ಧಾರವಾಡ | ಪೌರಕಾರ್ಮಿಕರ ಹಕ್ಕೊತ್ತಾಯ ಈಡೇರಿಸುವಂತೆ ಆಗ್ರಹ

Date:

ಪೌರಕಾರ್ಮಿಕರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರು ಮತ್ತು ನೌಕರರ ಸಂಘದಿಂದ ಮೊದಲ ದಿನ ಕೈಗೆ ಕಪ್ಪುಬಟ್ಟೆ ಧರಿಸಿ ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ಕೇಂದ್ರ ಕಚೇರಿ ಹುಬ್ಬಳ್ಳಿಯಲ್ಲಿ ಜುಲೈ 18ರಂದು ಮೊದಲ ದಿನ ಕೈಗೆ ಕಪ್ಪುಬಟ್ಟೆ ಧರಿಸಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ, ಅಮರಣಾಂತ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ 2017ರಲ್ಲಿ ಆದೇಶ ಹೊರಡಿಸಿದೆ. ಆದರೆ 8 ವರ್ಷಗಳು ಗತಿಸಿದರೂ 134 ಪೌರಕಾರ್ಮಿಕರ ಹುದ್ದೆಗಳನ್ನು ಖಾಯಂಗೊಳಿಸಿಲ್ಲ. ಪೌರಕಾರ್ಮಿಕ ಕೆಲಸ ಖಾಯಂಗೊಳ್ಳುವ ಕನಸು ಕಂಡು ಹೋರಾಟ ಮಾಡಿದ ಸುಮಾರು 200 ಮಂದಿ ಪೌರಕಾರ್ಮಿಕರು ಮೃತಪಟ್ಟಿದ್ದಾರೆ. 100ಕ್ಕೂ ಅಧಿಕ ಮಂದಿ  ಪೌರಕಾರ್ಮಿಕರು 60 ವರ್ಷ ಮೇಲ್ಪಟ್ಟು ನಿವೃತ್ತಿ ಹೊಂದಿ ಪಾಲಿಕೆಯಿಂದ ಯಾವುದೇ ಸೌಲಭ್ಯ ಇಲ್ಲದೆ ಬೀದಿ ಪಾಲಾಗಿದ್ದಾರೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

“ಪೌರಕಾರ್ಮಿಕರನ್ನು ನೇರನೇಮಕಾತಿ ಮಾಡಿಕೊಳ್ಳಬೇಕು. ಪಾಲಿಕೆ ಸಾಮಾನ್ಯಸಭೆಯ ಠರಾವಿನಂತೆ 799 ಮಂದಿ ಪೌರಕಾರ್ಮಿಕರಿಗೆ ನೇರವೇತನ ಪಾವತಿಸಬೇಕೆಂದು ಪಾಲಿಕೆ ಸಾಮಾನ್ಯ ಸಭೆಯ ಠರಾವು ಪಾಸ್ ಆಗಿದೆ. ಪಾಲಿಕೆ ಸಾಮಾನ್ಯಸಭೆ ಠರಾವುಗಳಿಗೆ ಮಾನ್ಯತೆ ಇಲ್ಲದಾಗಿದೆ. ಪಾಲಿಕೆ ಆವರಣದಲ್ಲಿ ಸಂಘಕ್ಕೆ ಕೊಠಡಿ ನೀಡಬೇಕೆಂದು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡಿ ಎರಡು ವರ್ಷ ಗತಿಸಿದರೂ ಕೊಠಡಿ ನೀಡುತ್ತಿಲ್ಲ” ಎಂದು ಆರೋಪಿಸಿದರು.

“ಕನಿಷ್ಟ ವೇತನ ಬಾಕಿ ₹9 ಕೋಟಿ, 868 ಮಂದಿ ಮಹಿಳಾ ಪೌರಕಾರ್ಮಿಕರಿಗೆ ಮೆಡಿಕಲ್ ಬೋನಸ್ ₹21.70 ಲಕ್ಷ, ಸರ್ಕಾರದ ಆದೇಶದಂತೆ ಪ್ರತಿ ತಿಂಗಳು ₹2000 ಸಂಕಷ್ಟ ಭತ್ಯೆ, 60 ವರ್ಷ ಸೇವೆ ಸಲ್ಲಿಸಿ ನಿವೃತ್ತಿ/ಮೃತಪಟ್ಟ ಪೌರಕಾರ್ಮಿಕರಿಗೆ ₹10ಲಕ್ಷ ಪರಿಹಾರ ಹಾಗೂ ₹5000 ನಿವೃತ್ತಿ ವೇತನ, 2,165 ಮಂದಿ ಪೌರಕಾರ್ಮಿಕರಿಗೆ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಉಚಿತ ಮನೆಗಳನ್ನು ನಿರ್ಮಿಸಿಕೊಡಬೇಕು, ಸರ್ಕಾರದ ಆದೇಶದಂತೆ ವಾರದಲ್ಲಿ ಒಂದು ದಿನ ಪೂರ್ತಿ ರಜೆ‌, ಬಯೋಮೆಟ್ರಿಕ್ ಹಾಜರಾತಿ, ಸಫಾಯಿ ಕರ್ಮಚಾರಿಗಳ ಆಯೋಗದ ನಿರ್ದೇಶನಗಳ ಅನುಷ್ಠಾನ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು ಪ್ರವಾಹ : ತ್ವರಿತ ಪರಿಹಾರ ಕ್ರಮಕ್ಕೆ ಅಧಿಕಾರಿಗಳಿಗೆ ಸಚಿವ ಜಾರ್ಜ್ ನಿರ್ದೇಶನ

ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ಡಾ. ವಿಜಯ ಗುಂಟ್ರಾಳ, ಗಾಳೆಪ್ಪಾ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ, ಸೋಮು ಮೊರಬದ, ಯಲವ್ವ ನಾರಾಯಣಪುರ, ಲಕ್ಷ್ಮೀ ಬೇತಾಪಲ್ಲಿ, ಶರಣಪ್ಪ ಅಮರಾವತಿ ದತಪ್ಪ, ಲಕ್ಷ್ಮೀ ವಾಲಿ, ಕನಕಪ್ಪ ಕೋಟಬಾಗಿ, ಪುಲಯ್ಯಾ ಚಿಂಚಗೋಳ, ಭಾಗ್ಯಲಕ್ಷ್ಮೀ ಮಾದರ, ಯಲ್ಲವ್ವ ದೇವರಗುಡಿಹಾಳ, ಪ್ರೇಮಾ ಕಣೆಕಲ್, ಅನಿತಾ ಇನಗೊಂಡ ಸೇರಿದಂತೆ ಬಹುತೇಕ ಮಂದಿ ಪೌರಕಾರ್ಮಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...