ಧಾರವಾಡ | ಏಡ್ಸ್ ಬಗ್ಗೆ ಭಯ ಬೇಡ; ಜಾಗೃತಿ ಅಗತ್ಯ; ಏಡ್ಸ್ ಮುಕ್ತ ಜಿಲ್ಲೆ ಮಾಡಲು ಶ್ರಮಿಸಲು ಜಿಲ್ಲಾಧಿಕಾರಿ ಕರೆ

Date:

ಏಡ್ಸ್ ರೋಗದ ಬಗ್ಗೆ ಭಯ ಬೇಡ. ಮುಂಗ್ರಾತೆ, ಜಾಗೃತಿ, ಅರಿವು ಅಗತ್ಯವಾಗಿದೆ. ಧಾರವಾಡ ಜಿಲ್ಲೆಯಲ್ಲಿ ಏಡ್ಸ್ ರೋಗಿಗಳ ಪ್ರಮಾಣ, ಹರಡುವಿಕೆ ಇಳಿಮುಖವಾಗಿದ್ದು, ಈಗ ಜಿಲ್ಲೆಯಲ್ಲಿ ಏಡ್ಸ್ ಪಾಜಿಟಿವಿಟಿ ದರ ಶೇ. 0.38 ರಷ್ಟಿದೆ. ಇದನ್ನು ಶೂನ್ಯಕ್ಕೆ ಇಳಿಸಿ, ಧಾರವಾಡ ಜಿಲ್ಲೆಯನ್ನು ಏಡ್ಸ್ಸ್ ಮುಕ್ತ ಜಿಲ್ಲೆಯಾಗಿ ಮಾಡಲು ಎಲ್ಲರೂ ಶ್ರಮಿಸೋಣ, ಅದಕ್ಕಾಗಿ ಅಗತ್ಯ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಸಂಘಟಿಸೋಣ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಶ್ವ ಏಡ್ಸ್ಸ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ಬಾವುಟ ತೋರಿ, ಚಾಲನೆ ನೀಡಿ, ಮಾತನಾಡುತ್ತಾ, ಎಚ್.ಐ.ವಿ ಮತ್ತು ಏಡ್ಸ್ ಕಾಯಿಲೆಯು ಕಳೆದ 40 ವರ್ಷಗಳಿಂದ ಮಾನವ ಜನಾಂಗವನ್ನು ಕಾಡುತ್ತಿದೆ. ಏಡ್ಸ್ ರೋಗವನ್ನು ಸಮಾಜದಿಂದ ಸಂಪೂರ್ಣವಾಗಿ ತೊಲಗಿಸಲು ಜಿಲ್ಲಾ ಮಟ್ಟದಿಂದ ತಾಲೂಕು ಹಾಗೂ ಗ್ರಾಮ ಮಟ್ಟದವರೆಗೆ ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದರು.

