612 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿರುವುದಾಗಿ ತಿಳಿದುಬಂದಿದೆ.

- Advertisement -

ಸಾಮಾನ್ಯವಾಗಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬುವ ಮಾತೊಂದಿದೆ. ಆದರೆ; ಈ ಬಾರಿ ಸುರಿದ ಭಾರೀ ಮಳೆಗೆ, ಈಗಾಗಲೇ ಕಟಾವಿಗೆ ಬಂದಿರುವ ಬೆಳೆ ಕೈಗೇ ಸಿಗುತ್ತದೊ‌? ಇಲ್ಲವೊ? ಎಂದು ರೈತರು ಭೀತಿಯಲ್ಲಿದ್ದಾರೆ. ನವಲಗುಂದ, ಧಾರವಾಡ, ಅಣ್ಣಿಗೇರಿ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಸರು, ಉದ್ದು, ಮೆಕ್ಕೆಜೋಳ, ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಗಳ ಹಾನಿಯಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಬೆಳೆಹಾನಿ ಅಂದಾಜಿಸಿ 93,547 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾಗೂ 4,065 ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ಸೇರಿ ಒಟ್ಟು 97,612 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಜಿಲ್ಲಾಡಳಿತಕ್ಕೆ ಪ್ರಾಥಮಿಕ ಸಮೀಕ್ಷಾ ವರದಿ ಹೇಳುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಈ ಕುರಿತು ಹುಬ್ಬಳ್ಳಿ ತಾಲೂಕಿನ ರೈತರೊಬ್ಬರು ಮಾತನಾಡಿ, “ಈ ಬಾರಿ ಹೆಸರು ಕಾಳು ಬೆಳೆ, ಹತ್ತಿ ಬೆಳೆ ಕೈಗೆ ಸಿಗುವುದಿಲ್ಲ. ರೈತರು ಎಂಟೆಂಟು ಕೂರಿಗೆ ಹಾಕಿದ್ದಾರೆ. ಹೊಲದಲ್ಲಿ ಕಾಲಿಡಲೂ ಸಾಧ್ಯವಾಗುತ್ತಿಲ್ಲ. ಹಾಕಿದ ಖರ್ಚು ಬರುವುದೂ ಕನಸಿನ‌ ಮಾತಾಗಿದೆ. ಕಡ್ಲಿ ಮೊಳಕೆ ಹೊಡೆದಿವೆ. ಎರಡ್ಮೂರು ಸಲ ಎಡೆ ಹೊಡೆಯಬೇಕು. ಮೂರ್ನಾಲ್ಕು ಸಲ ಎಣ್ಣೆ ಹೊಡೆಯಬೇಕು. ಎಕರೆಗೆ ಮೂರು ಸಾವಿರ ಎಣ್ಣೆ ಹೊಡೆಯಲು ಖರ್ಚಾಗುತ್ತದೆ ಎನ್ನುತ್ತಾರೆ. ಉದ್ದಿನಬೆಳೆಯು ಅತಿಯಾದ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ಗಿಡಗಳಲ್ಲೇ ಮೊಳಕೆಯೊಡೆದಿವೆ. ಭಾರೀ ಸುರಿದ ಮಳೆಯು ರೈತರನ್ನು ತಲ್ಲಣಗೊಳಿಸಿದೆ. ಹೆಸರು, ಕಡ್ಲಿ, ಉಳ್ಳಾಗಡ್ಡಿ, ಹತ್ತಿ ಈ ಮಳೆಗೆ ಹಾಳಾಗುತ್ತವೆ. ಮೆಣಸಿನಕಾಯಿ ಕೊಳೆಯುತ್ತವೆ. ಕೈಗೂ ಸಿಗುವುದಿಲ್ಲ ಎನ್ನುತ್ತಾರೆ ರೈತ ನಬೀಸಾಬ.

