ಧಾರವಾಡ | ಒಂದೇ ಬಾರಿಗೆ 45 ಮಂದಿ ಆರೋಪಿಗಳ ಗಡಿಪಾರು ಆದೇಶ

Date:

ಹುಬ್ಬಳ್ಳಿ-ಧಾರವಾಡ ಅವಳಿನಗರದ ಪೊಲೀಸ್ ಕಮಿಷನರೇಟ್ ಇತಿಹಾಸದಲ್ಲೇ ಮೊದಲ ಬಾರಿಗೆ, ಅಪರಾಧಿ ಹಿನ್ನೆಲೆ ಹೊಂದಿದವರ 45 ಮಂದಿ ಆರೋಪಿಗಳನ್ನು ಒಂದೇ ಬಾರಿಗೆ ಗಡಿಪಾರು ಮಾಡಲು ಆದೇಶ ಹೊರಡಿಸಿದ್ದಾರೆ.

- Advertisement -

ಧಾರವಾಡ ಎಸ್‌ಪಿ ಸುದ್ದಿಗೋಷ್ಟಿ ನಡೆಸಿದ್ದು, “ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ನಡೆದಿರುವ ಕೊಲೆ, ಸುಲಿಗೆ, ಕೊಲೆಗೆ ಪ್ರಯತ್ನ, ಸರಗಳ್ಳತನ, ಮಾದಕ ವಸ್ತು ಮಾರಾಟ/ಸೇವನೆ, ಭೂ ಮಾಫಿಯಾ, ಮಹಿಳೆ ಮತ್ತು ವಿದ್ಯಾರ್ಥಿನಿಯರ ಅಪಹರಣ, ಚುಡಾಯಿಸುವುದು ಅಲ್ಲದೆ ಸಂಘಟಿತ ಅಪರಾಧಗಳಾದ ಮಟಕಾ, ಗ್ಯಾಂಬ್ಲಿಂಗ್‌, ಕ್ರಿಕೆಟ್‌ ಬೆಟ್ಟಿಂಗ್‌ ಸೇರಿದಂತೆ ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯ ಹಾಳುಮಾಡುವ ಪುಂಡ ಹುಡುಗರ/ರೌಡಿ, ಜನರ ಗುಂಪು ಕಟ್ಟಿಕೊಂಡು ತಿರುಗಾಡುತ್ತ ಸಾರ್ವಜನಿಕರಲ್ಲಿ ಭಯಭೀತಿಯನ್ನು ಹುಟ್ಟುಹಾಕಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡಬಲ್ಲ ಹಾಗೂ ಅಪಾಯಕಾರಿ ಮನುಷ್ಯರಾಗಿ ಸಮಾಜಕ್ಕೆ ಗಂಡಾಂತರಕಾರಿಯಾಗಿರುವ ಆರೋಪಿಗಳ ವಿರುದ್ಧ ಮುಂಜಾಗೃತಾ ಕ್ರಮದ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಸುಮಾರು ಎರಡರಿಂದ ಮೂರು ತಿಂಗಳಿಂದ ಸ್ಥಳೀಯ ಅಧಿಕಾರಿಗಳೊಂದಿಗೆ ಆರೋಪಿಗಳ ವಿರುದ್ಧ ಇರುವ ಪ್ರಕರಣಗಳನ್ನು ವಿಮರ್ಶೆ ಮಾಡಿದ್ದು, ಆರೋಪಿತರನ್ನು ಗಡಿಪಾರು ಮಾಡುವ ಅವಶ್ಯಕತೆ ಎದುರಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಕರ್ನಾಟಕ ಪೊಲೀಸ್‌ ಕಾಯ್ದೆ-1963 ಕಲಂ 55 ಮತ್ತು 56ರ ಅಡಿಯಲ್ಲಿ ಕ್ರಮ ಕೈಗೊಂಡಿದ್ದು, ಕಾನೂನು ಸುವ್ಯವಸ್ತೆ ಕಾಪಾಡಲು ಮಾದಕ ವಸ್ತುಗಳ ಮುಕ್ತ, ಮಹಿಳೆ ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಕ್ರಮ ಕೈಗೊಂಡಿದ್ದು, ಗಡಿಪಾರು ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

“ಗಡಿಪಾರು ವ್ಯಕ್ತಿಗಳ ನಿರ್ದಿಷ್ಟ ಅವಧಿಗೆ ಇದ್ದು, ಗಡಿಪಾರು ವ್ಯಕ್ತಿಗಳ ಚಲನವಲನ ಮತ್ತು ಅವರ ಕಾರ್ಯಚಟುವಟಿಕೆಗಳ ಮೇಲೆ ಸೂಕ್ತ ನಿಗಾವಹಿಸಿ ಈ ಕಚೇರಿಗೆ ಮಾಹಿತಿ ತಿಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಗಡಿಪಾರಾದ ವ್ಯಕ್ತಿಗಳು ನಗರದಲ್ಲಿ ಕಂಡುಬಂದಲ್ಲಿ ಸಾರ್ವಜನಿಕರು ಹಾಗೂ ಮನೆಯ ಅಕ್ಕಪಕ್ಕದವರು, ಸ್ಥಳೀಯ ಪೊಲೀಸ್‌ ಠಾಣೆಗಳಿಗೆ ನಗರ ನಿಸ್ತಂತು ಕೊಠಡಿ(ಫೋನ್‌ ನಂಬರ್‌ 100, 2233555) ಹಾಗೂ 112 ವಾಹನಕ್ಕೆ ತಿಳಿಸುವ ಜವಾಬ್ದಾರಿಯಾಗಿರುತ್ತದೆ. ಈ ಪ್ರಕ್ರಿಯೆಗೆ ನಿಮ್ಮ ಸಹಕಾರವೂ ಕೂಡಾ ಅವಶ್ಯವಿರುತ್ತದೆ” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ₹5.51 ಕೋಟಿ ಮೌಲ್ಯದ ಮಾದಕ ವಸ್ತು ನಾಶ : ಎಸ್ಪಿ ಪ್ರದೀಪ ಗುಂಟಿ

ಧಾರವಾಡದ ಚೇತನ ಮೇಟಿ, ಅಡ್ಡ ಸೊಹೈಲ್, ಹುಬ್ಬಳ್ಳಿ ಹೊಸೂರಿನ ರಾಹುಲ ಪ್ರಭು ಸೇರಿದಂತೆ 45 ಮಂದಿ ಆರೋಪಿಗಳ ಹಿನ್ನೆಲೆಯ ಮೇರೆಗೆ ಆದೇಶವನ್ನು ಪೋಟೊ ಸಹಿತ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಗಡಿಪಾರು ಮಾಡಿರುವವರು ಕಂಡುಬಂದರೆ, ಮಾಹಿತಿ ನೀಡುವಂತೆಯೂ ಕೋರಿರುವ ಪೊಲೀಸರು, ಸಾರ್ವಜನಿಕ ವಲಯದಲ್ಲಿ ಪದೇ ಪದೆ ತೊಂದರೆ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...