ಜೈಲು ಸಿಬ್ಬಂದಿ ಮತ್ತು ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಘಟನೆಯಲ್ಲಿ ಜೈಲು ಸಿಬ್ಬಂದಿ ಮೋಹನ ಸಿದ್ದಪ್ಪ ಬಡಿಗೇರ ಮತ್ತು ಕೈದಿ ಪ್ರಶಾಂತ ಅಲಿಯಾಸ್ ಪಾಚು ಗಾಯಗೋಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಶಾಂತ್ ಎಂಬಾತ ಬಾಚಣಿಕೆಯನ್ನು ಬಳಸಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರಿಗೆ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ ಎಂದು ವರದಿಯಾಗಿದೆ.
ಮೂರು ತಿಂಗಳ ಹಿಂದೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇಬ್ಬರು ಕೈದಿಗಳು ಹೊಡೆದಾಡಿಕೊಂಡಿದ್ದರು. ಗಲಾಟೆಯಾಗದಂತೆ ಎಚ್ಚರವಹಿಸುವಲ್ಲಿ ವಿಫಲರಾಗಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಜೈಲು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು.