ಧಾರವಾಡ | ಒಂದೇ ತಾಯಿ ಮಕ್ಕಳಾದರೂ; ಬೇರೆ-ಬೇರೆ ಜಾತಿ ಮಾಡಿಕೊಂಡಿದ್ದೇವೆ: ಗೀತಾ.ಸಿ.ಡಿ

Date:

ಸಮಾಜ ಕಟ್ಟುವ ಕಾರ್ಯ ನಿಜಶರಣ ಅಂಬಿಗರ ಚೌಡಯ್ಯನವರು ಮಾಡಿದ್ದಾರೆ. ನಾವೆಲ್ಲ ಒಂದೇ ತಾಯಿಯ ಮಕ್ಕಳಾದರು ನಾವು ಬೇರೆ ಬೇರೆ ಕೆಲಸಗಳಿಂದ ಬೇರೆ ಬೇರೆ ಜಾತಿ ಮಾಡಿಕೊಂಡಿದ್ದೇವೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.

- Advertisement -

ಅವರು ಜ. 21ರಂದು ಮಧ್ಯಾಹ್ನ ನಗರದ ಆಲೂರು ವೆಂಕಟರಾವ್ ಸಾಂಸ್ಕಂತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಜರುಗಿದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, 12 ನೇ ಶತಮಾನದ ಬಸವಣ್ಣನವರ ಸಮಕಾಲಿನ ಶ್ರೇಷ್ಠ ವಚನಕಾರರಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರೂ ಒಬ್ಬರು. ಇಂತಹ ಮಾಹಾನ್ ವ್ಯಕ್ತಿಗಳ ಆದರ್ಶಗಳನ್ನು ಇಂದಿನ ಸಮಾಜ ಅಳವಡಿಸಿಕೊಳ್ಳಬೇಕು‌ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಜಿಲ್ಲಾ ಗಂಗಮತಸ್ಥರ ಹಿತರಕ್ಷಕ ಸಂಘದ ಅಧ್ಯಕ್ಷ ಅರವಿಂದ ಏಗನಗೌಡರ ಅವರು ಮಾತನಾಡಿ, ಅಂಬಿಗರ ಚೌಡಯ್ಯನವರು ಶ್ರೇಷ್ಠ ವಚನಕಾರ ಆಗಿದ್ದರು. ಶರಣರು ನಿಜವಾದ ಧರ್ಮ, ತತ್ವ, ಸಿದ್ದಾಂತ, ನೇರ ನುಡಿಗಳಿಂದಾಗಿ ಪ್ರಸಿದ್ಧರಾಗಿದ್ದರು. ಯಾವುದೇ ಜಾತಿ ಭೇದ ಇಲ್ಲವೆಂದು ಬದುಕಿದರು. ಜಾತಿ ತಾರತಮ್ಯ, ಮೌಢ್ಯದ ವಿಚಾರಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಇವರ ವಿಚಾರವನ್ನು ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಒಪ್ಪಿಕೊಂಡು ನಿಮ್ಮಿಂದ ಕಲಿಯುವುದು ಬಹಳಷ್ಟಿದೆ. ನೀವೂ ನಿಜವಾದ ನಿಜ ಶರಣರು ಆಗಿದ್ದರಿ ಎಂದು ಶರಣರು ಭಾವಿಸಿ, ಗೌರವಿಸುತಿದ್ದರು ಎಂದರು.

ಕಲಘಟಗಿಯ ಚಿಂತಕ ಹನುಮಂತಪ್ಪ ಸರಾವರಿ ಅಂಬಿಗರ ಚೌಡಯ್ಯನವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರಿ ಆರ್.ಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಧಾರವಾಡ ಜಿಲ್ಲಾ ಗಂಗಮತಸ್ಥರ ನೌಕಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗುರು ಮತ್ತೂರ, ಜಿಲ್ಲಾ ಗಂಗಮತಸ್ಥರ ಹಿತರಕ್ಷಕ ಸಂಘದ ಉಪಾಧ್ಯಕ್ಷ ಗುರಪ್ಪ ಸಿದ್ದಪ್ಪ ಜಿಡ್ಡಿ, ಜಿಲ್ಲಾ ಗಂಗಮತಸ್ಥರ ಹಿತರಕ್ಷಕ ಸಂಘದ ಗೌರವಾಧ್ಯಕ್ಷ ಮನೋಜಕುಮಾರ ಕರ್ಜಗಿ, ಕಾರ್ಯದರ್ಶಿ ಅಶೋಕಕುಮಾರ ಬೆಸ್ತ, ಖಜಾಂಚಿ ಯಲ್ಲಪ್ಪ ಸುಣಗಾರ, ತಾಲೂಕ ಅಧ್ಯಕ್ಷ ಮಂಜುನಾಥ ಭೀಮಕ್ಕನವರ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಮುದಾಯದ ಗುರು ಹಿರಿಯರು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...