ಧಾರವಾಡ | ʼನಮ್ಮ ಕ್ಲಿನಿಕ್‌ʼನಲ್ಲಿ ಉದ್ಯೋಗ: ಗುತ್ತಿಗೆ ಆಧಾರಿತ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ

Date:

Advertisements

ಧಾರವಾಡ ಜಿಲ್ಲೆಯ ‘ನಮ್ಮ ಕ್ಲಿನಿಕ್‍’ಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಖಾಲಿಯಿರುವ ಹುದ್ದೆಗಳಿಗೆ ಜುಲೈ 23ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಭಾಂಗಣದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದ್ದು, ಎಂಬಿಬಿಎಸ್ ವೈದ್ಯಕೀಯ ಅಧಿಕಾರಿ 14 ಹುದ್ದೆಗಳು, ಪ್ರಯೋಗಾಲಯ ತಾಂತ್ರಿಕ 4 ಹುದ್ದೆ, ಸ್ಟಾಫ್ ನರ್ಸ್ 1, ಆರೋಗ್ಯ ನಿರೀಕ್ಷಕ ಅಧಿಕಾರಿ 2 ಹೀಗೆ ಒಟ್ಟು 21 ಹುದ್ದೆಗಳಿಗೆ ಸಂದರ್ಶನ ಜರುಗಿಸಲಾಗುತ್ತದೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಚಿಂತಕ ರಂಜಾನ್ ದರ್ಗಾಗೆ ʼಮರುಳ ಶಂಕರದೇವ ಪ್ರಶಸ್ತಿ’ ಪ್ರದಾನ

Advertisements

ಸದರಿ ನೇಮಕಾತಿಗೆ ಸಂಬಂಧಿಸಿದ ವಿವರಗಳು, ರೋಸ್ಟರ್ ಮತ್ತು ವಿದ್ಯಾರ್ಹತೆಯ ಮಾಹಿತಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸೂಚನಾಫಲಕದಲ್ಲಿ ಪ್ರಕಟಿಸಲಾಗಿದ್ದು, ನಮ್ಮ ಕ್ಲಿನಿಕ್‍ಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ, ಹುದ್ದೆಗಳಿಗೆ ಸಂಬಂಧಿಸಿದ ವಿವರಗಳಿಗಾಗಿ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿಗಳ ಕಚೇರಿ, ಎನ್‌ಎಚ್‌ಎಂ ವಿಭಾಗವನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X