ಧಾರವಾಡ | ಪರಿಸರ ಸ್ನೇಹಿ ಗಣಪತಿ ವಿಗ್ರಹ ಬಳಕೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ

Date:

ನಮ್ಮ ಶ್ರದ್ಧೆ ಪರಿಸರಕ್ಕೆ ಮಾರಕವಾಗಬಾರದು. ಇಂದು ನಾವು ಮಾಡುವ ಪೂಜೆ ಮುಂದಿನ ಪೀಳಿಗೆಗೆ ಶಾಪವಾಗಬಾರದು. ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಿ. ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಪಿಒಪಿ ವಿಗ್ರಹಗಳನ್ನು ಮಾರಾಟ ಮಾಡಲು ಅವಕಾಶವಿಲ್ಲ. ಎಲ್ಲರೂ ಪರಿಸರ ಸ್ನೇಹಿ ಗಣಪತಿ ವಿಗ್ರಹ ತಂದು ಹಬ್ಬ ಆಚರಣೆ ಮಾಡಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದರು.

- Advertisement -

ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಭವನದಲ್ಲಿ ಪಿಒಪಿ ಗಣೇಶ ವಿಗ್ರಹಗಳ ನಿಷೇಧ ಹಾಗೂ ನಿಯಂತ್ರಿಸುವ ಕುರಿತು ಜಲಮಾಲಿನ್ಯ ತಡೆ ಕಾರ್ಯಪಡೆ ಸಭೆ ಜರುಗಿಸಿ, ಮಾತನಾಡಿದ ಅವರು, “ಅಧಿಕಾರಿಗಳು ನಗರದಾದ್ಯಂತ ದಿಢೀರ್ ದಾಳಿ ನಡೆಸಿ, ಅಂತಹ ವಿಗ್ರಹಗಳು ಸಿಕ್ಕರೆ, ತಕ್ಷಣ ವಶಪಡಿಸಿಕೊಳ್ಳಬೇಕು. ಮಾರಾಟಗಾರರ ಮೇಲೆ ದಂಡ ವಿಧಿಸಬೇಕು. ಗಣಪತಿ ವಿಗ್ರಹ ಮಾರಾಟಗಾರರು ಪರಿಸರಸ್ನೇಹಿ ಮಣ್ಣಿನ ಗಣಪತಿಗಳನ್ನು ಮಾತ್ರ ಮಾರಾಟ ಮಾಡಬೇ. ಬೇರೆ ಜಿಲ್ಲೆಗಳಿಂದ ಪಿಒಪಿ ವಿಗ್ರಹಗಳು ಬರದಂತೆ ತಡೆಯಲು ಜಿಲ್ಲೆಯ ಗಡಿ ಭಾಗಗಳಲ್ಲಿ ಹಾಗೂ ಮಹಾನಗರದ ಗಡಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ, ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು. ಚೆಕ್‍ಪೋಸ್ಟ್‌ನಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು. ನಿಯಮ ಉಲ್ಲಂಘಿಸಿ ಸಾಗಾಟ ಮಾಡುವ ವಾಹನಗಳನ್ನು ಮತ್ತು ಪಿಒಪಿ ವಿಗ್ರಹಗಳನ್ನು ವಶಪಡಿಸಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಿಯಮ ಪಾಲನೆಯಲ್ಲಿ ಯಾವುದೇ ಪೊಲೀಸ್ ಅಧಿಕಾರಿ ನಿರ್ಲಕ್ಷ್ಯ ತೋರಿದ್ದು ಕಂಡುಬಂದಲ್ಲಿ, ಶಿಸ್ತು ಕ್ರಮ ಜರುಗಿಸಲಾಗುವುದು. ಪಿಒಪಿ ಗಣೇಶ ಮೂರ್ತಿಗಳ ಬಳಕೆಯನ್ನು ನಿಷೇಧಿಸುವ ಕುರಿತು ಕರ್ನಾಟಕ ಹೈಕೋರ್ಟ್ ಸ್ಪಷ್ಟ ನಿರ್ದೇಶನಗಳನ್ನು ನೀಡಿದೆ. ಪಿಒಪಿ ವಿಗ್ರಹಗಳು ನೀರಿನಲ್ಲಿ ಕರಗುವುದಿಲ್ಲ ಮತ್ತು ಅದರಲ್ಲಿರುವ ವಿಷಕಾರಿ ರಾಸಾಯನಿಕಗಳು ಕೆರೆ, ಬಾವಿ, ಹಳ್ಳ, ನದಿ ಸೇರಿ ಜಲಮೂಲಗಳನ್ನು ಕಲುಷಿತಗೊಳಿಸುತ್ತವೆ. ಇದು ಜಲಚರಗಳಿಗೆ ಮತ್ತು ಮಾನವನ ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾಗುವುದರಿಂದ ಹೈಕೋರ್ಟ್ ಈ ಕಠಿಣ ನಿಲುವನ್ನು ತೆಗೆದುಕೊಂಡಿದೆ. ಪೊಲೀಸ್, ಪರಿಸರ ಮಾಲಿನ್ಯ, ಮಹಾನಗರ ಪಾಲಿಕೆ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹೈಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕೆಂದು” ತಿಳಿಸಿದರು.‌

ಇದನ್ನೂ ಓದಿ: ಧಾರವಾಡ | ಕೆಲಸದಲ್ಲಿ ಬದ್ಧತೆ ಹೊಂದಿರುವ ಅಧಿಕಾರಿಗಳು ಇಲಾಖೆಯ ಆಸ್ತಿ: ಭುವನೇಶ್ ಪಾಟೀಲ

ಸಾರ್ವಜನಿಕರು ಪಿಒಪಿ ಸಾಗಾಣಿಕೆ, ದಾಸ್ತಾನು, ಮಾರಾಟ ಹಾಗೂ ತಯಾರಿಕೆ ಕಂಡು ಬಂದಲ್ಲಿ ಸಹಾಯವಾಣಿಗೆ ಕರೆ ಮಾಡಿ ಅಥವಾ ವಾಟ್ಸಪ್ ಮೂಲಕವು ಮಾಹಿತಿ ನೀಡಬಹುದಾಗಿದೆ. ಮಾಹಿತಿದಾರರ ಪರಿಚಯವನ್ನು ಗೌಪ್ಯವಾಗಿ ಇಡಲಾಗುವುದು. ಸಹಾಯವಾಣಿ: ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯ 0836-2445508 ಟೋಲ್ ಫ್ರೀ ನಂಬರ್:1077, ಧಾರವಾಡ ಉಪ ವಿಭಾಗಾಧಿಕಾರಿ ಕಚೇರಿ: 0836-2233860, ಧಾರವಾಡ ತಹಶೀಲ್ದಾರ ಕಚೇರಿ: 0836-2233822, ಅಳ್ಳಾವರ ತಹಶೀಲ್ದಾರ ಕಚೇರಿ: 0836-2385544, ಹುಬ್ಬಳ್ಳಿ ನಗರ: 0836-2358035, ಹುಬ್ಬಳ್ಳಿ: 0836-2233844, ಕಲಘಟಗಿ: 08370-284535, ನವಲಗುಂದ:08380-229240, ಅಣ್ಣಿಗೇರಿ:8618442759, ಕುಂದಗೋಳ:8304290239 ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 0836-2213888, 0836-2213889, 0836-2213869 ಹಾಗೂ ವಾಟ್ಸ್‍ಪ ಸಂಖ್ಯೆ: 8277803778 ಗೆ ಕರೆ ಮಾಡಿ ತಿಳಿಸಬಹುದು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...