ಧಾರವಾಡ | ಡಿಜಿಟಲ್ ತಂತ್ರಜ್ಞಾನ ಹೆಚ್ಚು ಮುನ್ನಲೆಗೆ ಬಂದಿದೆ: ಡಾ. ಶ್ರೀರಾಮ ಬೆಲ್ಡೋನಾ

Date:

ಡಿಜಿಟಲ್ ತಂತ್ರಜ್ಞಾನದ ಪರಿವರ್ತನೆಯಿಂದ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗುತ್ತಿದೆ. ಡಿಜಿಟಲ್ ತಂತ್ರಜ್ಞಾನ ಹೆಚ್ಚು ಮುನ್ನಲೆಗೆ ಬಂದಿದೆ ಎಂದು ಅಮೇರಿಕಾದ ಸ್ಟೋನ್ ಹಿಲ್ ಕಾಲೇಜಿನ ಸ್ಟಾಟಜಿಕ್ ಅಡ್ವೈಸರ ಡಾ. ಶ್ರೀರಾಮ ಬೆಲ್ಡೋನಾ ಹೇಳಿದರು.

- Advertisement -

ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕೌಸಾಳಿ‌ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ 50 ವರ್ಷದ ಸಂಭ್ರಮಾಚರಣೆಯ ನಿಮಿತ್ತವಾಗಿ ಕಿಮ್ಸ್ ಆವರಣದಲ್ಲಿ ಆಯೋಜಿಸಿದ ‘ದರ್ಪಣ್-2026 ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ‌ದಿಕ್ಸೂಚಿ ಭಾಷಣ ಮಾಡಿ, ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರಸ್ತುತ ಕಲಿಕೆಯಲ್ಲಿ ಬೋಧನಾ ವಿಧಾನಗಳು ಬದಲಾಗುತ್ತಿದ್ದು, ಡಿಜಿಟಲ್ ತಂತ್ರಜ್ಞಾನ ಹೆಚ್ಚು ಮುನ್ನಲೆಗೆ ಬಂದಿದ್ದು, ಇಂದು ಸಮಾಜಿಕ ಮಾಧ್ಯಮ ತಂತ್ರಜ್ಞಾನವು ಹೆಚ್ಚು ಅವಕಾಶಗಳನ್ನು ಒದಗಿಸುತ್ತದೆ ಎಂದ ಅವರು ಕರ್ನಾಟಕ ವಿಶ್ವವಿದ್ಯಾಲಯ ಕೌಸಾಳಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್‌ಮೆಂಟ್‌ ನನ್ನಲ್ಲಿ ಪರಿವರ್ತನೆ ತಂದಿದೆ ಎಂದರು.

ಎಂಬತ್ತರ ದಶಕದ ವ್ಯವಹಾರದ ಶಿಕ್ಷಣವು ಸಾಂಪ್ರದಾಯಿಕ ಬೋಧನಾ ವಿಧಾನವನ್ನು ಒಳಗೊಂಡಿತ್ತು ಈಗ ತಂತ್ರಜ್ಞಾನದ ಸಹಾಯದಿಂದ ಬೋಧನೆಯಲ್ಲಿ ಬಹಳಷ್ಟು ಬದಲಾವಣೆ ಆಗಿದೆ. ಪ್ರಸ್ತುತ ಭಾರತದಲ್ಲಿ 6500 ಕ್ಕಿಂತ ಹೆಚ್ಚು ವಿವಿಧ ಬಿಸಿನೆಸ್ ಕೋರ್ಸ್ ಗಳು ಲಭ್ಯವಿವೆ ಅವುಗಳಲ್ಲಿ ಪ್ರಸ್ತುತ ವ್ಯವಹಾರದ ಸ್ಥಿತಿ ಗತಿಯನ್ನು ಅರಿತು ಇಂದಿನ ಯುವ ಸಮುದಾಯಕ್ಕೆ ಒದಗಿಸಬೇಕಾಗಿದೆ ಎಂದ ಅವರು ಯಶಸ್ಸು ಸಿಗಬೇಕಾದರೆ ನಿರಂತರ ಶ್ರಮದ ಅಗತ್ಯತೆ ಇದೆ ಎಂದರು.

