ಧಾರವಾಡ | ಆಗಸ್ಟ್ 1 ರಂದು ವ್ಯಸನಮುಕ್ತ ದಿನಾಚರಣೆ

Date:

Advertisements

ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಆಗಸ್ಟ್‌ 1ರಂದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪೊಲೀಸ್ ಆಯುಕ್ತಾಲಯ, ಜಿಲ್ಲಾ ಪೊಲೀಸ್ ಇಲಾಖೆ, ಡಿಮ್ಹಾನ್ಸ್ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ʼವ್ಯಸನಮುಕ್ತ ದಿನಾಚರಣೆ ಹಾಗೂ ವಿಚಾರ ಸಂಕಿರಣʼ ಆಯೋಜಿಸಲಾಗಿದೆ.

ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆಯ ಸಭಾಭವನದಲ್ಲಿ ಆ.1ರ ಬೆಳಗ್ಗೆ 10:30 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಮುರುಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ. ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತಿ ವಹಿಸುವರು. ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

Advertisements

ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕರು ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕರು ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ.ಎನ್.ಗಣೇಶ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್‍ಪೀರ್ ಎಸ್.ಖಾದ್ರಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.

ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕಗಳಾಗಿ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರ ಜ್ಯೋತಿ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಧಾರವಾಡ | ವಿದ್ಯಾರ್ಥಿಗಳು ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಬೇಕು: ಡಾ. ರುದ್ರೇಶ್ ಮೇಟಿ ಸಲಹೆ

ಮಾನಸಿಕ ಆರೋಗ್ಯ ವರ್ಧನೆ ಮತ್ತು ವ್ಯಸನ ಮುಕ್ತತೆಯ ಉಪಾಯಗಳು ಎಂಬ ವಿಷಯದ ಕುರಿತು ಧಾರವಾಡ ಡಿಮ್ಹಾನ್ಸ್ ಮನೋವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಹೇಶ ಎಂ. ಹಾಗೂ ಇಲ್ಲಕಲ್ಲ ಡಾ. ಮಹಾಂತ ಅಪ್ಪಗಳು ಕೈಗೊಂಡ ವ್ಯಸನ ಮುಕ್ತ ಆಂದೋಲನ ಎಂಬ ವಿಷಯ ಕುರಿತು ಧಾರವಾಡ ಗುರುಬಸವ ಮಹಾಂತ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ ತುಂಬರಗುದ್ದಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ, ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ (ಡಿಮ್ಹಾನ್ಸ್) ನಿರ್ದೇಶಕ ಡಾ. ಅರುಣಕುಮಾರ ಸಿ., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭ ಪಿ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X