ಧಾರವಾಡ | ಬೆಳೆ ಹಾನಿಯಾದ ರೈತರ ಕರಡು ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಸೆ.7 ಕೊನೆಯ ದಿನ

Date:

Advertisements

ಕಳೆದ ಆಗಸ್ಟ್‌ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಧಾರವಾಡ ಜಿಲ್ಲೆಯಾದ್ಯಂತ ಸಾಕಷ್ಟು ಪ್ರಮಾಣದ ಬೆಳೆಹಾನಿಯಾಗಿರುವುದು ವರದಿಯಾಗಿದೆ. ಈ ವರದಿಯನ್ವಯ ಬೆಳೆ ಹಾನಿಯಾದ ರೈತರ ಕರಡು ಪಟ್ಟಿಯನ್ನು ಜಿಲ್ಲಾಡಳಿತ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್‌ 7ರೊಳಗಾಗಿ ಸಲ್ಲಿಸಲು ಕೋರಿದೆ.

2025-26ನೇ ಸಾಲಿನಲ್ಲಿ ಪ್ರವಾಹ ಹಾಗೂ ಅತೀವೃಷ್ಠಿಯಿಂದ ಆಗಸ್ಟ್ ತಿಂಗಳಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಉಂಟಾದ ಬೆಳೆಹಾನಿಗೆ ಸಂಬಂಧಿದಂತೆ, ಪರಿಹಾರವನ್ನು ಪಾವತಿಸುವ ಕುರಿತು ಜಂಟಿ ಸಮೀಕ್ಷೆಯನ್ನು ಜರುಗಿಸಲಾಗಿದೆ. ಜಂಟಿ ಸಮೀಕ್ಷೆಯ ಪರಿಶೀಲನಾ ವರದಿಯಂತೆ ಒಟ್ಟು 93,496.98 ಹೆಕ್ಟೇರ್ ಕ್ಷೇತ್ರಗಳಲ್ಲಿ ಬೆಳೆ ಹಾನಿಯಾದ ರೈತರ ಕರಡು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಧಿಕಾರಿಗಳ ಕಚೇರಿ, ಸಂಬಂಧಿಸಿದ ತಹಶೀಲ್ದಾರರ ಕಚೇರಿ, ಸಂಬಂಧಿಸಿದ ಗ್ರಾಮ ಪಂಚಾಯತ್ ಕಚೇರಿ, ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಅಂತರ್ಜಾಲ https://dharwad.nic.in/en/document-category/disaster-management/ ದಲ್ಲಿ ಈಗಾಗಲೇ ಪ್ರಕಟಿಸಲಾಗಿದೆ. ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ತಮ್ಮ ಲಿಖಿತ ಆಕ್ಷೇಪಣೆಗಳನ್ನು ಸಂಬಂಧಿಸಿದ ತಾಲೂಕಿನ ತಹಶೀಲ್ದಾರ, ಕೃಷಿ ಅಥವಾ ತೋಟಗಾರಿಕಾ ಕಚೇರಿಗಳಲ್ಲಿ ಹಾಗೂ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಸೆ.7ರ ಸಂಜೆ 5 ಗಂಟೆ ಒಳಗಾಗಿ ಸಲ್ಲಿಸಬೇಕು.

ಧಾರವಾಡ ತಾಲೂಕಿನಲ್ಲಿ 16,910.21 ಹೆಕ್ಟೇರ್ ಕೃಷಿ ಕ್ಷೇತ್ರ ಮತ್ತು 895 ಹೆಕ್ಟೇರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 17,805.21 ಹೆಕ್ಟೇರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಹುಬ್ಬಳ್ಳಿ ತಾಲೂಕಿನಲ್ಲಿ 17,998.32 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾನಿಯಾಗಿವೆ. ಮತ್ತು ಹುಬ್ಬಳ್ಳಿ ನಗರ ತಾಲೂಕಿನಲ್ಲಿ 1,303.29 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾನಿಯಾಗಿವೆ. ನವಲಗುಂದ-23,993.98 ಹೆಕ್ಟೇರ್ ಕೃಷಿ ಕ್ಷೇತ್ರ ಮತ್ತು 2,323.37 ಹೆಕ್ಟೇರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 26,317.35 ಹೆಕ್ಟೇರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಅಣ್ಣಿಗೇರಿ ತಾಲೂಕಿನಲ್ಲಿ 15,324.87 ಹೆಕ್ಟೇರ್ ಕೃಷಿ ಕ್ಷೇತ್ರ ಮತ್ತು 1063 ಹೆಕ್ಟೇರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 16,387.87 ಹೆಕ್ಟೇರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ. ಕುಂದಗೋಳ ತಾಲೂಕಿನಲ್ಲಿ 13,440.23 ಹೆಕ್ಟೇರ್ ಕೃಷಿ ಕ್ಷೇತ್ರ ಮತ್ತು 244.71 ಹೆಕ್ಟೇರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 13,684.94 ಹೆಕ್ಟೇರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಇದನ್ನೂ ಓದಿ: ಧಾರವಾಡ | ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ, ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯಲ್ಲಿ 88,970.90 ಹೆಕ್ಟೇರ್ ಕೃಷಿ ಕ್ಷೇತ್ರದ ಬೆಳೆಗಳು ಮತ್ತು 4,526.08 ಹೆಕ್ಟೇರ್ ತೋಟಗಾರಿಕೆ ಪ್ರದೇಶದ ಬೆಳೆಗಳು ಸೇರಿದಂತೆ ಒಟ್ಟು 93,496.98 ಹೆಕ್ಟೇರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಸೆಪ್ಟೆಂಬರ್ 7ರಂದು ಸಂಜೆ 5 ಗಂಟೆವರೆಗೆ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸಿ, ಯಾದಿಯನ್ನು ಅಂತಿಮಗೊಳಿಸಲಾಗುವುದು. ನಿಗದಿಪಡಿಸಿದ ಅವಧಿಯ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X