ಶಾಲಾ-ಕಾಲೇಜುಗಳಲ್ಲಿ ಮತ್ತು ಹೊರ ಆವರಣದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣು ಮಕ್ಕಳಿಗೆ ಚುಡಾಯಿಸಿದ, ತೊಂದರೆ ನೀಡಿದ, ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪರೇಡ್ ನಡೆಸಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೆಣ್ಣು ಮಕ್ಕಳನ್ನು ಚುಡಾಯಿಸಿದರೆ ರೌಡಿ ಶೀಟರ್ ಹಾಕಿ ಗಡಿಪಾರು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಆರೋಪಿತರಿಗೆ ತಮ್ಮ ವರ್ತನೆಯನ್ನು ಸುಧಾರಿಸಿಕೊಳ್ಳಲು ತಿಳಿಸಿ, ಒಂದುವೇಳೆ ಮತ್ತೇ ಹೆಣ್ಣುಮಕ್ಕಳನ್ನು ಚುಡಾಯಿಸುವಂತಹ ಕೃತ್ಯದಲ್ಲಿ ಭಾಗಿಯಾದರೆ ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ, ರೌಡಿಶೀಟ್ ತೆರೆದು, ಗಡಿಪಾರಿನಂತಹ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ವರದಿ ಓದಿದ್ದೀರಾ? ಧಾರವಾಡ | 6 ಮಕ್ಕಳ ಅಪಹರಣ: ಹೆತ್ತ ತಾಯಂದಿರೇ ಮಾಡಿದ್ದು ಏಕೆ?
ಹೆಣ್ಣುಮಕ್ಕಳನ್ನು ಚುಡಾಯಿಸುವಂತಹ ಘಟನೆಗಳು ನಡೆದಲ್ಲಿ ಪೋಷಕರು ದೂರು ನೀಡಲು ಹಿಂಜರಿದರೆ ಪೊಲೀಸ್ ಇಲಾಖೆಯಿಂದಲೇ ಸು-ಮೋಟೋ (ಸ್ವಯಂ ಪ್ರೇರಿತ) ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.