ಧಾರವಾಡ | ಅವಳಿನಗರ ಬೈಪಾಸ್ ರಸ್ತೆ ಕಾಮಗಾರಿ ಶೀಘ್ರ ಮುಗಿಸುವಂತೆ ಜಿಲ್ಲಾಧಿಕಾರಿ ಸೂಚನೆ

Date:

ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ 6 ಲೇನ್‍ದ (ಷಟ್‍ಪಥ) ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆಯ 30.60 ಕಿ.ಮೀ. ಅಭಿವೃದ್ಧಿ ಪಡಿಸಿ, ರಸ್ತೆ ನಿರ್ಮಿಸಲು ಗುತ್ತಿಗೆದಾರರನಿಗೆ 2025 ರ ಸಪ್ಟೆಂಬರ್‍ವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಇಲ್ಲಿಯವರೆಗೆ ಶೇ. 73.89 ರಷ್ಟು ಪ್ರಗತಿಯಾಗಿದ್ದು, ಉಳಿದ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ 2026 ರವರೆಗೆ ಕಾಲಾವಕಾಶ ಕೇಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಗುತ್ತಿಗೆದಾರರು ಮನವಿ ಸಲ್ಲಿಸಿದ್ದು, ಪ್ರಸ್ತುತ ಕಾಮಗಾರಿ ತೀವ್ರಗತಿಯಲ್ಲಿ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.

- Advertisement -

ನ.12ರ ಮಧ್ಯಾಹ್ನ ಹುಬ್ಬಳ್ಳಿ ಮತ್ತು ಧಾರವಾಡ ಬೈಪಾಸ್ ರಸ್ತೆ (ನರೇಂದ್ರ ಟೋಲ್‍ದಿಂದ) ಕಾಮಗಾರಿ ಪ್ರಗತಿ ಪರಿಶೀಲನೆ ಮಾಡಿ, ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಹುಬ್ಬಳ್ಳಿ ಮತ್ತು ಧಾರವಾಡ ನಡುವಿನ 30.60 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಕಾಮಗಾರಿಯು ಪ್ರಗತಿಯಲ್ಲಿದೆ. 2023 ರ ಆರಂಭಗೊಂಡಿದ್ದ ಕಾಮಗಾರಿಯು ಸೆಪ್ಟೆಂಬರ್ 2025 ರೊಳಗೆ ಪೂರ್ಣಗೊಳ್ಳಬೇಕಿತ್ತು. ಈ ಮಹತ್ವದ ಯೋಜನೆಯು ಶೇ. 75 ರಷ್ಟು ಪೂರ್ಣಗೊಂಡಿದೆ. ಉಳಿದ ಶೇ. 15 ರಷ್ಟು ಕಾಮಗಾರಿಯನ್ನು ಆದಷ್ಟು ಬೇಗ ನಿಗದಿತ ಸಮಯದೊಳಗೆ ಮುಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಈ ಕಾಮಗಾರಿಯು ರೂ.580 ಕೋಟಿ ಮೊತ್ತದ್ದಾಗಿದ್ದು, ಇದರಲ್ಲಿ ರಸ್ತೆಗಳ ಅಗಲೀಕರಣ, ಸೇತುವೆಗಳ ನಿರ್ಮಾಣ ಮತ್ತು ಮಳೆನೀರು ನಿರ್ವಹಣೆಯನ್ನು ಒಳಗೊಂಡಿದೆ. ಈ ಯೋಜನೆಯಡಿ, ಈಗಾಗಲೇ 62 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸಾರ್ವಜನಿಕರು, ರೈತರು ಮತ್ತು ಸ್ಥಳೀಯರ ಬೇಡಿಕೆಗಳನ್ನು ಪರಿಗಣಿಸಿ, ಕೆಲವು ಕಡೆಗಳಲ್ಲಿ ಸರ್ವಿಸ್ ರಸ್ತೆಗಳನ್ನು ಅಗಲೀಕರಣಗೊಳಿಸಲಾಗುವುದು. ಹೆಚ್ಚುವರಿಯಾಗಿ, ಮಳೆನೀರು ಹೆಚ್ಚಾಗಿ ಹರಿಯುವ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಈ ಹೆಚ್ಚುವರಿ ಕಾಮಗಾರಿಗಳಿಗಾಗಿ ಸುಮಾರು 23 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಗತ್ಯವಿದೆ. ಸದ್ಯ ಈ ಭೂಸ್ವಾಧೀನ ಪ್ರಕ್ರಿಯೆಯು ನಡೆಯುತ್ತಿದೆ ಎಂದು ತಿಳಿಸಿದರು.

ಮಾರ್ಚ್ 2026 ರ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾಡಳಿತವು ಸೂಕ್ಷ್ಮವಾಗಿ ಗಮನಿಸುತ್ತಿದೆ. ಮಾಸಿಕ ಪ್ರಗತಿ ವರದಿಗಳನ್ನು ಸಲ್ಲಿಸಲಾಗುತ್ತಿದ್ದು, ಕಾಮಗಾರಿಯ ವೇಗವನ್ನು ನಿರ್ಧರಿಸಲಾಗುತ್ತಿದೆ. ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಳ್ಳಲು ಮತ್ತು ಹಾನಿಗೊಳಗಾದ ಭಾಗಗಳನ್ನು ಸರಿಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು. ತಾಂತ್ರಿಕ ಅಥವಾ ನಿರ್ಮಾಣಕ್ಕೆ ಸಂಬಂಧಿತ ಸಮಸ್ಯೆಗಳು ಎದುರಾದಲ್ಲಿ, ಅವುಗಳನ್ನು ತಕ್ಷಣವೇ ಸರಿಪಡಿಸಲು ನಾವು ಸೂಚನೆ ನೀಡಿದ್ದೇವೆ. ರಸ್ತೆ ನಿರ್ಮಾಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು.

ಇದನ್ನೂ ಓದಿ ಧಾರವಾಡ | ಚರಸ್ ಮಾದಕ ಪದಾರ್ಥ ಅಕ್ರಮವಾಗಿ ಮಾರಾಟ; ಓರ್ವನ ಬಂಧನ

ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನ ಅಧಿಕಾರಿ ದೇವರಾಜ ಆರ್., ಯೋಜನಾ ನಿರ್ದೇಶಕ ಭುವನೇಶಕುಮಾರ, ಧಾರವಾಡ ತಹಶೀಲ್ದಾರ ಡಾ.ಡಿ.ಎಚ್.ಹೂಗಾರ, ಗುತ್ತಿಗೆದಾರ ಕಂಪನಿಯ ಯೋಜನಾ ನಿರ್ದೇಶಕ ಮನೋಜ ತಿವಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಜಿಲ್ಲಾಡಳಿತದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...