ಧಾರವಾಡ | ಚುನಾವಣಾ ಅಭ್ಯರ್ಥಿಗಳಿಗೆ ‘ಛೀಮಾರಿ’ಯ ಸ್ವಾಗತ ನೀಡಿ; ರೈತ ಸಂಘದ ಕರೆ

Date:

ಬರಗಾಲದ ಬೇಗೆಯಲ್ಲಿ ಬಳಲುತ್ತಿರುವ ರೈತರು ಕುಡಿಯುವ ನೀರು ಮೇವು ಸಿಗುತ್ತಿಲ್ಲ, ಹಳ್ಳಿಗಳಲ್ಲಿ ಮತ ಕೇಳಲು ಬರುವ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಛೀಮಾರಿ ಹಾಕಿ ಸ್ವಾಗತ ನೀಡಿ ಎಂದು ರೈತರಿಗೆ ರೈತ ಸಂಘ ಕರೆ ನೀಡಿದೆ.

ರಾಜ್ಯದಲ್ಲಿ ಬರಗಾಲ ಕಾಡುತ್ತಿದೆ. ಹಳ್ಳಿಗಳಲ್ಲಿ ಕುಡಿಯುವ ನೀರು ದನಗಳಿಗೆ ಮೇವು ಸಿಗುತ್ತಿಲ್ಲ, ರಾಜಕೀಯ ಪಕ್ಷಗಳು ಅಧಿಕಾರ ಹಿಡಿಯಲು ಡೊಂಬರಾಟ ಆಡುತ್ತಿವೆ. ಅಧಿಕಾರಿಗಳು ಚುನಾವಣಾ ಗುಂಗಿನಲ್ಲಿದ್ದಾರೆ. ರೈತರು ಸೊರಗುತ್ತಿದ್ದಾರೆ ಹಳ್ಳಿಗಳಿಗೆ ಮತ ಕೇಳಲು ಬರುವ ರಾಜಕೀಯ ಪಕ್ಷಗಳಿಗೆ, ಅಭ್ಯರ್ಥಿಗಳಿಗೆ  ಛೀಮಾರಿ ಹಾಕಿ ಸ್ವಾಗತ ಮಾಡಿ ಸಮಸ್ಯೆ ಬಗ್ಗೆ ಗಮನ ಸೆಳೆಯಬೇಕು ಎಂದು ಧಾರವಾಡದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘ ಹೇಳಿದೆ.

ದೇಶದಲ್ಲಿ ಶೇ. 70ರಷ್ಟು ಇರುವ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಬೆಲೆ ನಿಗದಿ ಮಾಡಿ ಎಂದರೆ, ರೈತರ ಮೇಲೆ ಗೋಲಿಬಾರ್ ಮಾಡುತ್ತಾರೆ. ಆದರೆ, ಶೇ. 2ರಷ್ಟು ಇರುವ ಸರ್ಕಾರಿ ನೌಕರರಿಗೆ ಶೇ. 58ರಷ್ಟು ಸಂಬಳ ಏರಿಕೆ ಮಾಡಬೇಕು ಎನ್ನುತ್ತ ವರದಿ ಸಲ್ಲಿಸುತ್ತಾರೆ. ಇಂತಹ ಪುರುಷಾರ್ಥಕ್ಕೆ ರೈತರು ಎಂಪಿಗಳನ್ನ ಗೆಲ್ಲಿಸಬೇಕೆ? ದೇಶದಲ್ಲಿ ಅನ್ನ ನೀಡುವ ರೈತನನ್ನು ಅನಾಥರಾಗಿ ಮಾಡಬಾರದು. ಅನ್ನದಾತರು ದೇಶಕ್ಕೆ ಆಶ್ರಯದಾತರಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವರ್ಷಾನುಗಟ್ಟಲೇ ಹೋರಾಟ ಮಾಡಿದ ರೈತರ ಒತ್ತಾಯವನ್ನು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಂಎಸ್‌ಪಿ ಗ್ಯಾರಂಟಿ ಕಾನೂನು ಜಾರಿ ಮಾಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದು ಘೋಷಣೆ ಮಾಡಿದೆ. ಈ ಬಗ್ಗೆ ಬಿಜೆಪಿ ಪಕ್ಷ ಅಥವಾ ಪ್ರಧಾನಿ ಪ್ರತಿಕ್ರಿಯೆ ನೀಡದಿದ್ದರೆ ದೇಶದ ರೈತರು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸುತಿದ್ದೇವೆ. ಬರಗಾಲದ ಸಂಕಷ್ಟದಲ್ಲಿರುವ ಕಬ್ಬು ಸರಬರಾಜು ರೈತರಿಗೆ ಸಕ್ಕರೆ ಕಾರ್ಖಾನೆಗಳು  ಮೂರು ತಿಂಗಳಿಂದ ಕಬ್ಬುಸರಬರಾಜು ಮಾಡಿದ ರೈತರಿಗೆ ಹಣ ಕೊಟ್ಟಿಲ್ಲ ರಾಜಕೀಯ ಪಕ್ಷಗಳ ಎಂಎಲ್ಎ, ಮಂತ್ರಿಗಳೇ ಬಾಕಿ ಉಳಿಸಿಕೊಂಡಿದ್ದಾರೆ. ಇವರಿಗೆ ನಾಚಿಕೆ ಇಲ್ಲವೇ ಎಂದು ಪ್ರಶ್ನಿಸಿದ ಅವರು. ಒಂದು ವಾರದಲ್ಲಿ ಹಣ ನೀಡದಿದ್ದರೆ ಕಾರ್ಖಾನೆಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸುತಿದ್ದೇವೆ ಎಂದರು.