ರೈತ ಬೆಳೆದ ಹೆಸರು ಬೆಳೆ ನಾಶ 1

“ಈ ಬಾರಿ ನಿರಂತರ ಸುರಿದ ಮಳೆಗೆ ಹೆಸರು ಭಾಗಶಃ ಹಾನಿಯಾಗಿದೆ. ಮಳೆಗೆ ಸಿಕ್ಕು ಹೆಸರು ಕಾಳುಗಳು ಕಪ್ಪಗಾಗಿದ್ದು, ಅದು ಯಾವುದಕ್ಕೂ ಉಪಯೋಗವಾಗುವುದಿಲ್ಲ. ಕನಿಷ್ಟಪಕ್ಷ ದನಗಳೂ ತಿನ್ನುವುದಿಲ್ಲ. ಕಡೆಗೆ ತಿಪ್ಪೆಗೆ ಎಸೆಯುವುದೊಂದೆ ಬಾಕಿ. ಖರ್ಚಾಗಿರುವ ಹಣವೂ ಕೈಗೆ ಎಟಕುವುದಿಲ್ಲ. ಬೆಳೆವಿಮೆ ಕೂಡಾ ಕೈಗೆ ಸಿಕ್ಕಿಲ್ಲ. ಮುಂಗಾರಿನ‌ ಶೇಂಗಾ, ಹತ್ತಿ, ಸೋಯಾಬೀನ್, ಮುಸುಕಿನ‌ ಜೋಳ ಬೆಳೆಗಳು ಹಾನಿಯಾಗಿದ್ದು, ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಮಾರುಕಟ್ಟೆಯಲ್ಲಿ ಹೆಸರಿನ ಬೆಲೆ ₹10,000ಕ್ಕೂ ಹೆಚ್ಚಿದೆ. ನಿರಂತರ ಮಳೆಯಿಂದ ಫಸಲಿನಷ್ಟೂ ಉತ್ಪನ್ನ ಸಿಗುವುದಿಲ್ಲ. ಈ ಬಗ್ಗೆ ಸರ್ಕಾರವು ಪ್ರತಿ ಎಕರೆಗೆ ₹50,000 ಪರಿಹಾರ ನೀಡುವಲ್ಲಿ ಮುಂದಾಗಬೇಕು” ಎನ್ನುತ್ತಾರೆ ಕುಂದಗೋಳ ತಾಲೂಕು ರೈತ ಅಧ್ಯಕ್ಷ ಗುರುಪಾದಪ್ಪ ಬಂಕದ.

Advertisements
ರೈತ ಬೆಳೆದ ಹೆಸರು ಬೆಳೆ ನಾಶ 2

ಜಿಲ್ಲೆಯಲ್ಲಿ ಅಂದಾಜು 80 ಸಾವಿರ ಹೆಕ್ಟೇರ್‌ನಿಂದ 1 ಲಕ್ಷ ಹೆಕ್ಟೇರ್‌ ಹೆಸರು ಬೆಳೆ ಹಾಳಾಗಿದೆ. ಬೆಳೆಹಾನಿ ಕುರಿತು ರೈತರಿಗೆ ಪರಿಹಾರಧನ ಬಿಡುಗಡೆ ಮಾಡಲು ಸರ್ಕಾರವು ಕೂಡಲೇ ಮುಂದಾಗಬೇಕಿದೆ. ಬೆಳೆವಿಮೆ ಎನ್ನುವುದು ರೈತರಿಗೆ ಒಂದು ಸುರಕ್ಷಾ ಕವಚವಿದ್ದಂತೆ. ಅನಿರೀಕ್ಷಿತ ಮಳೆಯಿಂದಾಗಿ ವೈಪರೀತ್ಯಗಳಿಂದಾಗುವ ನಷ್ಟವನ್ನು ಇದು ಸರಿದೂಗಿಸುತ್ತದೆ. ಇನ್ನೂ ಹೆಚ್ಚಿನ ರೈತರು ಈ ಯೋಜನೆಯಡಿ ನೋಂದಾಯಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ. ಇನ್ನು ಬಹುತೇಕ ರೈತರಿಗೆ ಬೆಳೆವಿಮೆ ಸರಿಯಾಗಿ ಬಂದಿಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಶೀಘ್ರದಲ್ಲಿ ಈ ಸಮಸ್ಯಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ನವಲಗುಂದದ ನಾಯಕನೂರು ಗ್ರಾಮದಲ್ಲಿನ ಬಸವನಗೌಡ ಅಕ್ಕಿ ಅವರ ಆರು ಎಕರೆ ಭೂಮಿಯಲ್ಲಿ ಬೆಳೆದಿದ್ದ ಉಳ್ಳಾಗಡ್ಡಿ ಬೆಳೆ ಎಲ್ಲವೂ ಮಳೆಯಿಂದ ಕೊಳೆತುಹೋಗಿದೆ. ನಿರಂತರ ಮಳೆಯಿಂದ ತುಂಬಿ ಹರಿದ ಹಳ್ಳಗಳು ಕೊಚ್ಚಿಹೋಗಿ ಅಕ್ಕಪಕ್ಕದ ಹೊಲದಲ್ಲಿದ್ದ ಬೆಳೆಗಳಿಗೆ ಹಾನಿ‌ ಉಂಟಾಗಿದೆ.

