ಧಾರವಾಡ | ತಪಾಸಣೆ ವೇಳೆ ದಾಖಲೆ ಇಲ್ಲದ ಮೂರು ಲಕ್ಷ ರೂ. ನಗದು ಪತ್ತೆ

Date:

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಬಳಿಯ ಸುಳ್ಳದ ರೋಡ್ ಕ್ರಾಸ್ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಮೂರು ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಎಆರ್‌ಒ ಡಾ. ಈಶ್ವರ ಉಳ್ಳಾಗಡ್ಡಿ ಮಾಹಿತಿ ನೀಡಿದ್ದಾರೆ.

ಮಾ.18ರ ಸಂಜೆ ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರನ್ನು ಕರ್ತವ್ಯದಲ್ಲಿದ್ದ, ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ, ಎಸ್.ಎಸ್.ಟಿ ಹಾಗೂ ಎಫ್.ಎಸ್.ಟಿ 3ರ, ನಾಗಾ ನಾಯ್ಕ, ಪೊಲೀಸ್ ಸಿಬ್ಬಂದಿ ತಡೆದು ತಪಾಸಣೆ ಮಾಡಿದಾಗ ಕಾರಿನಲ್ಲಿ ಓಂಪ್ರಕಾಶ್ ಎನ್ನುವವರಿಗೆ ಸೇರಿದ್ದ, ದಾಖಲೆ ಇರದ 3,82,000 ರೂ.ನಗದು ಇರುವುದು ಕಂಡುಬಂದಿದೆ.

ನಿಯಮಾನುಸಾರ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಆಗಿರುವ ಹು-ಧಾ ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಂಸಿಸಿ ನೋಡೆಲ್ ಅಧಿಕಾರಿ ರವೀಂದ್ರ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಕಿರಣ್ ಕುಮಾರ, ಎಎಸ್ಐ ಆರ್.ಜಿ. ನಾಯ್ಕ, ಎಎಸ್‌ಐ ಜಿ.ಸಿ. ಕಡೇಮನಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಶಪಡಿಸಿಕೊಂಡಿರುವ ದಾಖಲೆ ಇಲ್ಲದ ಹಣವನ್ನು ತಕ್ಷಣ ಖಜಾನೆಯಲ್ಲಿ ಡೆಪಾಜಿಟ್ ಮಾಡಲಾಗಿದ್ದು, ಮುಂದಿನ ಕ್ರಮಕ್ಕಾಗಿ ಜಿಲ್ಲಾ ಸೀಜರ್ ಕಮಿಟಿಗೆ ವರದಿ ಸಲ್ಲಿಸಲಾಗಿದೆ ಎಂದು ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...

ದೇಶಪ್ರೇಮಿ ಯುವಜನರ ಸಮಾವೇಶ | ಪಕೋಡಾ ಪ್ರದರ್ಶಿಸಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ

ದೇಶವನ್ನು ಅಭಿವೃದ್ಧ ಪತದಲ್ಲಿ ಕೊಂಡೊಯ್ಯುತ್ತೇವೆ ಎಂದಿದ್ದ ಮೋದಿ, ವರ್ಷಕ್ಕೆ 2 ಕೋಟಿ...

ವಿಜಯಪುರ | ಉಳ್ಳವರ ಸೇವೆ ಮಾಡುತ್ತಿರುವ ಬಂಡವಾಳಶಾಹಿ ಪಕ್ಷಗಳನ್ನು ತಿರಸ್ಕರಿಸಿ: ಸುನೀತ್‌ಕುಮಾರ

ಕೇವಲ ಉಳ್ಳವರ ಸೇವೆ ಮಾಡುತ್ತಿರುವ ಬಂಡವಾಳಶಾಹಿ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗಳನ್ನು ತಿರಸ್ಕರಿಸಿ,...

ಬೀದರ್ | ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ

ಔರಾದ ತಾಲೂಕಿನ ಲಾಧಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು ,...