ಧಾರವಾಡ | ಚಾಮುಂಡೇಶ್ವರಿ ನಗರದಲ್ಲಿ ದಸರಾ ಕ್ರೀಡಾಕೂಟಕ್ಕೆ ಚಾಲನೆ

Date:

Advertisements

ಧಾರವಾಡ ಜಿಲ್ಲೆ ಹುಬ್ಬಳ್ಳಿಯ ಚಾಮುಂಡೇಶ್ವರಿ ಕಲ್ಯಾಣ ಸೇವಾ ಸಂಘ ಮತ್ತು ಪಂಚ ಕಮಿಟಿಯಿಂದ ಚಾಮುಂಡೇಶ್ವರಿ ನಗರದ ಹಿರಿಯರುಗಳಾದ ನರಸಪ್ಪ ಮಾದರ, ವೆಂಕಟರಮಣ ತಾಡಪತ್ರಿ, ಶ್ರೀರಾಮುಲು ಭಂಢಾರಿ ಮುಂತಾದವರ ಸಮ್ಮುಖದಲ್ಲಿ ಕಮಿಟಿ ಅಧ್ಯಕ್ಷ ಪರಶುರಾಮ ಮಲ್ಯಾಳ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ನವರಾತ್ರಿಯ ಒಂಬತ್ತು ದಿನಗಳೂ ಕೂಡ ಹಲವು ರೀತಿಯ ಪಂದ್ಯಾವಳಿಗಳನ್ನು ನಡೆಸಲಾಗುತ್ತಿದ್ದು, ಪುರುಷರು ಮತ್ತು ಮಹಿಳೆಯರಿಗಾಗಿ ಕ್ರಿಕೆಟ್, ವಾಲಿಬಾಲ್, ಕಬಡ್ಡಿ, ಲೆಮನ್ ಸ್ಪೂನ್, ರಂಗೋಲಿ ಸ್ಪರ್ಧೆ ಮುಂತಾದ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ವಿಜೇತರಿಗೆ ವಿಜಯದಶಮಿ ದಿನದಂದು ನಡೆಯುವ ಪಲ್ಲಕ್ಕಿ ಉತ್ಸವದ ಬಳಿಕ ಸಮಾರೋಪ ಸಭೆಯಲ್ಲಿ ಬಹುಮಾನಗಳನ್ನು ವಿತರಿಸುವುದಾಗಿ ಕಮಿಟಿಯ ಸದಸ್ಯರು ಪ್ರಕಟಣೆಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಮಹಿಷಾ ದಸರಾ ಅಸಂಖ್ಯಾತರಿಗೆ ಶಕ್ತಿ ತುಂಬಿದೆ: ಪಿ.ಎನ್. ರಾಮಯ್ಯ

Advertisements

ಕಮಿಟಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕೊಂಡಪಲ್ಲಿ ಮತ್ತು ಖಜಾಂಚಿ ಸುರೇಶ ಸೌದುಲ್,  ಇತರ ಪದಾಧಿಕಾರಿಗಳಾದ ಮಂಜುನಾಥ ಕತ್ರಿಮಾಲ, ಆನಂದ ಮಾದರ ಮತ್ತು ಕ್ರೀಡಾಕೂಟದ ಉಸ್ತುವಾರಿ ಸಮಿತಿಯ ಹರೀಶ ತಾಡಪತ್ರಿ, ವೆಂಕಟೇಶ್ ಭಂಢಾರಿ, ಶ್ರೀನಿವಾಸ ಅನಂತಪುರ, ಸಂತೋಷ ಸೌದುಲ್, ಉಮೇಶ ಆತ್ಮಕೂರ, ಗಿರೀಶ, ಕುನಾಲ ಶಿರಿಶಾಲ, ಹರೀಶ, ಸಾಯಿ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X