ಧಾರವಾಡ ಜಿಲ್ಲೆಗೆ ಹೊಸದಾಗಿ ಮಂಜೂರಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಲಘಟಗಿ ತಾಲೂಕಿನ ಗಂಜಿಗಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ದಾಖಲಾತಿಗಾಗಿ ಅಗಸ್ಟ್ 22ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಲಘಟಗಿ ತಾಲೂಕಿನ ಗಂಜಿಗಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಕಾಲೇಜಿನ ಪ್ರಾಂಶುಪಾಲರನ್ನು ಅಥವಾ ದೂರವಾಣಿ ಸಂ.7411934749 ಹಾಗೂ 7975156674ಕ್ಕೆ ಸಂಪರ್ಕಿಸಬಹುದು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ: ಶರಾವತಿ ತಗ್ಗು ಪ್ರದೇಶದ ಜನರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ
ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.