ಧಾರವಾಡ | ಕನ್ನೇರಿ ಸ್ವಾಮೀಜಿ ಜಿಲ್ಲೆಗೆ ಪ್ರವೇಶಿಸದಂತೆ ತಡೆಯಲು ಒತ್ತಾಯ

Date:

ಅವಹೇಳಕಾರಿ ಹೇಳಿಕೆ ನೀಡುವ ಮೂಲಕ ನ್ಯಾಯಾಲಯದಿಂದ ಛೀಮಾರಿಗೆ ಒಳಪಟ್ಟಿರುವ ಮಹಾರಾಷ್ಟ್ರದ ಕನ್ನೇರಿ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಪ್ರತಿಬಂಧಕ ಆಜ್ಞೆಯನ್ನು ಜಾರಿ ಮಾಡಬೇಕು ಎಂದು ಜಿಲ್ಲೆಯ ಬಸವಪರ ಸಂಘಟನೆಗಳು ಹಾಗೂ ಸಮಸ್ತ ಲಿಂಗಾಯತರ ವತಿಯಿಂದ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.

- Advertisement -

ಈ ವೇಳೆ ಬಸವಕೇಂದ್ರದ ಬಸವಂತಪ್ಪ ತೋಟದ ಮಾತನಾಡಿ, ಕನ್ನೇರಿ ಮಠದ ಸ್ವಾಮೀಜಿ ಕೀಳುಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ, ಪ್ರಚೋದನಕಾರಿ ಹೇಳಿಕೆ ನೀಡಿರುವುದು ಅವರ ಘನತೆಗೆ ತಕ್ಕುದಲ್ಲ. ಅವಹೇಳನಕಾರಿ ಭಾಷೆ ಬಳಸಿರುವುದು ವಾಕ್ ಸ್ವಾತಂತ್ರ್ಯದ ವ್ಯಾಪ್ತಿಯಲ್ಲಿಲ್ಲ. ಇದೇ ನವೆಂಬರ್ 5ರಂದು ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮಕ್ಕೆ ಸ್ವಾಮೀಜಿ ಬರುತ್ತಿದ್ದಾರೆ. ಈಗಾಗಲೇ ‘ನೀವು ಮಾತನಾಡುವುದು ನಿಲ್ಲಿಸಿ. ಮೌನವಾಗಿ ಮಠದಲ್ಲಿ ಧ್ಯಾನ ಮಾಡಿ’ ಎಂದು ಘನ ನ್ಯಾಯಾಲಯವು ಅವರಿಗೆ ಛೀಮಾರಿ ಹಾಕಿದೆ. ಅಂತಹ ಸ್ವಾಮೀಜಿಯನ್ನು ಧಾರವಾಡ ಜಿಲ್ಲೆಗೆ ಬರದಂತೆ ತಡೆಯಬೇಕು ಎಂದು ಅಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ವಕೀಲ ಕೆ. ಎಸ್. ಕೋರಿಶೆಟ್ಟರ್ ಮಾತನಾಡಿ, ಕನ್ನೇರಿ ಶ್ರೀಗಳು ಆಡಬಾರದ ಮಾತನ್ನಾಡಿಯೂ ಕೂಡ ತಮ್ಮದೇ ಸರಿ ಎಂಬುವ ರೀತಿಯಲ್ಲಿ ಸಮರ್ಥನೆಯ ಉದ್ಧಟತನಕ್ಕೆ ಹೋಗುತ್ತಿದ್ದಾರೆ. ಸ್ವಾಮಿಗಳು ತಪ್ಪನ್ನು ಒಪ್ಪದಿದ್ದರೆ ಈ ಪ್ರಕ್ಷುಪ್ತ ಪರಿಸ್ಥಿತಿ ಮುಂದುವರೆಯುತ್ತದೆ. ಸಾಮಾನ್ಯ ಮನುಷ್ಯ ಕೂಡ ಮಾತನಾಡಬಾರದ ಮಾತು ಆಡಿದ ಸ್ವಾಮಿಗಳು ಧಾರವಾಡ ಜಿಲ್ಲೆಗೆ ಬರದಂತೆ ನೋಡಿಕೊಳ್ಳಬೇಕು. ಅವರು ಬಂದರೆ ಲಿಂಗಾಯತರ ಮನಸ್ಸಿಗೆ ನೋವಾಗುತ್ತದೆ. ಬಸವ ಸಂಘಟನೆ ಮತ್ತು ಬಸವ ಸಂಸ್ಕೃತಿ ಉತ್ಸವದ ಬಗ್ಗೆ ಹಗುರವಾಗಿ ಮಾತನಾಡಿದುದರ ಹಿಂದೆ ಕಾಣದ ಕೈಗಳಿವೆ. ಮನುವಾದಿಗಳು ಸಮಾಜವಾದಿ ಚಿಂತನೆಯ ಅಂಬೇಡ್ಕರ್ ವಾದ ಮತ್ತು ಬಸವವಾದ ವಿರುದ್ಧ ತಂತ್ರವನ್ನು ನಮ್ಮವರಿಂದಲೇ ಮಾಡಿಸುತ್ತಿದ್ದಾರೆ. ಇದು ಸ್ವಾಮಿಗಳ ಹೇಳಿಕೆಯನ್ನು ಬೆಂಬಲಿಸಿ ಮಾತನಾಡುವವರಿಂದ ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಜಾಗತಿಕ ಲಿಂಗಾಯತ ಮಹಾಸಭಾದ ಸಿ. ಜಿ. ಪಾಟೀಲ್ ಮಾತನಾಡಿ, ವೈದಿಕ ಮನಸ್ಥಿತಿಯ ಸ್ವಾಮಿಗಳನ್ನು ಲಿಂಗಾಯತ ಸಮಾಜ ಗಮನಿಸುತ್ತಿದೆ. ಒಂದು ವೇಳೆ ಈ ಸ್ವಾಮಿಗಳು ಧಾರವಾಡ ಜಿಲ್ಲೆಗೆ ಬಂದರೆ ಅನಿವಾರ್ಯವಾಗಿ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಅವಹೇಳನಕಾರಿಯಾಗಿ ಮಾತನಾಡಿದ ಕನೇರಿ ಸ್ವಾಮಿಗಳಿಗೆ ಬೆಂಬಲವಾಗಿ ಸೂಚಿಸುತ್ತಿರವ ರಾಜಕಾರಣಿಗಳಿಗೂ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ. ಕನ್ನೇರಿ ಸ್ವಾಮಿಗಳು ಯಾವುದೇ ಕಾರಣಕ್ಕೂ ಧಾರವಾಡ ಜಿಲ್ಲೆಗೆ ಕಾಲಿಡದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಬೇಕು. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಅದರ ಕುರಿತು ಯಾವ ಕ್ರಮ ಕೈಗೊಂಡಿದ್ದಾರೆ ಎಂಬುದರ ಬಗ್ಗೆಯೂ ತಿಳಿದಿಲ್ಲ ಎಂದರು.

