ಧಾರವಾಡ | ಅಂಗನವಾಡಿಗೆ ಡಿಸಿ, ಸಿಇಓ ದಿಢೀರ್ ಭೇಟಿ; ಇಲಾಖೆ ಯೋಜನೆಗಳ ಪರಿಶೀಲನೆ

Date:

ಧಾರವಾಡ ಮದಿಹಾಳ ನಗರದ ಸಿದ್ಧಾರೂಢ ಕಾಲೋನಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ನ.12ರ ಮಧ್ಯಾಹ್ನ ದಿಡೀರ್ ಭೇಟಿ ನೀಡಿ, ಮಕ್ಕಳ ಹಾಜರಾತಿ, ದಾಖಲಾತಿ ಪರಿಶೀಲಿಸಿದರು.

- Advertisement -

ಅಂಗನವಾಡಿಯಲ್ಲಿ ಒಟ್ಟು 37 ಜನ ಮಕ್ಕಳು ಹಾಜರಿದ್ದರು. ಹಾಗೂ ಅಂಗನವಾಡಿ ಶಿಕ್ಷಕಿಯರು ಮಕ್ಕಳಿಗೆ ಹಾಡು ಹಾಡಿಸಿ, ಹಾಡಿನೊಂದಿಗೆ ನೃತ್ಯವನ್ನು ಮಾಡಿಸಿದರು. ಅದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಯವರು ಸಹ ಮಕ್ಕಳೊಂದಿಗೆ ಹಾಡು ಹಾಡಿ ಆನಂದಿಸಿದರು. ಅದೇ ರೀತಿ ನೆಲದ ಮೇಲೆ ಕುಳಿತು ಪ್ರತಿ ಮಗುವಿನೊಂದಿಗೆ ಮಾತನಾಡಿ ಅವರ ಶಾಲೆ, ಮನೆ, ಆಟಗಳು ಮತ್ತು ಊಟದ ಬಗ್ಗೆ ವಿಚಾರಿಸಿದರು. ಮಕ್ಕಳ ಹಾಸ್ಯ, ನಗು, ಕುತೂಹಲ ಮತ್ತು ಪ್ರಾಮಾಣಿಕತೆ ಕಂಡು ಜಿಲ್ಲಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಕ್ಕಳಿಗೆ ಚಾಕ್ಲೇಟ್ ನೀಡಿ ಸಿಹಿ ತಿನಿಸಿ ಅವರ ದಿನವನ್ನು ಇನ್ನಷ್ಟು ಮಧುರಗೊಳಿಸಿದರು. ಅಲ್ಲದೆ, ಮಕ್ಕಳ ಆಹಾರ ಮತ್ತು ಆರೋಗ್ಯದ ಕಡೆ ಗಮನ ಹರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಿದರು. ಅಂಗನವಾಡಿ ಕೇಂದ್ರದ ಕಾರ್ಯವೈಖರಿ, ಪೌಷ್ಠಿಕ ಆಹಾರ ವಿತರಣೆಯ ವಿಧಾನ, ಮಕ್ಕಳ  ಹಾಜರಾತಿ, ದಾಖಲೆಗಳು ಹಾಗೂ ಸ್ವಚ್ಛತೆ ಕುರಿತಂತೆ ಡಿಸಿ ಮತ್ತು ಸಿಇಓ ಅವರು ಸಮಗ್ರ ಪರಿಶೀಲನೆ ನಡೆಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ.ಎಚ್.ಎಚ್.ಕುಕನೂರ ಅವರು ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಒಟ್ಟು 1,622 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ. ಅವುಗಳಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ 0 ದಿಂದ 6 ವರ್ಷದ ಮಕ್ಕಳು ಸೇರಿ ಒಟ್ಟು 1,22,298 ಫಲಾನುಭವಿಗಳು ದಾಖಲಾಗಿದ್ದಾರೆ.

ಐಸಿಡಿಎಸ್ ಯೋಜನೆಯಲ್ಲಿ ಪೋಷಷ ಪ್ರ್ಯಾಕರ್ ಎಂಬ ಆ್ಯಪ್ ಮೂಲಕ ಫಲಾನುಭವಿಗಳನ್ನು ದಾಖಲು ಮಾಡಿಕೊಂಡು ಇಲಾಖೆಯ ಸೇವೆಗಳನ್ನು ಒದಗಿಸಲಾಗುತ್ತಿದೆ. ಅದಕ್ಕೆ ಫೇಸ್ ರಿಕಾಗ್ನೈಜೆಷನ್ ಸಿಸ್ಟಮ್ ಅವಶ್ಯವಿದ್ದು ಧಾರವಾಡ ಜಿಲ್ಲೆಯ ಒಟ್ಟು 1,22,298 ಫಲಾನುಭವಿಗಳ ಪೈಕಿ 1,19,841 ಫಲಾನುಭವಿಗಳನ್ನು ಫೇಸ್ ರಿಕಾಗ್ನೈಜೆಷನ್ ಸಿಸ್ಟಮ್‍ನಲ್ಲಿ ದಾಖಲಿಸಿ, ವಿವರ  ಅಳವಡಿಸಲಾಗಿದೆ. ಇನ್ನುಳಿದ 2,449 ಬಾಕಿ ಉಳಿದಿರುವ ಫಲಾನುಭವಿಗಳ ಪೈಕಿ, ಕೆಲವು ಆಧಾರ್ ಕಾರ್ಡ್ ಸಮಸ್ಯೆ, ಜನನ ಪ್ರಮಾಣ ಪತ್ರ ಇಲ್ಲದಿರುವುದು, ಆಧಾರ ತಿದ್ದುಪಡಿ ಕಾರಣಗಳಿಂದ ಬಾಕಿ ಉಳಿದಿವೆ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ, ನೀಡಿದರು.

