ಧಾರವಾಡ | ಡಿ. 17ರಂದು ಒಳಮೀಸಲಾತಿ ವಿಂಗಡಣೆ ವಿರೋಧಿಸಿ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ

Date:

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಂಗಡಣೆ ವಿರೋಧಿಸಿ ಡಿಸೆಂಬರ್ 17 ರಂದು ಭೋವಿ ವಡ್ಡರ, ಬಂಜಾರ, ಲಮಾಣಿ, ಕೊರಮ, ಕೊರಚ ಜಾತಿಗಳ ಮಹಾ ಒಕ್ಕೂಟ ವತಿಯಿಂದ ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕುವುದಾಗಿ ಧಾರವಾಡದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಭೋವಿ ವಡ್ಡರ ವೇದಿಕೆಯ ರಾಜ್ಯಾಧ್ಯಕ್ಷ ವೈ. ಕೋಟ್ರೇಶ್‌ ಹೇಳಿದರು.

- Advertisement -

ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕಣ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನೇ ನೆಪವಾಗಿರಿಸಿಕೊಂಡು ರಾಜ್ಯ ಸರ್ಕಾರ ವಿಂಗಡಿಸಲು ಮುಂದಾಗಿರುವುದು ಅವೈಜ್ಞಾನಿಕ ಮತ್ತು ಕಾನೂನು ಬಾಹಿರವಾಗಿದೆ. ರಾಜ್ಯದಲ್ಲಿ ಭೋವಿ ಸಮುದಾಯ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಕೊರಮ-ಕೊರಚ ಸಮುದಾಯಗಳು ದಾರಿದ್ರ್ಯದಲ್ಲೇ ಬದುಕುತ್ತಿವೆ. ಬಂಜಾರ-ಲಂಬಾಣಿ ಸಮುದಾಯಗಳು ಈಗಲೂ ಅಲೆಮಾರಿಗಳಂತೆ ಬದುಕು ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನ್ಯಾ. ಎ.ಜೆ.ಸದಾಶಿವ ನೀಡಿರುವ ಆಯೋಗದ ವರದಿಯ ದತ್ತಾಂಶಗಳನ್ನು ಆಧಾರವಾಗಿಟ್ಟುಕೊಂಡು, ಮೀಸಲಾತಿ ವರ್ಗೀಕರಣಕ್ಕೆ ಮುಂದಾಗುವ ಸಂಶಯ ದಟ್ಟವಾಗಿದೆ. ಇಂತಹ ದುಸ್ಸಾಹಸಕ್ಕೆ ರಾಜ್ಯ ಸರ್ಕಾರ ಕೈಹಾಕಿದರೆ ಮೀಸಲಾತಿಯಿಂದ ಭೋವಿ ಲಂಬಾಣಿ ಕೊರಮ, ಕೊರಚ ಜನಾಂಗಗಳು ವಂಚಿತಗೊಂಡು ಗುಲಾಮಗಿರಿಯ ಬದುಕು ನಡೆಸಬೇಕಾಗುತ್ತದೆ ಮತ್ತು ನಮ್ಮ ಮಕ್ಕಳ ಪಾಲಿಗೆ ಒಳಮೀಸಲಾತಿ ವರ್ಗೀಕರಣ ಮರಣ ಶಾಸನವಾಗಿ ಪರಿಣಮಿಸಲಿದೆ ಎಂದರು.

ಈ ವರದಿ ಓದಿದ್ದೀರಾ? ಧಾರವಾಡ | ವಿದ್ಯಾರ್ಥಿಗಳು ಅವಶ್ಯಕತೆಗೆ ತಕ್ಕಂತೆ ಮೊಬೈಲ್ ಬಳಕೆ ಮಾಡಿ: ಕುಲಸಚಿವ ಡಾ. ಎ.ಚನ್ನಪ್ಪ

ಸುದ್ದಿಗೋಷ್ಟಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಮಂಜುನಾಥ ಹಿರೇಮನಿ, ಮುತ್ತುರಾಜ ಮಾಕಡವಾಲೆ, ಕೊರಚ ಸಮಾಜದ ರಾಜ್ಯಾಧ್ಯಕ್ಷ ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಪಿ.ವೆಂಕಟೇಶ, ರಾಜ್ ಮಹಿಳಾ ಅಧ್ಯಕ್ಷ ಸುಶೀಲಮ್ಮ, ಸಮಾಜದ ಮುಖಂಡ ಮಲೇಶ ಮುನವಳ್ಳಿ, ಭೀಮಸಿ ನೆಮಿಕಲ್ಲ, ಕಾಶಪ್ಪ ಹಿರೇಮನಿ, ತಿಮ್ಮಣ್ಣಾ ಹಿರೇಮನಿ, ಮಂಜುನಾಥ ಹಳ್ಯಾಳ ಮತ್ತು ಶ್ರೀನಿವಾಸ ಅವರೋಳ್ಳಿ ಸೇರಿದಂತೆ ಭೋವಿ ಯುವವೇದಿಕೆ, ಬಂಜಾರ ಸಮಾಜ, ಕೊರಮ-ಕೊರಚ ಸಮಾಜದ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...