ಧಾರವಾಡ | ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರ ಸಾವು

Date:

Advertisements

ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿ ರವಿವಾರ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೃತರನ್ನು ಸುಜಾತಾ ಹಿರೇಮಠ(60), ಗಾಯತ್ರಿ ಮಾಂತನಮಠ(67), ಶಕುಂತಲಾ ಹಿರೇಮಠ(72), ಸಂಪತ್​ ಕುಮಾರಿ(63) ಎಂದು ಗುರುತಿಸಲಾಗಿದ್ದು, ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಧಾರವಾಡ | ಕೊಳಚೆ ಗುಂಡಿಯಲ್ಲೇ ಮುಳುಗಿದ; ಕುಂದಗೋಳದ ಸರ್ಕಾರಿ ಕಛೇರಿಗಳ ಸಂಕೀರ್ಣ ಕಟ್ಟಡ!

Advertisements

ಅಪಘಾತದಲ್ಲಿ ಗಾಯಗೊಂಡಿದ್ದವರ ಪೈಕಿ ಸಂಪತ್ ಕುಮಾರಿ ಮೃತಪಟ್ಟಿದ್ದಾರೆ. ವಿರೇಶ್​ ಹಿರೇಮಠ ಚಿಕಿತ್ಸೆ ಪಡೆಯುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X