ಅಂಗನವಾಡಿ ಕೇಂದ್ರಕ್ಕೆ ಆಗಮಿಸುತ್ತಿದ್ದ, ಗೊಲ್ಲ, ದುರ್ಗಮುರಗಿ ಹಾಗೂ ಇತರ ಅಲೆಮಾರಿ ಸಮಯದಾಯಗಳ ಗರ್ಭಿಣಿಯರು ಹಾಗೂ ಬಾಣಂತಿಯರನ್ನು ಮಾತನಾಡಿಸಿದ ಜಿಲ್ಲಾಧಿಕಾರಿಗಳು, ಅವರ ಮಕ್ಕಳ ಹಾಗೂ ಮಹಿಳಾ ಪಲಾನುಭವಿಗಳ ಫೇಸ್ ರಿಕಾಗ್ನೈಜೆಷನ್ ಸಿಸ್ಟಮ್ ಮಾಡುವ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಿಸಿ, ಸಿಇಓ ಬಿಸಿಯೂಟ ಸೇವನೆ: ಸರ್ಕಾರದ ಪೌಷ್ಠಿಕ ಯೋಜನೆಗಳ ಪ್ರಾಯೋಗಿಕ ಅನುಷ್ಠಾನವನ್ನು ಗಮನಿಸಿದರು. ಅಂಗನವಾಡಿ ಮಕ್ಕಳೊಂದಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಸಿಇಓ ಭುವನೇಶ ಪಾಟೀಲ ಅವರು ಮಧ್ಯಾಹ್ನದ ಬಿಸಿಯೂಟದಲ್ಲಿ ಅನ್ನ, ಸಾರು, ಮೊಟ್ಟೆ ಹಾಗೂ ಬಾಳೆಹಣ್ಣುನ್ನು ಸೇವಿಸಿದರು. ಮಕ್ಕಳಿಗೆ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಕೊಡುವ ಆಹಾರ ಸರಕಾರದ ನಿಯಮಾನುಸಾರ ಇರಬೇಕು. ಆಹಾರದ ತೂಕ ಮತ್ತು ಪೌಷ್ಟಿಕಾಂಶದಲ್ಲಿ ವ್ಯತ್ಯಾಸ ಆಗಬಾರದು. ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳನ್ನು, ಗರ್ಭಿಣಿಯರನ್ನು ತಾಯಿಯಂತೆ ಮಾತೃಹೃದಯದಿಂದ ಕಾಣಬೇಕು. ಸರಕಾರದ ಸೌಲಭ್ಯಗಳು ದುರಪಯೋಗ ಆಗದಂತೆ, ವ್ಯರ್ಥವಾಗದಂತೆ ಮುನ್ನೆಚ್ಚರಿಕೆವಹಿಸಿ, ಕೇಂದ್ರ ತಮ್ಮ ಸ್ವಂತ ಮನೆ ಎಂದು ಭಾವಿಸಿ, ಮುನ್ನಡೆಸಬೇಕು ಎಂದು ಅಂಗನವಾಡಿ ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುನೇಶ್ ಪಾಟೀಲ ಸಹ ಮಕ್ಕಳು ಹಾಗೂ ಸಿಬ್ಬಂದಿಯೊಂದಿಗೆ ಸಂಭಾಷಣೆ ನಡೆಸಿ, ಅಂಗನವಾಡಿಯ ಕೆಲಸದ ವಿಧಾನ ಹಾಗೂ ಮಕ್ಕಳ ಪೋಷಣೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು. ಅಂಗನವಾಡಿಗೆ ದಾಖಲಾಗುವ ಪ್ರತಿ ಮಗುವೂ ಪೂರ್ಣ ಪೌಷ್ಠಿಕ ಆಹಾರ ಪಡೆದುಕೊಳ್ಳಬೇಕು ಮತ್ತು ಪ್ರತಿದಿನದ ಮಕ್ಕಳ ಹಾಜರಾತಿ ಖಚಿತವಾಗಿರಬೇಕು ಎಂದು ಕಾರ್ಯಕರ್ತೆಯರಿಗೆ ಸೂಚನೆ ನೀಡಿದರು.

ಇದನ್ನೂ ಓದಿ ಧಾರವಾಡ | ಅವಳಿನಗರ ಬೈಪಾಸ್ ರಸ್ತೆ ಕಾಮಗಾರಿ ಶೀಘ್ರ ಮುಗಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಡೆಸುತ್ತಿರುವ ಅಂಗನವಾಡಿ ಕೇಂದ್ರಗಳು ಮಕ್ಕಳ ಸಮಗ್ರ ಬೆಳವಣಿಗೆಯ ಮೊದಲ ಹಂತ. ಇಲ್ಲಿ ಮಕ್ಕಳಿಗೆ ನೀಡುವ ಆರೈಕೆ, ಶಿಕ್ಷಣ ಮತ್ತು ಪೌಷ್ಠಿಕ ಆಹಾರವೇ ಅವರ ಭವಿಷ್ಯದ ಬುನಾದಿ. ಪ್ರತಿ ಅಂಗನವಾಡಿ ಕೇಂದ್ರವು ಮಾದರಿಯಾಗಬೆಕು.  ಕೇಂದ್ರದ ಸಿಬ್ಬಂದಿಗಳು, ಮಕ್ಕಳ ಜೊತೆ ತಾಳ್ಮೆಯಿಂದ ವರ್ತಿಸಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...