ಧಾರವಾಡ | ಡಾ. ಪಂಚಾಕ್ಷರಿ ಹಿರೇಮಠ ಮಾನವೀಯತೆ ಧ್ವನಿಯಾಗಿದ್ದರು: ಡಾ. ಎಸ್. ಪಿ. ಪದ್ಮಪ್ರಸಾದ

Date:

ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ ಬಹುಭಾಷಾ ವಿಶಾರದರು ಮಾತ್ರವಲ್ಲದೆ, ಅಂತರಾಷ್ಟ್ರೀಯ ಮಟ್ಟದ ವಿದ್ವಾಂಸರು. ಅವರು ಮಾನವೀಯತೆ ಹಾಗೂ ಪ್ರಾಮಾಣಿಕತೆಯ ಧ್ವನಿಯಾಗಿದ್ದರು ಎಂದು ತುಮಕೂರಿನ ಸಾಹಿತಿ ಡಾ. ಎಸ್. ಪಿ. ಪದ್ಮಪ್ರಸಾದ ಹೇಳಿದರು.

- Advertisement -

ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ, ಡಾ. ಪಂಚಾಕ್ಷರಿ ಹಿರೇಮಠ ಅವರ 93ನೇ ಜನ್ಮದಿನದ ಪ್ರಯುಕ್ತ ಡಾ. ಪಂಚಾಕ್ಷರಿ ಹಿರೇಮಠ ಅವರ “ಆತ್ಮಸಖಿ ತುಂಬು ಹೃದಯ ಬಟ್ಟಲನ” ಹಾಗೂ “ಕಾಶ್ಮೀರದ ಮಹಾಯೋಗಿನಿ ಲಲ್ಲೇಶ್ವರಿ” ಎರಡು ಕೃತಿ ಲೋಕಾರ್ಪಣೆ ಮಾಡಿ ಗ್ರಂಥ ಪರಿಚಯಿಸಿ ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ...

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ ಮುನ್ನೆಲೆಗೆ ಬಂದಿರುವ ಹೆಸರು. ಇತಿಹಾಸದ ನಿರೂಪಣೆ, ರಂಗಭೂಮಿಯ ಬಳಕೆ, ಧಾರ್ಮಿಕ ಮತ್ತು ರಾಜಕೀಯ ವಿಚಾರಗಳ ಅಭಿವ್ಯಕ್ತಿ ಹಾಗೂ ಕೋಮು ಸೌಹಾರ್ದದ...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಡಾ. ಪಂಚಾಕ್ಷರಿ ಹಿರೇಮಠ ಒಬ್ಬ ಭಾವಜೀವಿ. ಸಂವೇದನಾಶೀಲರು. ಭಕ್ತಿಭಾವದಿಂದ ಬದುಕಿದವರು.  ಪ್ರಬಂಧ, ಕಥೆ, ವಿಮರ್ಶೆ ಹಾಗೂ ಅನುವಾದ ಹೀಗೆ ಸಾಹಿತ್ಯದ ವಿವಿಧ ಕ್ಷೇತ್ರದಲ್ಲಿ ಶ್ರದ್ಧೆಯಿಂದ ಸಾಹಿತ್ಯ ಕೃಷಿ ಮಾಡಿದ ಮೇರು ವಿದ್ವಾಂಸರು. ಪ್ರೀತಿಯೇ ಅವರ ಸಾಹಿತ್ಯದ ಜೀವಾಳವಾಗಿತ್ತು. ಅವರು ಶರಣ್ಯಭಾವ ಹಾಗೂ ಶರಣಭಾವದವರು. ಬರೆದಂತೆ ಬದುಕಿದವರು. ಅವರ ಬರವಣಿಗೆ ಬರೀ ಅಕ್ಷರಗಳಲ್ಲ, ಸಾರ್ಥಕ ಬದುಕಿನ ಸೂತ್ರಗಳು. ಒಂದು ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ ಅವರು ಅನುವಾದ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅನನ್ಯ.

