ಧಾರವಾಡ | ಅಂಗನವಾಡಿ ನೌಕರರಿಗೆ 15,000 ರೂ. ವೇತನ ನೀಡುವಂತೆ ಆಗ್ರಹ

Date:

ಚುನಾವಣಾ ಸಮಯದಲ್ಲಿ ಕಾಂಗ್ರೆಸ್‌ ನೀಡಿದ್ದ ಭರವಸೆಯಂತೆ ಅಂಗನವಾಡಿ ನೌಕರರಿಗೆ 15,000 ರೂ. ಸಂಬಳ ನೀಡಬೇಕು. ಹಿಂದಿನ ಸರ್ಕಾರ ಘೋಷಿಸಿದ್ದ 1,000 ರೂ. ಹೆಚ್ಚುವರಿ ಗೌರವಧನವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -

“ನಿವೃತ್ತಿ ಹೊಂದಿದ ಅಂಗನವಾಡಿ ನೌಕರರಿಗೆ ನಿವೃತ್ತಿ ಪರಿಹಾರ 2 ಲಕ್ಷ ನೀಡಬೇಕು. ನೌಕರರಿಗೆ ಉತ್ತಮ ಗುಣಮಟ್ಟದ ಹೊಸ ಮೊಬೈಲ್ ಹಾಗೂ ಇಂಟರನಟ್ ಒದಗಿಸಬೇಕು. ಚುನಾವಣೆಗಾಗಿ ಕೆಲಸ ಮಾಡಿದ ಬಿಎಲ್‌ಓ ಕಾರ್ಯಕರ್ತೆಯರಿಗೆ ಗೌರವಧನ ನೀಡಬೇಕು. ಐಸಿಡಿಎಸ್ ಕೆಲಸಗಳನ್ನು ಹೊರತು ಪಡಿಸಿ ಇತರ ಇಲಾಖೆಗಳ ಹೆಚ್ಚುವರಿ ಕೆಲಸಗಳನ್ನು ಅಂಗನವಾಡಿ ನೌಕರರಿಗೆ ನೀಡಬಾರದು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರತಿಭಟನೆ ವೇಳೆ ಮಾತನಾಡಿದ ಸಂಘಟನೆಯ ಸಂಚಾಲಕಿ ಭುವನಾ ಬಳ್ಳಾರಿ, “ಸುಮಾರು ದಶಕಗಳಿಂದ ರಾಜ್ಯದ ಬಡಜನರ ನಡುವೆ ಅಂಗನವಾಡಿ ನೌಕರರು ಅಮೂಲ್ಯವಾದ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರ ನೌಕರರ ಜೀವನಕ್ಕೆ ಪೂರಕವಾದ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡುತ್ತಿಲ್ಲ. 1975ರಿಂದ ಕೆಲಸ ಮಾಡುತ್ತಿದ್ದರೂ ಇವರನ್ನು ಖಾಯಂ ನೌಕರರು ಎಂದು ಪರಿಗಣಿಸಿಲ್ಲ. ಅವರನ್ನು ಸ್ಕೀಮ್ ನೌಕರರನ್ನಾಗಿ ಮುಂದುವರಿಸುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈಗಲಾದರೂ ಅವರನ್ನು ಡಿ ಗ್ರೂಪ್‌ ನೌಕರರೆಂದು ಸರ್ಕಾರ ಪರಿಗಣಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಸರೋಜಾ ಹುಲಸೇರ, ಕವಿತಾ ಮಸೂತಿ, ರತ್ನಾ ಗಾಣಿಗೇರ, ಶ್ರೀದೇವಿ ತೇಗೂರ, ಚನ್ನಮ್ಮ ತಡಕೋಡ, ಮಂಜುಳಾ ಕಂಬಳಿ, ಶ್ರೀದೇವಿ ಹೂಗಾರ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...