ಕರ್ನಾಟಕದ ಉಚ್ಛನ್ಯಾಯಾಲಯದ ಆದೇಶದ ವಿರುದ್ಧ ಸಲ್ಲಿಕೆಯಾದ ಅರ್ಜಿಯನ್ನು ಭಾರತದ ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಆಣ್ಣಿಗೇರಿ ತಾಲೂಕು ಹಳ್ಳಿಕೇರಿ ಗ್ರಾಮದಲ್ಲಿ ಸಹಜಾನಂದ ಮಹಾರಾಜರ ಸಪ್ತಾಹದ ಕಾರ್ಯಕ್ರಮಗಳು ನ. 5 ರಿಂದ ನ. 7 ರವರೆಗೆ ನಡೆಯಲಿವೆ. ನ. 7ರ ಕಾರ್ಯಕ್ರಮದಲ್ಲಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮಿಗಳು ಭಾಗವಹಿಸಲಿದ್ದಾರೆಂದು ಆಮಂತ್ರಣ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ. ಈ ಗ್ರಾಮದ ಕಾರ್ಯಕ್ರಮಗಳು ನಡೆಯಲಿ ಯಶಸ್ವಿಯಾಗಲಿ, ನಮ್ಮ ತಕರಾರು ಇಲ್ಲ. ಆದರೆ, ಈ ಕಾರ್ಯಕ್ರಮದಲ್ಲಿ ಈ ಸ್ವಾಮಿಗಳು ಭಾಗವಹಿಸಲು ಹಾಗೂ ಧಾರವಾಡ ಜಿಲ್ಲೆಯನ್ನು ಪ್ರವೇಶಿಸಲು ನಮ್ಮ ವಿರೋಧವಿದೆ.

ಕನ್ನೇರಿ ಶ್ರೀಗಳು ಜಿಲ್ಲೆ ಪ್ರವೇಶಿಸಿದರೆ ಆಶಾಂತತೆ, ಗಲಭೆ ಉಂಟಾಗಬಹುದು. ಲಿಂಗಾಯತರು ಪ್ರತಿಭಟನೆಗೆ ಇಳಿಯುತ್ತೇವೆ. ಅದಕ್ಕಾಗಿ, ಮುನ್ನೆಚ್ಚರಿಕೆ ಕ್ರಮಗಳು ಅವಶ್ಯವಾಗಿವೆ. ಆದ್ದರಿಂದ ಈ ಕನ್ನೇರಿ ಮಠದ ಸ್ವಾಮಿಗಳು ಧಾರವಾಡ ಜಿಲ್ಲೆ ಪ್ರವೇಶಿಸಬಾರದು ಎಂದು ಶಾಶ್ವತವಾಗಿ ಆದೇಶ ಮಾಡಲು ವಿನಂತಿಸಿದೆ. ಕೂಡಲೇ ಆದೇಶ ಮಾಡದಿದ್ದರೆ ಮುಂದೆ ನಡೆಯುವ ಅಹಿತಕರ ಘಟನೆಗಳಿಗೆ ಸರ್ಕಾರವೇ ಜವಾಬ್ದಾರಿ ಆಗುತ್ತದೆ ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...