ಧಾರವಾಡ | ಲ್ಯಾಪ್‌ಟಾಪ್ ಹಾಗೂ ಶಿಷ್ಯ ವೇತನ ವಿತರಣೆಗೆ ಡಿವಿಪಿ ಆಗ್ರಹ

Date:

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸತತ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಲ್ಯಾಪ್‌ಟಾಪ್ ವಿತರಣೆಯ ಕಾರ್ಯವನ್ನು ಪುನರಾರಂಭಿಸಬೇಕು. ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ಬೆಂಗಳೂರಿನಲ್ಲಿ ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿರುವ ವಿನಯ್ ಕುಲಕರ್ಣಿ ಅವರ ನಿವಾಸದಲ್ಲಿ ಶಾಸಕರನ್ನು ಭೇಟಿ ಮಾಡಿದ ವಿದ್ಯಾರ್ಥಿ ಮುಖಂಡರು, “ಕರ್ನಾಟಕ ವಿಶ್ವವಿದ್ಯಾಲಯದ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ ಮಾಡುವ ಕಾರ್ಯಕ್ರಮವನ್ನು ನಾಲ್ಕು ವರ್ಷಗಳಿಂದ ಸ್ಥಗಿತಗೊಳಿಸಲಾಗಿದೆ. ಕಾರ್ಯಕ್ರಮವನ್ನು ಪುನರಾರಂಭಿಸಿ, ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಸೌಲಭ್ಯ ಕಲ್ಪಿಸಿಕೊಡಬೇಕು. ವಿವಿಧ ಪದವಿ, ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಮಂಜೂರು ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಎಲ್ಲ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಮಾಸಿಕ ಶಿಷ್ಯವೇತನವನ್ನು ಇಂದಿನ ಮಾರುಕಟ್ಟೆಯ ದರವನ್ನು ಗಮನದಲ್ಲಿಟ್ಟುಕೊಂಡು 5,000ಕ್ಕೆ ಹೆಚ್ಚಿಸಬೇಕು. ಕಾನೂನು ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿದ್ದ ಮಾಸಿಕ ಶಿಷ್ಯವೇತನವನ್ನು ಪುನಃ ಪ್ರಾರಂಭಿಸಬೇಕು. ಸ್ನಾತಕೋತ್ತರ ವಿದ್ಯಾರ್ಥಿಗಳು ಮಾಡುವ ಕ್ಷೇತ್ರಕಾರ್ಯ ಅಧ್ಯಯನ ವರದಿಗಾಗಿ 10,000 ರೂ.ವರೆಗೆ ದೊರೆಯುವಂತಾಗಬೇಕು. ವಿಶ್ವವಿದ್ಯಾಲಯದಲ್ಲಿ ಅಭ್ಯಾಸಿಸುತ್ತಿರುವ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ, ಡಿಪ್ಲಮಾ ಹಾಗೂ ವಸತಿ ನಿಲಯದ ಪ್ರವೇಶ ಶುಲ್ಕಗಳನ್ನು ಹೆಚ್ಚಿಸಿದ್ದು, ಅದನ್ನು ಕಡಿತಗೊಳಿಸಬೇಕು. ಮ್ಯಾನೇಜ್ಮೆಂಟ್ ಕೋಟಾದಡಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಹಾಗೂ ಶಿಷ್ಯವೇತನ ಮಂಜೂರು ಮಾಡಬೇಕು” ಎಂದು ಆಗ್ರಹಿಸಿದರು.

ಶಾಸಕರ ಭೇಟಿ ವೇಳೆ ಸಂಘಟನೆಯ ಧಾರವಾಡ ಜಿಲ್ಲಾ ಅಧ್ಯಕ್ಷ ಹನುಮಂತ ದಾಸರ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಹಾಸಟ್ಟಿ, ಸಂಗಮೇಶ ಬನಸೋಡೆ, ಕುಮಾರ್ ತಳವಾರ ಹಾಗೂ ಬಸವರಾಜ್. ಎಚ್. ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...