ಧಾರವಾಡ | ಯೂರಿಯಾ ಗೊಬ್ಬರಕ್ಕೆ ಪರ್ಯಾಯವಾಗಿ ‘ನ್ಯಾನೊ ಯೂರಿಯಾ’ ಬಳಸಲು ಜಿಲ್ಲಾಧಿಕಾರಿ ಸೂಚನೆ

Date:

Advertisements

ರೈತರಿಗೆ ಶಿಫಾರಸು ಮಾಡಿದ ಪ್ರಮಾಣಕ್ಕಿಂತ ಹೆಚ್ಚಿನ ರಸಗೊಬ್ಬರವನ್ನು ಬಳಸದಂತೆ ಜಾಗೃತಿ ಮೂಡಿಸಲು ಹಾಗೂ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿರುವ ನವೀನ ತಾಂತ್ರಿಕತೆಯಾದ ʼನ್ಯಾನೊ ಯೂರಿಯಾʼ ಬಳಕೆ ಮಾಡುವಂತೆ ರೈತರಲ್ಲಿ ಅರಿವು ಮೂಡಿಸಲು ಹೆಚ್ಚಿನ ಪ್ರಚಾರಕೈಗೊಳ್ಳಲು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧಿಕಾರಿಗಳಿಗೆ ಸೂಚಿಸಿದರು.

2025-26ನೇ ಸಾಲಿನ ಮುಂಗಾರು ಹಂಗಾಮಿನ ರಸಗೊಬ್ಬರ ಪೂರೈಕೆ ಕುರಿತು ಜುಲೈ 28ರಂದು ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಎನ್ ಹೆಚ್ ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ನೇತೃತ್ವದಲ್ಲಿ ಜಿಲ್ಲೆಯ ಮುಂಗಾರು ಹಂಗಾಮಿಗೆ ಪ್ರಸ್ತುತ ಅವಶ್ಯವಿರುವ ಯೂರಿಯಾ ರಸಗೊಬ್ಬರ ಕುರಿತು ಕಂದಾಯ ಹಾಗೂ ಕೃಷಿ ಇಲಾಖೆಯ ಎಲ್ಲ ಅಧಿಕಾರಿಗಳೊಂದಿಗೆ ಜರುಗಿದ ಸಭೆಯಲ್ಲಿ ಮಾತನಾಡಿದರು.

ಶಾಸಕ ಎನ್ ಎಚ್ ಕೋನರಡ್ಡಿ ಮಾತನಾಡಿ, “ಜಿಲ್ಲೆಯಲ್ಲಿ ಮುಂದಿನ ಒಂದು ವಾರದೊಳಗೆ ರೈತರು ತಮ್ಮ ಬೆಳೆಗಳಿಗೆ ಮೇಲು ಗೊಬ್ಬರವಾಗಿ ಯೂರಿಯಾ ರಸಗೊಬ್ಬರವನ್ನು ನೀಡುವುದು ಅತ್ಯವಶ್ಯವಿರುವ ಕಾರಣ ನಿಗದಿತ ಸಮಯದಲ್ಲಿ ರೈತರಿಗೆ ಯಾವುದೇ ತೊಂದರೆಯಾಗದಂತೆ ಪೂರೈಕೆ ಮಾಡಲು ಕ್ರಮವಹಿಸಬೇಕು” ಎಂದು ತಿಳಿಸಿದರು.

Advertisements

ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಬಿ ಅಂತರವಳ್ಳಿ ಮಾತನಾಡಿ, “ಪ್ರಸಕ್ತ ಸಾಲಿನ ಜುಲೈವರೆಗೆ ಜಿಲ್ಲೆಯ ಯೂರಿಯಾ ರಸಗೊಬ್ಬರದ ಒಟ್ಟು 17,223 ಮೆ.ಟನ್‍ಗಳ ಬೇಡಿಕೆ ಇದ್ದು, ಈವರೆಗೆ 23,108 ಮೆ.ಟನ್‍ಗಳಷ್ಟು ಸರಬರಾಜು ಆಗಿದ್ದು, 22,253 ಮೆ.ಟನ್‍ಗಳಷ್ಟು ವಿತರಣೆಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಭೂಗೋಳಶಾಸ್ತ್ರ ವಿಷಯದತ್ತ ಎಲ್ಲರ ಚಿತ್ತ ಹೊರಳಬೇಕು: ಡಾ. ಐ ಎ ಮುಲ್ಲಾ

“ಕಳೆದ ಮುಂಗಾರು ಹಂಗಾಮಿಗೆ ಹೋಲಿಸಿದರೆ ಮೆಕ್ಕೆಜೋಳ ಬೆಳೆಯು ಸರಿಸುಮಾರು 13,000 ಹೆಕ್ಟೇರ್‌ಗಳಷ್ಟು, ಹತ್ತಿ 4,100 ಹೆಕ್ಟೇರ್‌, ಕಬ್ಬು 2,100 ಹೆಕ್ಟೇರ್‌ ಅಧಿಕವಾಗಿ ಬಿತ್ತನೆಯಾಗಿರುತ್ತದೆ. ಜೂನ್ ಎರಡನೇ ವಾರದಲ್ಲಿ ಆದ ಹೆಚ್ಚಿನ ಮಳೆಯಿಂದಾಗಿ ಮುಂಚಿತವಾಗಿ ಬಿತ್ತನೆಯಾದ ಕ್ಷೇತ್ರದಲ್ಲಿ ಹಾನಿಯಾದ ಕಾರಣ ಅಂದಾಜು 13,000 ಹೆಕ್ಟೇರ್ ಕ್ಷೇತ್ರದಲ್ಲಿ ಮರುಬಿತ್ತನೆಯಾಗಿದ್ದು, ರೈತರು ಪರ್ಯಾಯವಾಗಿ ಮುಸುಕಿನ ಜೋಳ ಮತ್ತು ಹತ್ತಿ ಬಿತ್ತನೆ ಮಾಡಿದ್ದಾರೆ. ಈ ಕಾರಣಕ್ಕಾಗಿ ಮತ್ತು ರೈತರು ವಿವಿಧ ಬೆಳೆಗಳಿಗೆ ಶಿಫಾರಸಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ರಸಗೊಬ್ಬರವನ್ನು ಬಳಸುತ್ತಿರುವುದರಿಂದ ಯೂರಿಯಾ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಉಂಟಾಗಿರುತ್ತದೆ” ಎಂದರು.

ಸಭೆಯಲ್ಲಿ ಜಿಲ್ಲೆಯ ಜಂಟಿ ಕೃಷಿ ಇಲಾಖಾ ಉಪವಿಭಾಗಾಧಿಕಾರಿ ಶಾಲಂ ಹುಸೇನ, ಉಪಕೃಷಿ ನಿರ್ದೇಶಕ ಸಂದೀಪ ಹಾಗೂ ಜಯಶ್ರೀ ಹಿರೇಮಠ ಸೇರಿದಂತೆ ಎಲ್ಲ ತಾಲೂಕಿನ ತಹಶೀಲ್ದಾರರು ಹಾಗೂ ಸಹಾಯಕ ಕೃಷಿ ನಿರ್ದೇಶಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X