ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಸರ್. ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 7 ರಂದ ಮಹಾವಿದ್ಯಾಲಯದ ಸಭಾಭವನದಲ್ಲಿ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮಂಜುಳಾ ಎಸ್.ಆರ್. ವಹಿಸಲಿದ್ದು, ಚಿಂತಕ ಶಂಕರ ಹಲಗತ್ತಿ ಉದ್ಘಾಟಿಸುವರು. ಸಾಹಿತಿ ಡಾ. ಸದಾಶಿವ ಮರ್ಜಿ ವಿಶೇಷ ಉಪನ್ಯಾಸ ನೀಡುವರು.
ಯರಿನಾರಾಯಣಪುರದ ಶರೀಫ ದೊಡ್ಡಮನಿ ಮತ್ತು ತಂಡದವರಿಂದ ಜಾಗೃತಿ ಗೀತೆಗಳ ಗಾಯನ ನಡೆಯಲಿದೆ.
ಇದನ್ನು ಓದಿದ್ದೀರಾ? ಧಾರವಾಡ | ಕೇಂದ್ರ ಬಜೆಟ್ ಪ್ರತಿ ಸುಟ್ಟು ಪ್ರತಿಭಟಿಸಿದ ನರೇಗಾ ಕಾರ್ಮಿಕರು
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗಾಯನ, ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಕವನ ವಾಚನ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.