ಧಾರವಾಡ | ಕಳಸಾ ಬಂಡೂರಿ ಕಾಮಗಾರಿ ಶೀಘ್ರ‌ ಪ್ರಾರಂಭಕ್ಕೆ ರೈತರ ಒತ್ತಾಯ

Date:

Advertisements

ಶೀಘ್ರದಲ್ಲಿ ಕಳಸಾ ಬಂಡೂರಿ ಕಾಮಗಾರಿಯನ್ನು ಟೆಂಡರ್ ಕರೆದು ಕೆಲಸ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಮಹದಾಯಿ ವೇದಿಕೆ ವತಿಯಿಂದ ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ನವಲಗುಂದ ಬಸ್ ನಿಲ್ದಾಣದಿಂದ ನೀಲಮ್ಮನ ಕೆರೆ ವೃತ್ತದ ವರೆಗೆ ಮಹದಾಯಿ ಕಳಸಾ-ಬಂಡೂರಿ ಹೋರಾಟಗಾರರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಸುಧೀರ್ ಸಾಹುಕಾರ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಶೀಘ್ರ ಮಹದಾಯಿ ಕಾಮಗಾರಿ ಆರಂಭಿಸುವಂತೆ ಮನವಿ ಸಲ್ಲಿಸಿದರು.

ಈ ವೇಳೆ ಪ್ರತಿಭಟನಾ ನಿರತ ರೈತರು ಮಾತನಾಡಿ,‌ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತಕುಲಕ್ಕೆ ಆಶ್ವಾಸನೆ ಕೊಟ್ಟು ಕೊಟ್ಟು ಬರೀ ಅನ್ಯಾಯ ಮಾಡುತ್ತಿವೆ ಹೊರತು ರೈತರ ಬೇಡಿಕೆ ಈಡೇರಿಸಿಲ್ಲ. ಸತತವಾಗಿ ಸುರಿದ ಭಾರಿ ಮಳೆಯಿಂದ ಬೆಳೆಗಳು ನಾಶವಾಗಿದ್ದು ಈವರೆಗೂ ಯಾವುದೇ ಪರಿಹಾರ ಬಂದಿಲ್ಲ ಅಧಿವೇಶನ ಮುಗಿಯುವದರೊಳಗಾಗಿ ಪರಿಹಾರ ಮತ್ತು ವಿಮೆಯನ್ನು ರೈತರ ಖಾತೆಗೆ ಹಾಕಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿ ಕಾಲುವೆಗಳ ನವೀಕರಣ ಜೊತೆಗೆ ಸಿಡಿ, ಡ್ರಾಪುಗಳು ಮತ್ತು ಸೇವಾ ರಸ್ತೆಗಳೇ ಇಲ್ಲ. ಕ್ಷೇತ್ರದ ಶಾಸಕರಿಗೆ ಹಾಗೂ ಉಸ್ತುವಾರಿ ಮಂತ್ರಿಗಳಿಗೆ ಅನೇಕ ಬಾರಿ ತಿಳಿಸಿದರೂ ಕೂಡಾ ಕ್ರಮ ಜರುಗಿಸಿಲ್ಲ. ಅಲ್ಲದೇ ನಗರ ಸೇರಿದಂತೆ ಇತರೆ ತಾಲೂಕು ಭಾಗಗಳಲ್ಲಿ ಗೋವಿನಜೋಳ, ಹತ್ತಿ ಖರೀದಿ ಕೇಂದ್ರ ತೆರೆಯಬೇಕು, ಅಗ್ನಿಶಾಮಕ ಠಾಣೆ ಸ್ಥಾಪನೆ, ಸರ್ಕಾರಿ ಪ್ರೌಢಶಾಲೆ, ಸರಕಾರಿ ಪದವಿ ಪೂರ್ವ ಕಾಲೇಜು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಪ್ರೀತಿಗೆ ಒಪ್ಪದ ಯುವತಿ: ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ಪ್ರತಿಭಟನೆಯಲ್ಲಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ಯಲ್ಲಪ್ಪ ದಾಡಿಬಾಯಿ, ಮಲ್ಲೇಶ ಉಪ್ಪಾರ, ಬಸನಗೌಡ ಹುಣಸಿಕಟ್ಟೆ, ಎಸ್ ಬಿ ಪಾಟೀಲ ಗಂಗಪ್ಪ ಸಂಗಟಿ, ಗೋವಿಂದರೆಡ್ಡಿ ಮೊರಬದ, ಬಾಂಬೆ ಮೇಸ್ತ್ರಿ, ಶಿವಪ್ಪ ಸಂಗಳ, ಸಿದ್ದಲಿಂಗಪ್ಪ ಹಳ್ಳದ, ಮುರಗೇಪ್ಪ ಪಲ್ಲೇದ, ರವಿ ತೋಟದ, ವಿಕ್ರಮ ಕುರಿ ಸೇರಿದಂತೆ ಅನೇಕ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X