ಹೈದ್ರಾಬಾದ ಕರ್ನಾಟಕದ ವಿಮೋಚನೆ ಸೇರಿದಂತೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಮಹಾನ್ ದೇಶಭಕ್ತರು. ಅವರ ಬರಹಗಳಲ್ಲಿ ಪ್ರೀತಿ, ವಿನಯತೆ, ಸೌಹಾರ್ಧತೆ, ನೋವು, ಕುಟುಂಬವತ್ಸಲತೆ, ಸರಳತೆ, ಸತ್ಯನಿಷ್ಠೆಗಳಿವೆ. ಅವರು ತಮ್ಮ ನಡೆ-ನುಡಿಗಳಲ್ಲಿ ಇನ್ನೂ ಜೀವಂತವಾಗಿದ್ದಾರೆ. ಸತ್ಯ ಹಾಗೂ ನೈತಿಕತೆಗಳೇ ಅವರ ಜೀವನದ ಉಸಿರಾಗಿದ್ದವು ಎಂದು ಹೇಳಿದರು.

ಪ್ರೊ. ಮಲ್ಲಿಕಾರ್ಜುನ ಹಿರೇಮಠ ಮಾನತಾಡಿ, ಡಾ. ಪಂಚಾಕ್ಷರಿ ಹಿರೇಮಠ ಎಲ್ಲರಂತೆ ಬದುಕದೇ ಎಲ್ಲರಿಗಾಗಿ ಬದುಕಿದ ಸಾರ್ಥಕ ಬದುಕಿನ ಪುಣ್ಯಪುರುಷರು. ಹೃದಯ ವೈಶಾಲ್ಯತೆಯ ಅವರು ಎಲ್ಲರ ಹೃದಯ ಹೃದಯಗಳನ್ನು ಕೂಡಿಸುವ ಕೆಲಸ ಮಾಡಿದರು. ಅವರದು ಸೌಹಾರ್ದತೆಯ ಸಾರ್ಥಕ ಬದುಕು ಎಂದರು.

ದತ್ತಿದಾನಿ ಮೃತ್ಯುಂಜಯ ಹಿರೇಮಠ ಮಾತನಾಡಿದರು. ಇದೇ ಸಂದರ್ಭದಲ್ಲಿ ಗಣ್ಯರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕ.ವಿ.ವ. ಸಂಘದ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಶಂಕರ ಕುಂಬಿ ಉಪಸ್ಥಿತರಿದ್ದರು. ಲಿಂಗಯ್ಯ ಹಿರೇಮಠ ಪ್ರಾರ್ಥಿಸಿದರು. ಡಾ. ಜಿನದತ್ತ ಹಡಗಲಿ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ, ಮಾತನಾಡಿದರು. ಶಿವಾನಂದ ಭಾವಿಕಟ್ಟಿ ನಿರೂಪಿಸಿದರು. ಸತೀಶ ತುರಮರಿ ವಂದಿಸಿದರು.

ಶ್ರೀನಿವಾಸ ವಾಡಪ್ಪಿ, ವೀರಣ್ಣ ಒಡ್ಡೀನ, ಡಾ. ಧನವಂತ ಹಾಜವಗೋಳ, ಶಾಂತಾದೇವಿ ಹಿರೇಮಠ, ಜಯದೇವ ಹಿರೇಮಠ, ವಿಜಯಶ್ರೀ ಹಿರೇಮಠ, ಸರೋಜಾ ಹಿರೇಮಠ, ಬಿ.ಎಸ್. ಶಿರೋಳ, ವಿಜಯಕಮಾರ ಡಂಬಳ, ಮಾರ್ಕಂಡೇಯ ದೊಡಮನಿ, ಅನ್ನದಾನಿ ಹಿರೇಮಠ ಸೇರಿದಂತೆ ಹಿರೇಮಠ ಪರಿವಾರದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...