ರೈತ ಬೆಳೆದ ಹೆಸರು ಬೆಳೆ ನಾಶ 3

“ಧಾರವಾಡ ತಾಲೂಕಿನಲ್ಲಿ ಶೇ.82ರಷ್ಟು, ಕಲಘಟಗಿ ತಾಲೂಕಿನಲ್ಲಿ ಶೇ.111ರಷ್ಟು, ಕುಂದಗೋಳ ತಾಲೂಕಿನಲ್ಲಿ ಶೇ.123ರಷ್ಟು, ಅಳ್ಳಾವರ ತಾಲೂಕಿನಲ್ಲಿ ಶೇ.10ರಷ್ಟು, ಅಣ್ಣಿಗೇರಿ ತಾಲೂಕಿನಲ್ಲಿ ಶೇ.27ರಷ್ಟು ಹೆಚ್ಚುವರಿ ಮಳೆಯಾಗಿದೆ. ಹುಬ್ಬಳ್ಳಿ ತಾಲೂಕಿನಲ್ಲಿ ಶೇ.4ರಷ್ಟು, ನವಲಗುಂದ ತಾಲೂಕಿನಲ್ಲಿ ಶೇ.50ರಷ್ಟು, ಹುಬ್ಬಳ್ಳಿ ನಗರದಲ್ಲಿ ಶೇ.44ರಷ್ಟು ಮಳೆಯ ಕೊರತೆಯಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಶೇ.23ರಷ್ಟು ಹೆಚ್ಚುವರಿ ಮಳೆಯಾದ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಾಹಿತಿ ಸಿಗುತ್ತದೆ. ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ತೇವಾಂಶ ಹೆಚ್ಚಳದಿಂದಾಗಿ ಅಪಾರ ಪ್ರಮಾಣದಲ್ಲಿ ಈರುಳ್ಳಿ, ಹೆಸರು ಬೆಳೆ ಹಾನಿಯಾಗಿದ್ದು, ರೈತರು ನಷ್ಟಕ್ಕೆ ಒಳಗಾಗಿದ್ದಾರೆ. ಒಟ್ಟು ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಸುಮಾರು 2,920 ಹೆಕ್ಟೇರ್‌ನಲ್ಲಿ ಈರುಳ್ಳಿ ಬೆಳೆ ಹಾನಿಯಾಗಿದೆ. ಧಾರವಾಡ ಸೇರಿದಂತೆ ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ತಾಲೂಕುಗಳಲ್ಲಿ ಬೆಳೆ ಹಾನಿಯಾಗಿದೆ” ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

