ಧಾರವಾಡ | ಸಂವಿಧಾನದ ಜಾಗೃತಿ ಅಭಿಯಾನ ಅನುಷ್ಠಾನದಲ್ಲಿ ಅಗ್ರಸ್ಥಾನ

Date:

ಸಂವಿಧಾನದ ಜಾಗೃತಿ ಅಭಿಯಾನವನ್ನು ಅನುಷ್ಠಾನಗೊಳಿಸುವಲ್ಲಿ ಧಾರವಾಡ ಜಿಲ್ಲೆ ಅಗ್ರಸ್ಥಾನದಲ್ಲಿದೆ. ಭಾರತದ ಸಂವಿಧಾನವನ್ನು ಅಂಗೀಕರಿಸಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಜಾಥಾವನ್ನು ಗಣರಾಜ್ಯೋತ್ಸವ ದಿನದಂದು ಇಡೀ ರಾಜ್ಯದಲ್ಲಿ ಆರಂಭಿಸಲಾಗಿದೆ.

- Advertisement -

ಧಾರವಾಡ ಜಿಲ್ಲೆಯಲ್ಲಿ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಲಾಗಿತ್ತು. ಈ ಜಾಥಾವು ಜಿಲ್ಲೆಯ 72 ಗ್ರಾಮ ಪಂಚಾಯಿತಿಗಳು ಮತ್ತು 16 ವಾರ್ಡ್‌ಗಳಲ್ಲಿ ಸಂಚರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜ್ಯದ 31 ಜಿಲ್ಲೆಗಳ ಪೈಕಿ ಧಾರವಾಡ 700ಕ್ಕೆ 600 ಅಂಕ ಪಡೆದು ಮೊದಲ ಸ್ಥಾನದಲ್ಲಿದ್ದರೆ, ಕೋಲಾರ 210 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಬಾಗಲಕೋಟೆ 200, ಬೆಳಗಾವಿ 180 ಹಾಗೂ ಕಲಬುರಗಿ 180 ಅಂಕ ಪಡೆದಿವೆ. ಮಂಡ್ಯ, ಯಾದಗಿರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಶೂನ್ಯ ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿ. ಆರ್. ಅಂಬೇಡ್ಕರ್ ಅವರ 15 ಅಡಿ ಎತ್ತರದ ಭಾವಚಿತ್ರ ಹಾಗೂ ದೊಡ್ಡ ಎಲ್‌ಇಡಿ ಪರದೆ ಹೊತ್ತ ವಾಹನ ಜಿಲ್ಲೆಯಲ್ಲಿ ಸಂಚರಿಸುತ್ತಿದೆ. ಸಂವಿಧಾನದ ಮುನ್ನುಡಿ ಮತ್ತು ಮುಖ್ಯ ಲಕ್ಷಣಗಳನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪರದೆಯ ಮೇಲೆ ಪ್ರದರ್ಶಿಸಲಾಗುತ್ತಿದೆ.

ಜಾಥಾದಲ್ಲಿ ತಜ್ಞರಿಂದ ಉಪನ್ಯಾಸ, ಕ್ಯಾಂಡಲ್ ಮತ್ತು ಟಾರ್ಚ್ ಲೈಟ್ ಮೆರವಣಿಗೆ, ಸಾಂಸ್ಕೃತಿಕ ತಂಡಗಳಿಂದ ಸಂಗೀತ ಮತ್ತು ನೃತ್ಯದ ಜೊತೆಗೆ ಶಾಲಾ- ಕಾಲೇಜುಗಳಲ್ಲಿ ಸಂವಿಧಾನದ ಕುರಿತು ಸ್ಪರ್ಧೆಗಳು ಮತ್ತು ಸಂವಿಧಾನದ ಮುಖ್ಯಾಂಶಗಳ ಕುರಿತು ಪವರ್ ಪಾಯಿಂಟ್ ಮೂಲಕ ವಿವರಣೆ ನೀಡಲಾಗುವುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...