ರಾಜ್ಯ ಸರ್ಕಾರ ಗ್ಯಾರಂಟಿ ಗುಂಗಿನಲ್ಲಿ ತೇಲಾಡುತ್ತಿದೆ, ರೈತರು ಬಲಿ ಪಶುಗಳಾಗುತ್ತಿದ್ದಾರೆ, ಜಿಲ್ಲಾಧಿಕಾರಿಗಳು ಚುನಾವಣೆ ಗುಂಗಿನಲ್ಲಿ ನಿರತರಾದರೆ ರೈತರ ಗತಿ ಏನು? ರೈತರ ಸಂಕಷ್ಟ ರಾಜಕೀಯ ಪಕ್ಷಗಳಿಗೆ ಅರಿವಾದರೆ, ರೈತರಿಗೆ ನ್ಯಾಯ ಸಿಗಲು ಸಾಧ್ಯ ಅದಕ್ಕಾಗಿ ಹಳ್ಳಿಗಳಲ್ಲಿ ಚಿಮಾರಿ ಸ್ವಾಗತ ನೀಡಿ ಎಂದು ಕರೆ ನೀಡುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವೀರನಗೌಡ ಪಾಟೀಲ್ ರಾಜ್ಯಕಾರ್ಯಧ್ಯಕ್ಷ, ಉಪಾಧ್ಯಕ್ಷ ಎಂ.ವಿ ಗಾಡಿ, ಎನ್‌.ಎಚ್. ದೇವಕುಮಾರ್, ಹತ್ತಳ್ಳಿ ದೇವರಾಜ್, ಉಳುವಪ್ಪ ಬಳಗೇರಾ, ಪರಶುರಾಮ್ ಎತ್ತಿನಗುಡ್ಡ, ನಿಜಗುಣ ಕೆಲಗೇರಿ ಮಹೇಶ್ ಬೆಳಗಾಂಕರ್, ವಾಸು ದಾಖಪ್ಪನವರ್, ಗುರುಸಿದ್ದಪ್ಪ ಕೋಟಗಿ, ನಾಗೇಂದ್ರ ಜಿವೂಜಿ, ರವಿಕುಮಾರ್, ಎಸ್.ಬಿ. ಸಿದ್ದನಾಳ್, ಶಂಕರ್ ಕಾಜಗಾರ್, ಬರಡನಪುರ ನಾಗರಾಜ್, ಮಾಳಪ್ಪ ಹೊನ್ನಳ್ಳಿ, ಮಲ್ಲೇಶಿ, ಮುಂತಾದವರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...