- Advertisement -

ಏಡ್ಸ್ ಕುರಿತು ಜನಜಾಗೃತಿಗಾಗಿ ಐಇಸಿ ಕಾರ್ಯಕ್ರಮಗಳ ಮೂಲಕ ಜಿಲ್ಲೆಯ ಎಲ್ಲ ತಾಲೂಕು, ಗ್ರಾಮಗಳಲ್ಲಿ ಜಾನಪದ ಕಲಾ ತಂಡಗಳ ಮೂಲಕ ಅರಿವು ಮೂಡಿಸಿ, ಮನೆಮನೆಗೆ ಮಾಹಿತಿ ತಲುಪಿಸಲಾಗುತ್ತಿದೆ. ಕರಪತ್ರ, ಪೊಸ್ಟರ್, ಬಿತ್ತಿಪತ್ರ ಮತ್ತು ಮಾಧ್ಯಮಗಳ ಮೂಲಕ ಏಡ್ಸ್ ಕುರಿತು ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ. ಯುವ ಸಮೂಹ ಕೇಂದ್ರಿಕರಿಸಿ, ವಿವಿಧ ರೀತಿಯ ಅರಿವು ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಧಾರವಾಡ ಜಿಲ್ಲೆಯಲ್ಲಿ ಸಮಗ್ರ ಆಪ್ತಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳು 11, ಎಪ್-ಐಸಿಟಿಸಿ ಇರುವ ಪ್ರಾಥಮಿಕ ಆರೋಗ್ಯಕೇಂದ್ರಗಳು 32, ಪಿಪಿಪಿ ಕೇಂದ್ರ 1, ಪೂರ್ಣ ಪ್ರಮಾಣದ ಏ.ಆರ್.ಟಿ ಚಿಕಿತ್ಸಾ ಕೇಂದ್ರಗಳು 2, ಲೈಂಗಿಕ ಸಂಪರ್ಕದ ರೋಗಗಳ ಚಿಕಿತ್ಸಾ ಕೇಂದ್ರಗಳು 2, ರಕ್ತ ನಿಧಿ ಕೇಂದ್ರಗಳು 10, ಬೆಂಬಲ ಮತ್ತು ಆರೈಕೆ ಕೆಂದ್ರಗಳು ಸೇರಿ ವಿವಿಧ 5 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಏಡ್ಸ್ ಮತ್ತು ಎಚ್‍ಐವಿ ಸೋಂಕಿತರಿಗೆ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಪರೀಕ್ಷೆ, ಉಚಿತ ಚಿಕಿತ್ಸೆ, ಉಚಿತ ಔಷಧಿ, ಆರೈಕೆ ನೀಡಲಾಗುತ್ತಿದೆ. ಸೋಂಕಿತ ಅನಾಥ ಮತ್ತು ಅಪಾಯದ ಅಂಚಿನಲ್ಲಿರುವ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಅಗತ್ಯ ಕ್ರಮ ವಹಿಸಿದ್ದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ವಿಶೇಷ ಪಾಲನಾ ಯೋಜನೆಯಡಿ ಇಲ್ಲಿಯವರೆಗೆ 2,037 ಮಕ್ಕಳಿಗೆ ಸೌಲಭ್ಯ ನೀಡಲಾಗಿದೆ. ಎಚ್‍ಐವಿ, ಏಡ್ಸ್‍ದೊಂದಿಗೆ ಬದಕುತ್ತಿರುವ 371 ಜನರಿಗೆ ಅನ್ನ ಅಂತ್ಯೊದಯ ಕಾರ್ಯಕ್ರಮದಲ್ಲಿ ನೆರವು ನೀಡಲಾಗಿದ್ದು, ರಾಜೀವ ಗಾಂಧಿ ಗ್ರಾಮೀಣ ವಸತಿ ಯೋಜನೆಯಡಿ 476 ಜನರಿಗೆ ವಸತಿ ಸೌಲಭ್ಯ ನೀಡಲು ಫಲಾನುಭವಿಗಳಾಗಿ ಆಯ್ಕೆ ಮಾಡಲಾಗಿದೆ. ವೃತಿ ಕೌಶಲ್ಯ ಸೇರಿದಂತೆ ವಿವಿಧ ಸರಕಾರಿ ಸೌಲಭ್ಯಗಳನ್ನು ಪೂರೈಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್.ದೊಡ್ಡಮನಿ ಮಾತನಾಡಿ, ಎಚ್‍ಐವಿ, ಏಡ್ಸ್ ಸೋಂಕಿತರಿಗೆ, ಭಾದಿತರಿಗೆ ಸಮಾಜದಲ್ಲಿ ಮಾನಸಿಕ ಬೆಂಬಲ ಸೀಗಬೇಕು. ಅಗತ್ಯ ಚಿಕಿತ್ಸೆ ದೊರಕಿಸಲು ನೇರವಾಗಬೇಕು. ಕಾನೂನು ಸೇವೆಗಳ ಪ್ರಾಧಿಕಾರದಿಂದ ಎಚ್‍ಐವಿ ಭಾದಿತರಿಗೆ ಉಚಿತ ಕಾನೂನು ಅರಿವು-ನೆರವು ನೀಡಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ.ಹೊನಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ರವೀಂದ್ರ ಬೋವೆರ ಸ್ವಾಗತಿಸಿದರು. ಐಇಸಿ ವಿಭಾಗದ ಅಧಿಕಾರಿ ಬಿ.ಆರ್.ಪತ್ತಾರ ಕಾರ್ಯಕ್ರಮ ನಿರೂಪಿಸಿದರು. ಜಾನಪದ ಕಲಾವಿದ ಶಂಭಯ್ಯ ಹಿರೇಮಠ ನೇತೃತ್ವದ ಸಿವೈಸಿಡಿ ಜಾನಪದ ಕಲಾ ತಂಡದಿಂದ ಜಾನಪದ ರೂಪಕ ಪ್ರದರ್ಶಿಸಲಾಯಿತು.

ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾ ಆರೋಗ್ಯ ಇಲಾಖೆ ವಿವಿಧ ಕಾರ್ಯಕ್ರಮ ಅಧಿಕಾರಿಗಳು, ತಾಲೂಕ ವೈದ್ಯಾಧಿಕಾರಿಗಳು, ಸರ್ಕಾರೇತರ ಸಂಸ್ಥೆಯ ಸದಸ್ಯರು, ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿವಿಧ ಪಿಯು, ಪದವಿ, ನಸಿರ್ಂಗ್ ಮತ್ತು ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ ಧಾರವಾಡ | ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಗ್ರಹಿಸಿ ಪ್ರತಿಭಟನೆ; ಉದ್ಯೋಗಾಕಾಂಕ್ಷಿ ಹೋರಾಟಗಾರರ ಬಂಧನ

ಏಡ್ಸ್ ಕುರಿತು ಜನಜಾಗೃತಿ ಜಾಥಾನಡಿಗೆಯು ಡಿಎಚ್‍ಓ ಕಚೇರಿಯಿಂದ ಆರಂಭಗೊಂಡು, ಧಾರವಾಡ ಹಳೆ ಬಸ್ ನಿಲ್ದಾಣ, ವಿವೇಕಾನಂದ ಸರ್ಕಲ್, ಆಲೂರು ವೆಂಕಟರಾವ ವೃತ್ತ ಮೂಲಕ ಡಿಎಚ್‍ಓ ಕಚೇರಿಗೆ ತಲುಪಿತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವರಗುಡ್ಡ ಸೀಮಾಂತರದಲ್ಲಿ ₹11.94 ಲಕ್ಷ ಮೌಲ್ಯದ 23.89 ಕೆ.ಜಿ. ಗಾಂಜಾ ಜಪ್ತಿ: ಆರೋಪಿ ಬಂಧನ

ದೇವದುರ್ಗ ತಾಲೂಕಿನ ದೇವರಗುಡ್ಡ ಸೀಮಾಂತರದಲ್ಲಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಬೆಳೆದಿದ್ದ...

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...