ಇದನ್ನೂ ಓದಿದ್ದೀರಾ? ಶಿವಮೊಗ್ಗ | ಸೆ. 3- 14 | ಜಮಾಅತೆ ಇಸ್ಲಾಮಿ ಹಿಂದ್‌ನಿಂದ ರಾಜ್ಯಾದ್ಯಂತ ‘ನ್ಯಾಯದ ಹರಿಕಾರ, ಪೈಗಂಬರ್ ಮುಹಮ್ಮದ್’ ಅಭಿಯಾನ

ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆಯಲ್ಲಿ ಕಳೆದ 10 ವರ್ಷಗಳಿಂದ ಯಾವುದೇ ಬದಲಾವಣೆಯಾಗಿಲ್ಲ. ಅದೇ ನಿಯಮಗಳನ್ನೇ ಮುಂದುವರಿಸಿಕೊಂಡು ಬರಲಾಗುತ್ತಿದೆ. ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕು ಸೇರಿದಂತೆ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸಕ್ತ ಮುಂಗಾರು ಮಳೆಯಿಂದ ಅಂದಾಜು 55 ಸಾವಿರ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾಳಾಗಿದ್ದು, ರೈತರಿಗೆ ಬೆಳೆಹಾನಿ ಮಂಜೂರಾತಿಗಾಗಿ ತಕ್ಷಣ ಸರ್ಕಾರಕ್ಕೆ ವರದಿ ಸಲ್ಲಿಸಲು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಈಗಾಗಲೇ ಅಧಿಕಾರಿಕಾರಿಗಳಿಗೆ ಸೂಚಿಸಿದ್ದಾರೆ. ತಾಲೂಕಿನ ಶಲವಡಿ, ನಾಯಕನೂರ ಗ್ರಾಮದ ನಡುವೆ ಜಮೀನಿನಲ್ಲಿ ಹೆಸರು ಹಾಗೂ ಈರುಳ್ಳಿ ಬೆಳೆ ಹಾನಿಯಾಗಿದೆ. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ನಿಂಗವ್ವ ತೊಗರಿಮನಿ ಅವರ ಹೊಲದಲ್ಲಿ ಹೆಸರು ಬೆಳೆ ಹಾನಿಯಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಪರಿಹಾರ ಸಿಗುವಂತಾಗಬೇಕು. ನವಲಗುಂದ ತಾಲೂಕಿನಲ್ಲಿ ಹೆಸರು 23,150 ಹೆಕ್ಟೇರ್, ಉದ್ದು 320 ಹೆಕ್ಟೇರ್, ಮೆಕ್ಕೆಜೋಳ 50 ಹೆಕ್ಟೇರ್, ಕೆಂಪು ಮೆಣಸಿನಕಾಯಿ 350 ಹೆಕ್ಟೇರ್, ಈರುಳ್ಳಿ 2050 ಹೆಕ್ಟೇರ್ ಒಟ್ಟು 25,920 ಹೆಕ್ಟೇರ್ ಬೆಳೆ ಹಾನಿಯಾಗಿರುವುದಾಗಿ ಜಿಲ್ಲಾಡಳಿತಕ್ಕೆ ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ.

ರೈತ ಬೆಳೆದ ಹೆಸರು ಬೆಳೆ ನಾಶ 4

ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಬೆಳೆಹಾನಿಯಾದ ಪ್ರದೇಶಗಳಿಗೆ ಭೇಟಿನೀಡಿ ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಒತ್ತಾಯಿಸಲಾಗುವುದೆಂದು ತಿಳಿಸಿದ್ದಾರೆ. ಆದಷ್ಟು ಬೇಗನೇ ಹಾನಿಗೊಳಗಾದ ಬೆಳೆಗೆ ಪರಿಹಾರ ದೊರಕುವಂತಾಗಲಿ ಎಂಬುದು ರೈತರ ಒತ್ತಾಸೆಯಾಗಿದೆ.

IMG 20240805 WA0207
ಶರಣಪ್ಪ ಗೊಲ್ಲರ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...