ಧಾರವಾಡ | ಸಿಗರೇಟ್’ನ ಕಿಡಿ ತಗುಲಿ ಸುಟ್ಟು ಕರಕಲಾದ ರೈತನ ಬಣಿವೆ

Date:

ದನ ಕರುಗಳಿಗಾಗಿ ಶೇಖರಿಸಿ ಇಡಲಾಗಿದ್ದ, ಕಡ್ಲಿ, ಗೋಂಜಾಳ ಹೊಟ್ಟಿನ
ಬಣಿವೆ ಕಿಡಿಗೇಡಿಗಳ ಸಿಗರೇಟ್’ನ ಕಿಡಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಂದಾಜು 50.000 ಸಾವಿರ ಬೆಲೆಬಾಳುವ ಹೊಟ್ಟು(ಮೇವು) ನಾಶವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಜ. 5ರಂದು ನಡೆದಿದೆ.

- Advertisement -

ಅನಾಹುತ ಸಂಭವಿಸಿದ ತಕ್ಷಣ ಹತ್ತಿರದಲ್ಲೇ ಇದ್ದ ಬಣಿವೆಯ ಮಾಲೀಕರಾದ ಬಸಪ್ಪ ಮಳಲಿ ಮತ್ತು ಮಲ್ಲೇಶಪ್ಪ ಮಳಲಿ ಅವರು ಕೂಡಲೇ ಗ್ರಾಪಂ ಅನ್ನು ಸಂಪರ್ಕಿಸಿದ್ದಾರೆ. ತಕ್ಷಣ ಕುಂದಗೋಳ ಅಗ್ನಿ ಶಾಮಕ ದಳವು ಧಾವಿಸಿ ಬಂದು ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ಶಮನಗೊಳಿಸಿದ್ದಾರೆ. ಪಕ್ಕದಲ್ಲಿಯ ರೈಲ್ವೆ ನಿಲ್ದಾಣದ ಬಳಿಯಿರುವ MSIL ಕೇಂದ್ರದಿಂದ ಕುಡಿಯುವವರು ಬಣಿವೆಗಳ ಹತ್ತಿರದಲ್ಲಿ ಬಂದು ಕುಳಿತುಕೊಳ್ಳುವುದೇ ಇಂತಹ ಅನಾಹುತಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಬಗ್ಗೆ ಹಲವಾರು ಬಾರಿ ಗ್ರಾಪಂ’ಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವನ್ನು ತೆಗೆದುಕೊಂಡಿಲ್ಲ. ಗ್ರಾಮ ಲೆಕ್ಕಾಧಿಕಾರಿಗಳ ಗಮನಕ್ಕೆ ತಂದರು ಉಪಯೋಗವಾಗಿಲ್ಲ. ಸತತವಾಗಿ 4 ವರ್ಷಗಳಿಂದ ಇಂತಹ ಬೆಂಕಿ ಅವಘಢ ಸಂಭವಿಸುತ್ತಿದೆ. ಹತ್ತಿರದಲ್ಲಿರುವ MSIL ಕೇಂದ್ರವನ್ನು ಬೇರೆಕಡೆಗೆ ಸ್ಥಳಾಂತರ ಮಾಡುವುದೇ ಇದಕ್ಕೆಲ್ಲ ಸೂಕ್ತ ಪರಿಹಾರ ಎಂದು ಸ್ಥಳೀಯರು ಅಗ್ರಹಿಸುತ್ತಿದ್ದಾರೆ.

ಈ ಕುರಿತು ಈದಿನ.ಕಾಮ್ ಜತೆಗೆ ಗ್ರಾಪಂ ಅಧ್ಯಕ್ಷ ಗಿರೀಶಗೌಡ ಪಾಟೀಲ ಮಾತನಾಡಿ, ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಬಸಪ್ಪ ಮಳಲಿ ಅವರ 50.000 ಬೆಲೆಬಾಳುವ ಹೊಟ್ಟು ಸೊಪ್ಪು ಸಂಪೂರ್ಣ ಸುಟ್ಟಿದೆ. ಬೆಂಕಿ ಜ್ವಾಲೆ ಹೆಚ್ಚಾಗಿದ್ದ ಕಾರಣ ಕುಂದಗೋಳದ ಅಗ್ನಿ ಶಾಮಕ ದಳಕ್ಕೆ ಸಂಪರ್ಕಿಸಿದ್ದೇವು. ಬೆಂಕಿ ಶಮನವಾಗಿದೆ ಎಂದರು.

ಮಾಲೀಕರಾದ ಬಸಪ್ಪ ಮಳಲಿ ಮಾತನಾಡಿ, ದನ ಕರುಗಳಿಗೆಂದು ಶೇಖರಿಸಿ ಇಟ್ಟಿದ್ದ ಹೊಟ್ಟು ಸುತ್ತಿದೆ. ಬೆಂಕಿ ಹೊತ್ತಿಕೊಂಡಾಗ ನಾನು ಹತ್ತಿರದಲ್ಲೇ ಇದ್ದೆ. ನೋಡುವಷ್ಟರಲ್ಲಿ ಬಹಳಷ್ಟು ಬೆಂಕಿ ಆವರಿಸಿತು. ಸಾರಾಯಿ ಕುಡಿಯುತ್ತ ಕುಳಿತಿದ್ದ ನಾಲ್ವರು ಓಡಿ ಹೋದರು. ಇದೀಗ ದನಗಳಿಗೆ ಸೊಪ್ಪು ಎಲ್ಲಿಂದ ತರಬೇಕು ಎಂದು ತಮ್ಮ ನೋವನ್ನು ತೋಡಿಕೊಂಡರು.

ಇದನ್ನೂ ಓದಿ ಧಾರವಾಡ | ಬೈಕ್ ನಿಯಂತ್ರಣ ತಪ್ಪಿ ಇಬ್ಬರ ಸಾವು

ರೈಲ್ವೆ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ, ಸುಂಕದವರ ಶಾಲೆಯ ಹಿಂಭಾಗದಲ್ಲಿ ಅಂದರೆ; ಹರಕುಣಿರೈಲ್ವೆ ಸೇತುವೆ ಹತ್ತಿರ ಈ ಘಟನೆ ನಡೆದಿದೆ. ಕುಡುಕರು, ಸಿಗರೇಟು ಸೇದುವವರಿಂದ ಇಂತಹ ಅನಾಹುತಕ್ಕೆ ಕಡಿವಾಣ ಹಾಕಬೇಕು. ಸಂತ್ರಸ್ತ ರೈತರಿಗೆ ಪರಿಹಾರ ದೊರಕಿಸಿ ಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...