ಪ್ರಾಧ್ಯಾಪಕ ಪ್ರೊ. ಅಶೋಕ ಚಚಡಿ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಕಿಮ್ಸ್ ಬೆಳಸಬೇಕಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಬಹಳ ಇದೆ ಎಂದ ಅವರು ಭವಿಷ್ಯದಲ್ಲಿ ಹೆಚ್ಚು ಸವಾಲುಗಳು ಇವೆ. ಅವುಗಳನ್ನು ಎದುರಿಸಿ ಮುನ್ನಡೆಯಬೇಕಾಗಿದೆ ಎಂದರು. ಪ್ರಾಧ್ಯಾಪಕ ಪ್ರೊ. ಎಮ್.ಎಸ್.ಸುಭಾಷ್ ಮಾತನಾಡಿ, ಕಿಮ್ಸ್ ಬೆಳವಣಿಗೆಯಲ್ಲಿ ಹಳೆಯ ವಿದ್ಯಾರ್ಥಿಗಳ ಪಾತ್ರ ಅಪಾರವಾಗಿದೆ ಎಂದ ಅವರು ಕಿಮ್ಸ್ ಸಂಸ್ಥೆಯನ್ನು ಇನ್ನಷ್ಟು ಬೆಳಸಲು ಇಲ್ಲಿನ ಪ್ರಾಧ್ಯಾಪಕರು ಹೆಚ್ಚು ಗಮನ ನೀಡಬೇಕು ದೇಶದಲ್ಲಿ ಕಿಮ್ಸ್ ಸಂಸ್ಥೆಯನ್ನು ಮಾದರಿ ಸಂಸ್ಥೆಯನ್ನಾಗಿ ಮಾಡಲು ಪಣ ತೋಡಬೇಕು ಎಂದರು.

ಕಿಮ್ಸ್ ನಿರ್ದೇಶಕ ಪ್ರೊ. ಉತ್ತಮ ಕಿನಂಗೆ‌ ಮಾತನಾಡಿ, ಭವಿಷ್ಯದಲ್ಲಿ ಡಿಜಿಟಲ್ ವೇದಿಕೆಗಳು ಪರಿಣಾಮಕಾರಿಯಾಗಿ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಹೆಚ್ಚು ಕೌಶಲ್ಯಯುತ ಶಿಕ್ಷಣ ನೀಡಲು ಕಿಮ್ಸ್ ಪಾಡ ಕಾಸ್ಟ್ ಡಿಜಿಟಲ್‌ ವೇದಿಕೆ  ಪ್ರಾರಂಭಿಸಲಾಗುವದು ಈಗಾಗಲೇ ವಿದ್ಯಾರ್ಥಿಗಳ ಜೊತೆಗೆ ವಿವಿಧ ಪರಿಣಿತ ಉದ್ಯಮದಾರರ ಜೊತೆಗೆ ಸಂವಾದ, ಉದ್ಯಮ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪ್ರಯೋಗಾತ್ಮಕ ಬೋಧನೆ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ ಹುಬ್ಬಳ್ಳಿ | ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ಕಾರ್ಯಕ್ರಮದಲ್ಲಿ ಹೈದರಾಬಾದಿನ ಐ.ಎಸ್.ಬಿ ಹಿರಿಯ ಡೀನ್ ಮದನ್ ಪಿಲ್ಲುಟ್ಟಾ, ಕೌಸಾಳೆ ಕುಟುಂಬ ಸದಸ್ಯ ಡಾ. ವಿವೇಕ ಗಬ್ಬೂರ, ಕವಿವಿ ವಿಶ್ರಾಂತ ಕುಲಪತಿ ಪ್ರೊ. ಕೆ.ಬಿ.ಗುಡಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಾ. ಉತ್ತಮ ಕಿನಂಗೆ, ಕೌಸಾಳೆ ಇನಸ್ಟಿಟ್ಯೂಟ್ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನರೇಶ ಷಾ, ಕಿಮ್ಸ ಅಸೋಸಿಯೇಷನ್ ಪ್ರೊಜೆಕ್ಟ್ ಹೆಡ್ ಸಂಜಯ ಗನಾಟೆ, ಕಿಮ್ಸ್ ಡೀನ್ ಡಾ. ಎನ್ ರಾಮಾಂಜನಯಲು ಡಾ.ಪುಷ್ಪಾ ಹೊಂಗಲ್,  ಪ್ರೊ.ಮಹೇಶ ಕುಲಕರ್ಣಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...